ಪುತ್ತೂರು, ಬಂಟ್ವಾಳ ಸೇರಿ ಈ ಬಾರಿ ಹೊಸ ಮುಖಗಳಿಗೆ ಟಿಕೆಟ್: ಗೌಪ್ಯವಾಗಿ ಹಿರಿಯರಿಗೆ ಖಡಕ್ ಸಂದೇಶ ಕೊಟ್ಟ ಕಾಂಗ್ರೆಸ್ ಹೈಕಮಾಂಡ್

ಮಂಗಳೂರು: ವಿಧಾನಸಭಾ ಚುನಾವಣೆಗೆ (MLA Election 2023) ಮುನ್ನವೇ ಕಾಂಗ್ರೆಸ್ ಪಕ್ಷ ಸಜ್ಜಾಗುತ್ತಿದೆ. ಶತಾಯಗತಾಯ ಈ ಬಾರಿ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಬಹುತೇಕ ಕ್ಷೇತ್ರಗಳಲ್ಲಿ ಗೆಲುವು ದಾಖಲಿಸುವ ನಿಟ್ಟಿನಲ್ಲಿ ಹೊಸ ಮುಖಗಳಿಗೆ ಟಿಕೆಟ್ ನೀಡಲು ನಿರ್ಧರಿಸಿದೆ. ಈ ಕುರಿತು ಬಿಜೆಪಿ ಹಿರಿಯರಿಗೆ ಖಡಕ್ ಸಂದೇಶ ರವಾನಿಸಿದೆ ಎಂದು ಹೈಕಮಾಂಡ್ ಮೂಲಗಳಿಂದ ತಿಳಿದು ಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಮೂಡಬಿದ್ರಿ, ಬೆಳ್ತಂಗಡಿ, ಮಂಗಳೂರು ಉತ್ತರ, ಮಂಗಳೂರು ದಕ್ಷಿಣ , ಸುಳ್ಯ ಕ್ಷೇತ್ರಗಳಿಗೆ ಹೊಸಮುಖಗಳು ಕಾಣಿಸಿಕೊಳ್ಳಲಿದ್ದಾರೆ. ಹೈಕಮಾಂಡ್ ಮೂಲಗಳ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಹಿರಿಯ ನಾಯಕರಿಗೆ ಹೊಸಮುಖವನ್ನು ಕಣಕ್ಕೆ ಇಳಿಸಲಿದ್ದೇವೆ. ಇದಕ್ಕೆ ಸಹಕಾರ ನೀಡುವಂತೆ ಗೌಪ್ಯ ಸಂದೇಶವನ್ನು ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಮೂಡಬಿದ್ರೆಯಿಂದ ಮಿಥುನ್ ರೈ, ಬೆಳ್ತಂಗಡಿಯಿಂದ ರಕ್ಷಿತ್ ಶಿವರಾಂ, ಪುತ್ತೂರಿನಿಂದ ಅಶೋಕ್ ಕುಮಾರ್ ರೈ, ಬಂಟ್ವಾಳದಿಂದ ಪದ್ಮರಾಜ್. ಆರ್, ಮಂಗಳೂರು ಉತ್ತರದಿಂದ ಇನಾಯತ್ ಅಲಿ, ಮಂಗಳೂರು ದಕ್ಷಿಣದಿಂದ ಐವನ್ ಡಿಸೋಜಾ, ಸುಳ್ಯದಿಂದ ನಂದಕುಮಾರ್ ಹೈಕಮಾಂಡ್ ಬಹುತೇಕ ಅಂತಿಮ ಮಾಡಿದೆ ಎಂದು ತಿಳಿದುಬಂದಿದೆ. ಆದರೆ ಕಾಂಗ್ರೆಸ್ ನ ಪ್ರಭಾವಿ ನಾಯಕ ಶಾಸಕ ಯುಟಿ ಖಾದರ್ ಕ್ಷೇತ್ರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿದುಬಂದಿದೆ.

ಒಂದು ಹಿರಿಯರಿಗೆ ನೀಡಿ ಇನ್ನೊಂದು ಕ್ಷೇತ್ರದ ಹಿರಿಯರನ್ನು ಬಿಡಲು ಸಾಧ್ಯವಿಲ್ಲ, ಎಲ್ಲ ಕ್ಷೇತ್ರಗಳಲ್ಲಿ ಬದಲಾವಣೆ ಮಾಡುತ್ತಿವೆ ಎಂಬ ಸಂದೇಶವನ್ನು ಹೈಕಮಾಂಡ್ ರವಾನಿಸಿದೆ ಎಂದು ತಿಳಿದುಬಂದಿದೆ. ಬಂಟ್ವಾಳದಿಂದ ಮಾಜಿ ಸಚಿವ ಮಂತ್ರಿ ರಮನಾಥ ರೈ ವರಿಗೆ ಟಿಕೆಟ್ ನೀಡದಿರಲು ಹೈಕಮಾಂಡ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಪುತ್ತೂರಿನಲ್ಲಿ ಶಕುಂತಲಾ ಶೆಟ್ಟಿ, ಬೆಳ್ತಂಗಡಿಯಲ್ಲಿ ವಸಂತ ಬಂಗೇರ, ಮಂಗಳೂರು ದಕ್ಷಿಣದಲ್ಲಿ ಜಿಆರ್ ಲೋಬೊ, ಮಂಗಳೂರು ಉತ್ತರದಲ್ಲಿ ಮೊಯಿದ್ದೀನ್ ಬಾವ ಅವರಿಗೆ ಟಿಕೆಟ್ ನಿರಾಕರಿಸಿ ಹೊಸ ಮುಖಗಳಿಗೆ ಟಿಕೆಟ್ ನೀಡುವ ಬಗ್ಗೆ ಹೈಕಮಾಂಡ್ ಮೂಲಗಳು ಸ್ಪಷ್ಟಪಡಿಸಿವೆ.

