ಸದನದಲ್ಲಿ ಪೇಚಿಗೆ ಸಿಲುಕಿದ ಲಕ್ಷ್ಮೀ ಹೆಬ್ಬಾಳ್ಕರ್​ ಬೆಂಬಲಕ್ಕೆ ನಿಂತ ಡಿ.ಕೆ ಶಿವಕುಮಾರ್ : ಸಿಎಂ ಇಲಾಖೆ ಮೇಲೆ ಆರೋಪ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಗೃಹಲಕ್ಷ್ಮೀ ಯೋಜನೆಯ ಕುರಿತಂತೆ ತಪ್ಪು ಲೆಕ್ಕ ಕೊಟ್ಟು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಪೇಚಿಗೆ ಸಿಲುಕಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್​ ಮೇಲೆ ವಿಪಕ್ಷಗಳು ಮುಗಿಬಿದ್ದಿದ್ದು ಈ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್​​ ಸಚಿವೆಯ ಬೆಂಬಲಕ್ಕೆ ನಿಂತಿದ್ದಾರೆ.

ಸದನದಲ್ಲಿ ಗೃಹಲಕ್ಷ್ಮೀ ವಿಚಾರವಾಗಿ ಜಟಾಪಟಿ ಜೋರಾಗುತ್ತಿದ್ದಂತೆಯೇ ಮಧ್ಯಪ್ರವೇಶಿಸಿದ ಡಿಸಿಎಂ ಡಿ.ಕೆ ಶಿವಕುಮಾರ್​, ಈ ವಿಚಾರವಾಗಿ ಸಿಎಂ ಇಲಾಖೆಯನ್ನೇ ದೂರಿದ್ದಾರೆ. ಫೈನಾನ್ಸ್​ ಡಿಪಾರ್ಟ್​ಮೆಂಟ್​ನವರು ಸಕಾಲಕ್ಕೆ ಹಣ ಬಿಡುಗಡೆ ಮಾಡಿಲ್ಲ ಎಂದರೆ ಏನು ಮಾಡೋಕೆ ಆಗತ್ತೆ ಎಂದಿದ್ದಾರೆ. ಈ ಮೂಲಕ ಹಣಕಾಸು ಇಲಾಖೆ ನಿರ್ವಹಣೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಮೇಲೆ ತಪ್ಪು ಹೊರಿಸುವ ಕಾರ್ಯ ಮಾಡಿದ್ದಾರೆ .

ಸದನದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​, 54 ಸಾವಿರ ಕೋಟಿ ರೂಪಾಯಿ ಹಣ ನೀಡಿದ್ದೇವೆ. ಸದನದಲ್ಲಿ ನಾನು ಹೇಳಿರೋದ್ರಿಂದ ಏನಾದ್ರೂ ಬೇಸರವಾಗಿದ್ದಲ್ಲಿ ನಾನು ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ರು. ಈ ವೇಳೆ ಬಿಜೆಪಿ ನಾಯಕ ಸುರೇಶ್​ ಕುಮಾರ್​​ ಮುಗಿಬಿದ್ದಿದ್ದಾರೆ. ಮಧ್ಯಪ್ರವೇಶಿದ ಶರಣಪ್ರಕಾಶ್​ ಪಾಟೀಲ್​ ಮಹಿಳೆಯ ಬಗ್ಗೆ ಈ ರೀತಿ ಎಲ್ಲಾ ಮಾತನಾಡ್ಬೇಡಿ ಅಂತಾ ಹೇಳುವ ಮೂಲಕ ಲಕ್ಷ್ಮೀ ಹೆಬ್ಬಾಳ್ಕರ್​ ಬೆಂಬಲಕ್ಕೆ ನಿಂತಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್​ ಅವರ ಉತ್ತರ ನಮಗೆ ಸಮಾಧಾನ ತಂದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್​. ಅಶೋಕ್​ ಗುಡುಗಿದ್ರು. ಅಲ್ಲದೆ ಸಭಾತ್ಯಾಗ ಮಾಡುವ ನಿರ್ಧಾರ ಘೋಷಿಸಿದ್ದು ಬಿಜೆಪಿ ಹಾಗೂ ಜೆಡಿಎಸ್​ ಎರಡೂ ನಾಯಕರು ಸದನದಿಂದ ಹೊರ ನಡೆದಿದ್ದಾರೆ.

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories