ಶಿವಮೊಗ್ಗ: ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಮಾನವೀಯತೆ ಮೆರೆದಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಅನವಟ್ಟಿ ಸಮೀಪದಲ್ಲಿ ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಉಂಟಾಗಿತ್ತು. ಘಟನೆಯಲ್ಲಿ ಇಬ್ಬರು ಮಹಿಳೆಯರು ತೀವ್ರವಾಗಿ ಗಾಯಗೊಂಡಿದ್ದರು. ಇದೇ ಹೊತ್ತಲ್ಲೇ ರಸ್ತೆಯಲ್ಲಿ ತೆರಳುತ್ತಿದ್ದ ಲೋಕೋಪಯೋಗಿ ಸಚಿವರಾದ ಸಿ.ಸಿ. ಪಾಟೀಲ್ ತಕ್ಷಣ ತಮ್ಮ ವಾಹನವನ್ನು ನಿಲ್ಲಿಸಿ ಗಾಯಾಳುಗಳ ರಕ್ಷಣೆಗೆ ಮುಂದಾಗಿ ಮಾನವೀಯತೆ ಮೆರೆದರು.
ಗಾಯಗೊಂಡಿದ್ದ ಇಬ್ಬರು ಮಹಿಳೆಯರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲು ವಾಹನದ ವ್ಯವಸ್ಥೆಯನ್ನು ಮಾಡಿಕೊಟ್ಟಿದ್ದಾರೆ. ಅಲ್ಲದೇ ಆರ್ಥಿಕ ಸಹಕಾರವನ್ನೂ ಮಾಡಿದ್ದಾರೆ. ಸಚಿವರ ಈ ಕಾರ್ಯ ಇದೀಗ ಮೇಚ್ಚುಗೆಗೆ ವ್ಯಕ್ತವಾಗಿದೆ.
ಇದನ್ನೂ ಓದಿ : ಸೆಪ್ಟೆಂಬರ್ 13 ರಿಂದ ವಿಧಾನಸಭಾ ಅಧಿವೇಶನ : ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ
ಇದನ್ನೂ ಓದಿ : ಯುವತಿಯ ನಗ್ನ ವಿಡಿಯೋ ಕಾಲ್‌ಗೆ ಬೆತ್ತಲಾದ ಆಟೋ ಚಾಲಕ : ವಾರದಲ್ಲೇ ವೈರಲ್ ಆಯ್ತು ವಿಡಿಯೋ