AICC president mallikarjun kharge: ಎಐಸಿಸಿ ಅಧ್ಯಕ್ಷರಾಗಿ ನಾಳೆ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ

ನವದೆಹಲಿ: AICC president mallikarjun kharge: ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ನಾಳೆ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ದೆಹಲಿಯಲ್ಲಿ ಅಧಿಕಾರ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು ರಾಜ್ಯದ ಹಲವು ಹಿರಿಯ ಕಾಂಗ್ರೆಸ್ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಮೂಲಕ ಕರ್ನಾಟಕದಿಂದ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ 2ನೇ ವ್ಯಕ್ತಿ ಖರ್ಗೆ ಎಂದು ಗುರುತಿಸಿಕೊಳ್ಳಲಿದ್ದಾರೆ. ಈ ಹಿಂದೆ ರಾಜ್ಯದ ಎಸ್.ನಿಜಲಿಂಗಪ್ಪ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ಕಳೆದ 22 ವರ್ಷಗಳಿಂದ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಗಾಂಧಿ ಮನೆತನ ಬೇರೆಯವರಿಗೆ ಬಿಟ್ಟುಕೊಟ್ಟಿರಲಿಲ್ಲ. ಆದರೆ 22 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಗಾಂಧಿ ಮನೆತನದ ಹೊರತಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅವರು ನಾಳೆ ದೆಹಲಿಯಲ್ಲಿ ಅಧಿಕೃತವಾಗಿ ಎಐಸಿಸಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮೊದಲು ಖರ್ಗೆ ಅವರು ರಾಜ್ಯಸಭೆಯ ಪ್ರತಿಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಎಐಸಿಸಿ ಸ್ಥಾನಕ್ಕೆ ಅಕ್ಟೋಬರ್ 17ರಂದು ನಡೆದ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಗೆಲುವು ಸಾಧಿಸಿದ್ದರು. ಶೇ.96ರಷ್ಟು ಮತದಾನ ನಡೆದಿತ್ತು. ಮತ ಚಲಾಯಿಸಲು ಅರ್ಹರಾದವರ ಪೈಕಿ 9,500 ಕಾಂಗ್ರೆಸ್ ಮತದಾರರು ಮತ ಚಲಾಯಿಸಿದ್ದರು. ಕರ್ನಾಟಕದ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ತಿರುವನಂತಪುರ ಸಂಸದ ಶಶಿ ತರೂರ್ ಅವರ ನಡುವೆ ಸ್ಪರ್ಧೆ ನಡೆದಿತ್ತು. ಚುನಾವಣೆಯಲ್ಲಿ ಖರ್ಗೆ ಅವರು 7897 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರೆ, ಶಶಿ ತರೂರ್ 1,072 ಮತಗಳನ್ನು ಪಡೆದಿದ್ದರು. ಚುನಾವಣೆಗೂ ಮುನ್ನವೇ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜಯ ಸಿಗುತ್ತದೆ, ಅವರೇ ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುತ್ತಾರೆ ಎಂದೇ ವಿಶ್ಲೇಷಿಸಲಾಗಿತ್ತು. ಜನರ ನಿರೀಕ್ಷೆಯಂತೆಯೇ ಮಲ್ಲಿಕಾರ್ಜುನ ಖರ್ಗೆ ಅವರೇ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.

ಇನ್ನು ನಾಳೆ ದೆಹಲಿಯಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೇರಿದಂತೆ ಹಲವು ನಾಯಕರು ಸಮಾರಂಭದಲ್ಲಿ ಭಾಗಿಯಾಗಲು ದೆಹಲಿಗೆ ತೆರಳಲಿದ್ದಾರೆ.

ಇದನ್ನೂ ಓದಿ: feeding stray dogs:‘ಬೀದಿ ನಾಯಿಗಳ ಮೇಲೆ ಪ್ರೀತಿ ಇರುವವರು ಕಂಡಕಂಡಲ್ಲಿ ಆಹಾರ ನೀಡಬೇಡಿ, ಮನೆಗೆ ತಂದು ಸಾಕಿ’ : ಶ್ವಾನಪ್ರಿಯರಿಗೆ ಹೈಕೋರ್ಟ್ ಆದೇಶ

ಇದನ್ನೂ ಓದಿ: Shivamogga violence: ಶಿವಮೊಗ್ಗ ಮತ್ತೆ ಧಗಧಗ: ಜಿಲ್ಲೆಯ 3 ಕಡೆಗಳಲ್ಲಿ ನಿನ್ನೆ ತಡರಾತ್ರಿ ನಡೆದಿದ್ದೇನು..?

AICC president : mallikarjun kharge to take oath tomorrow as congress president at delhi

Comments are closed.