ದಾವಣಗೆರೆ : mla zameer ahmed : ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ಎಂಟು ತಿಂಗಳು ಬಾಕಿ ಇರುವಾಗಲೇ ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಅಭ್ಯರ್ಥಿ ಕಿತ್ತಾಟ ಜೋರಾಗಿದೆ. ಡಿ.ಕೆಶಿವಕುಮಾರ್ ಹಾಗೂ ಸಿದ್ದರಾಮಯ್ಯ ಹೆಸರು ಸಿಎಂ ಅಭ್ಯರ್ಥಿಗಳ ರೇಸ್ನಲ್ಲಿ ಕೇಳಿ ಬರ್ತಿದೆ. ಸಿದ್ದರಾಮಯ್ಯ ನಮ್ಮ ಮುಂದಿನ ಸಿಎಂ ಎಂದು ಹೇಳಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಾಯಿ ಮುಚ್ಕೊಂಡು ಕೆಲಸ ಮಾಡಿ ಅಂತಾ ಜಮೀರ್ಗೆ ವಾರ್ನಿಂಗ್ ಕೊಟ್ಟಿದ್ದರು. ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಶಾಸಕ ಜಮೀರ್ ಅಹಮದ್ ಕೆಪಿಸಿಸಿ ಅಧ್ಯಕ್ಷರು ಸಿಟ್ಟು ಮಾಡಿಕೊಂಡರೆ ನಾನೇನು ಮಾಡೋಕೆ ಆಗುತ್ತೆ ಎಂದು ಪ್ರಶ್ನಿಸಿದ್ದಾರೆ.
ದಾವಣಗೆರೆಯಲ್ಲಿ ಈ ವಿಚಾರವಾಗಿ ಮಾತನಾಡಿದ ಶಾಸಕ ಜಮೀರ್ ಅಹಮದ್, ನನ್ನ ಅಭಿಪ್ರಾಯವನ್ನು ನಾನು ಹೇಳಿದ್ದೇನೆ. ಇದಕ್ಕೆ ಕೆಪಿಸಿಸಿ ಅಧ್ಯಕ್ಷರಿಗೆ ಸಿಟ್ಟು ಬಂದರೆ ನಾನೇನು ಮಾಡೋಕೆ ಸಾಧ್ಯ..? ಸಿಎಂ ಅಭ್ಯರ್ಥಿ ಯಾರಾಗಬೇಕು ಅನ್ನೋದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತೆ. ಈ ವಿಚಾರದಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅಂತಿಮ ತೀರ್ಮಾನವನ್ನು ತೆಗೆದುಕೊಳ್ತಾರೆ. ಸಿದ್ದರಾಮಯ್ಯರೇ ನಮ್ಮ ಮುಂದಿನ ಸಿಎಂ ಆಗಲಿ ಅನ್ನೋದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ನನಗೆ ನನ್ನ ಅಭಿಪ್ರಾಯವನ್ನು ಹೊರ ಹಾಕುವ ಸ್ವಾತಂತ್ರ್ಯವಿದೆ. ಪಕ್ಷದ ಅಧ್ಯಕ್ಷರ ಮೇಲೂ ನನಗೆ ಗೌರವ ಇದೆ ಎಂದು ಹೇಳುವ ಮೂಲಕ ಟಾಂಗ್ ನೀಡಿದ್ರು.
ಕಾಂಗ್ರೆಸ್ನಲ್ಲಿ ಸಿಎಂ ಅಭ್ಯರ್ಥಿ ವಿಚಾರವಾಗಿ ಮೊದಲು ಹೇಳಿಕೆ ನೀಡಿದ್ದೇ ಡಿ.ಕೆ ಶಿವಕುಮಾರ್ , ಕೆಪಿಸಿಸಿ ಅಧ್ಯಕ್ಷರೇ ಮುಂದಿನ ಸಿಎಂ ಬಗ್ಗೆ ಮಾತನಾಡಿದ ಬಳಿಕವೇ ನಾವೆಲ್ಲ ಸಿಎಂ ಬಗ್ಗೆ ಮಾತನಾಡಿದ್ದೇವೆ . ಅದಕ್ಕೂ ಮುನ್ನ ನಮ್ಮಲ್ಲಿ ಯಾರೂ ಮುಂದಿನ ಸಿಎಂ ಬಗ್ಗೆ ಮಾತೇ ಆಡಿರಲಿಲ್ಲ. ಎಲ್ಲಾ ಸಮುದಾಯದವರಿಗೂ ಅವಕಾಶ ಸಿಗಬೇಕು ಎಂಬುದಷ್ಟೇ ನಮ್ಮ ಆಶಯ ಎಂದು ಜಮೀರ್ ಹೇಳಿದ್ರು.
ದಾವಣಗೆರೆಯಲ್ಲಿ ಆಗಸ್ಟ್ ಮೂರರಂದು ಸಿದ್ದರಾಮೋತ್ಸವ ಕಾರ್ಯಕ್ರಮ ನಡೆಯಲಿದೆ. ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಕಾಂಗ್ರೆಸ್ ನ ಕೆಲ ನಾಯಕರು ಸೇರಿ ಈ ಕಾರ್ಯಕ್ರಮವನ್ನು ಅತ್ಯಂತ ಅದ್ಧೂರಿಯಾಗಿ ನಡೆಸುವ ಪ್ಲಾನ್ನಲ್ಲಿದ್ದಾರೆ. ಈ ಮೂಲಕ ವಿಪಕ್ಷಗಳಿಗೆ ಸಿದ್ದರಾಮಯ್ಯ ಶಕ್ತಿ ಪ್ರದರ್ಶನವನ್ನೂ ಮಾಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಇದೇ ಕಾರ್ಯಕ್ರಮದ ಪ್ರಯುಕ್ತ ದಾವಣೆಗೆರೆಯಲ್ಲಿರುವ ಶಾಸಕ ಜಮೀರ್ ಅಹಮದ್ ಡಿ.ಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
ಇದನ್ನು ಓದಿ : Meghana Raj producer : ಚಿರು ಅಭಿಮಾನಿಗಳಿಗೆ ಸಿಹಿಸುದ್ದಿ, ನಿರ್ಮಾಪಕಿಯಾದ್ರು ಮೇಘನಾ ರಾಜ್
mla zameer ahmed says siddaramaiah should become cm is my personal opinion