ಪಟ್ಟು ಬಿಡದ ರಮನಾಥ ರೈ, ಗುಟ್ಟು ಬಿಡದ ಹೈಕಮಾಂಡ್; ಬಂಟ್ವಾಳ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಇನ್ನೂ ನಿಗೂಢ !

ಬಂಟ್ವಾಳ : Bantval Assembly constituency : ಹಿಂದುತ್ವದ ಶಕ್ತಿ ಕೇಂದ್ರ ಎನಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರ ಈ ಬಾರಿ ಹಲವು ರೀತಿಯಲ್ಲಿ ಕುತೂಹಲ ಮೂಡಿಸಿದೆ. ಬಿಜೆಪಿಯಿಂದ ರಾಜೇಶ್ ನಾಯಕ್‌ ಅವರಿಗೆ ಟಿಕೇಟ್‌ ಬಹುತೇಕ ಫಿಕ್ಸ್ ಆಗಿದೆ. ಆದರೆ ಕಾಂಗ್ರೆಸ್‌ ನಿಂದ ಈ ಬಾರಿ ಯಾರು ಕಣಕ್ಕೆ ಇಳಿಯಲಿದ್ದಾರೆ ಅನ್ನೋದು ಇನ್ನೂ ಕೂಡ ನಿಗೂಢವಾಗಿಯೇ ಉಳಿದುಕೊಂಡಿದೆ. ಮಾಜಿ ಸಚಿವ ಬಿ.ರಮಾನಾಥ ರೈ 9ನೇ ಬಾರಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದು, ಟಿಕೆಟ್‌ ನೀಡುವಂತೆ ಹೈಕಮಾಂಡ್‌ ಮುಂದೆ ಪಟ್ಟು ಹಿಡಿದಿದ್ದಾರೆ.

ಎಂಟು ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಬಿ.ರಮಾನಾಥ ರೈ ಇದುವರೆಗೆ ಒಟ್ಟು ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಸೇರಿದಂತೆ ಒಟ್ಟು ಎರಡು ಬಾರಿ ಸೋಲನ್ನು ಕಂಡಿದ್ದಾರೆ. ಆದರೆ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ರಮಾನಾಥ ರೈ ಅವರಿಗೆ ಟಿಕೆಟ್‌ ಸಿಗೋದಿಲ್ಲ ಅನ್ನೋ ಮಾತುಗಳು ಕೇಳಿಬಂದಿದ್ದವು. ಆದರೆ ತಾನು 9ನೇ ಬಾರಿಗೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಎಂದು ಮಾಜಿ ಸಚಿವ ರಮಾನಾಥ ರೈ ಪಟ್ಟು ಬಿಡದೆ ಹೇಳಿಕೊಳ್ಳುತ್ತಿದ್ದಾರೆ. ಆದರೆ ಹೈಕಮಾಂಡ್ ಮೂಲಗಳ ಪ್ರಕಾರ ಅವರಿಗೆ ಇನ್ನು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಪಕ್ಷ ಸೂಚನೆ ನೀಡಿಲ್ಲ ಎಂದು ತಿಳಿದುಬಂದಿದೆ.

ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ (Bantval Assembly constituency) ಸಂಬಂಧಿಸಿದಂತೆ ಪಕ್ಷದ ಟಿಕೆಟ್‌ ವಿಚಾರದಲ್ಲಿ ಹೈಕಮಾಂಡ್‌ ಇನ್ನೂ ಕೂಡ ಗುಟ್ಟನ್ನು ಬಿಟ್ಟುಕೊಡುತ್ತಿಲ್ಲ. ಕಾಂಗ್ರೆಸ್‌ ಪಕ್ಷದಿಂದ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳಾಗಿ ಅಶ್ಚಿನ್‌ ಕುಮಾರ್ ರೈ ಹಾಗೂ ಪದ್ಮರಾಜ್‌ ಅವರ ಹೆಸರು ಸಹ ಹೈಕಮಾಂಡ್‌ ಪರಿಶಿಲನೆಯಲ್ಲಿದೆ. ಕಾಂಗ್ರೆಸ್‌ ಪಕ್ಷದ ಮೂಲಗಳ ಪ್ರಕಾರ ಅಶ್ವಿನ್‌ ಕುಮಾರ್‌ ರೈ ಅವರ ಹೆಸರು ಬಲವಾಗಿ ಕೇಳಿಬರುತ್ತಿದೆ.

ಇದೇ ಮೊದಲ ಬಾರಿ ಬಂಟ್ವಾಳದ ಕಾಂಗ್ರೆಸ್‌ ಟಿಕೆಟ್‌ ವಿಚಾರದಲ್ಲಿ ಹೈವೋಲ್ಟೇಜ್‌ ಚರ್ಚೆ ನಡೆಯುತ್ತಿದೆ. ಕ್ಷೇತ್ರದಿಂದ ಯಾರು ಬೇಕಾದರೂ ಅಭ್ಯರ್ಥಿಯಾಗಬಹುದು ಅನ್ನೋದನ್ನು ಕೆಪಿಸಿಸಿ ಹಾಗೂ ಎಐಸಿಸಿ ಮೂಲಗಳು ಸ್ಪಷ್ಟಪಡಿಸಿವೆ. ಮಾಜಿ ಸಚಿವ ಬಿ.ರಮಾನಾಥ ರೈ ಅವರಿಗೆ ನಡೆದಿರುವ ಹಲವು ಸಮೀಕ್ಷೆಗಳು ಕೂಡ ಬಹುತೇಕ ಹಿನ್ನಡೆಯನ್ನೇ ನೀಡಿವೆ ಎನ್ನುತ್ತಿವೆ ಹೈಕಮಾಂಡ್‌ ಮೂಲಗಳು.

ಇದನ್ನೂ ಓದಿ : ಮಧ್ಯಂತರ ವರದಿ ಬಂದ ಕೂಡಲೇ ಸರಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿ : ಸಿಎಂ ಬಸವರಾಜ ಬೊಮ್ಮಾಯಿ

ಇದನ್ನೂ ಓದಿ : Delhi Liquor Scam : ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅರೆಸ್ಟ್ : AAP ಮುಂದಿನ ನಡೆಯೇನು ?

Comments are closed.