ಕರಾವಳಿ ಭಾಗದಲ್ಲಿ ಕಾಂಗ್ರೆಸ್ ಈ ಬಾರಿ ಗೆಲುವು ದಾಖಲಿಸಲು ಹೊಸ ಮುಖಗಳನ್ನು ಕಣಕ್ಕೆ ಇಳಿಸಬೇಕು ಅನ್ನೋದು ಕಾಂಗ್ರೆಸ್ ಆಂತರಿಕ ಸಮೀಕ್ಷೆಯಿಂದ ಬಯಲಾಗಿದೆ. ಇದೇ ಕಾರಣಕ್ಕೆ ಈ ಬಾರಿ ಹೊಸ ಮುಖಗಳಿಗೆ ಹಿರಿಯರು ಸ್ಥಾನ ಬಿಟ್ಟುಕೊಡಬೇಕು ಅನ್ನೋ ಆಗ್ರಹ ಕೇಳಿಬಂದಿದೆ. ಅಷ್ಟೇ ಅಲ್ಲದೇ ಈ ಕುರಿತು ಕಳೆದ ಎರಡು ವರ್ಷಗಳಿಂದಲೂ ಮಾಜಿ ಸಚಿವ ಅಭಯ್ ಚಂದ್ರ ಜೈನ್ ಆಗ್ರಹಿಸುತ್ತಾ ಬಂದಿದ್ದಾರೆ. ಜೊತೆಗೆ ತಮ್ಮ ಸ್ಥಾನವನ್ನು ಈಗಾಗಲೇ ಮಿಥುನ್ ರೈ ಅವರಿಗೆ ಬಿಟ್ಟುಕೊಟ್ಟಿದ್ದಾರೆ.

ದಕ್ಷಿಣ ಕನ್ನಡದ ಕಾಂಗ್ರೆಸ್ ವಲಯದಲ್ಲಿ ಹೊಸ ಮುಖಗಳಿಗೆ ಆದ್ಯತೆ ನೀಡಬೇಕು, ಅಲ್ಲದೇ ಎಲ್ಲಾ ಕ್ಷೇತ್ರಗಳಲ್ಲಿ ಹೊಸ ಮುಖಗಳನ್ನು ಕಣಕ್ಕಿಳಿಸಬೇಕೆಂಬ ಆಗ್ರಹವನ್ನು ಮಾಡುತ್ತಾ ಬಂದಿದ್ದಾರೆ.ಈ ನಡುವೆ ಹಳೆ ಮುಖಗಳಿಗೆ ಟಿಕೆಟ್ ನೀಡಿದರೆ ದಕ್ಷಿಣ ಕನ್ನಡದಲ್ಲಿ ಮತ್ತೆ ಬಿಜೆಪಿ ಹಿಂದುತ್ವದ ಅಸ್ತ್ರವನ್ನೇ ಉಪಯೋಗಿಸಿ ಏಳು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಪಕ್ಷವನ್ನು ಸುಲಭವಾಗಿ ಸೋಲಿಸಲಿದೆ ಅನ್ನೋದು ಸಮೀಕ್ಷೆಯಿಂದ ಬಯಲಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಮೀಕ್ಷೆಯ ವರದಿಯನ್ನೇ ಗಂಭೀರವಾಗಿ ಪರಿಗಣಿಸಿದೆ ಎನ್ನಲಾಗುತ್ತಿದೆ.

ಕಳೆದ ಬಾರಿ ದಕ್ಷಿಣ ಕನ್ನಡದಲ್ಲಿ ಹಿಂದುತ್ವದ ಆಧಾರದ ಮೇಲೆಯೇ ಬಿಜೆಪಿ ಎಲ್ಲಾ ಏಳು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಅನ್ನು ಸೋಲಿಸಿತು. ಆದರೆ ಶಾಸಕ ಯುಟಿ ಖಾದರ್ ಮಾತ್ರವೇ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದರು. ಇದೇ ಕಾರಣಕ್ಕೆ ಹೈಕಮಾಂಡ್ ಯು.ಟಿ.ಖಾದರ್ ಕ್ಷೇತ್ರವನ್ನು ಹೊರತು ಪಡಿಸಿ ಉಳಿದ ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಮಣೆ ಹಾಕಲು ನಿರ್ಧರಿಸಿದೆ ಎಂದು ಕೆಪಿಸಿಸಿ ಹಾಗೂ ಎಐಸಿಸಿ ಮೂಲಗಳು ಸ್ಪಷ್ಟಪಡಿಸಿವೆ.

ಇದನ್ನೂ ಓದಿ : MLA Election 2023 Siddaramaiah : ಸಿದ್ದರಾಮಯ್ಯಗೆ ಸೂಚನೆ ಕೊಟ್ಟ ಮನೆ ದೇವರು : 2 ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ದೈವವಾಣಿ

ಇದನ್ನೂ ಓದಿ : Congress New formula : 2 ಬಂಟ, 2 ಬಿಲ್ಲವ, 2 ಮುಸ್ಲೀಂ,1 ಕ್ರಿಶ್ಚಿಯನ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಹೊಸ ಸೂತ್ರ

ಇಂಗ್ಲೀಷ್‌ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

MLA Election 2023 No ticket for Congress Senior Leaders in Dakshina Kannada

Comments are closed.