Kota – Bhandary : ವಿಧಾನ ಪರಿಷತ್‌ ಚುನಾವಣೆ : ಕೋಟ ಶ್ರೀನಿವಾಸ ಪೂಜಾರಿ, ಮಂಜುನಾಥ್‌ ಭಂಡಾರಿಗೆ ಭರ್ಜರಿ ಗೆಲುವು

ಮಂಗಳೂರು : ವಿಧಾನ ಪರಿಷತ್‌ ಚುನಾವಣೆಯಲ್ಲಿ ( MLC Election ) ದಕ್ಷಿಣ ಕನ್ನಡ ಜಿಲ್ಲಾ ದ್ವಿಸದಸ್ಯ ಕ್ಷೇತ್ರಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಗೆಲುವು ದಾಖಲಿಸಿವೆ. ಬಿಜೆಪಿಯ ಪ್ರಭಾವಿ ಮುಖಂಡ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್‌ ಮುಖಂಡ ಮಂಜುನಾಥ್‌ ಭಂಡಾರಿ ( Kota Srinivas Poojari and Congress Majunath Bhandary ) ಅವರು ಪ್ರಥಮ ಪ್ರಾಶಸ್ತ್ಯದ ಮತಗಳಿಂದಲೇ ಗೆಲುವು ಕಂಡಿದ್ದಾರೆ.

ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಅವರು 3,672 ಮತಗಳನ್ನು ಪಡೆದುಕೊಂಡಿದ್ರೆ, ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಮಂಜುನಾಥ ಭಂಡಾರಿ 2,079 ಮತಗಳನ್ನು ಪಡೆಯುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ. ಚುಲಾವಣೆಯಾಗಿದ್ದ ಒಟ್ಟಿ ಮತಗಳ ಪೈಕಿ 5955 ಮತಗಳು ಸಿಂಧುವಾಗಿದ್ದು, ಪ್ರಥಮ ಪ್ರಾಶಸ್ತ್ಯದ ಗೆಲುವು ಪಡೆಯಲು 1,986 ಮತಗಳನ್ನು ಪಡೆಯಬೇಕಾಗಿತ್ತು. ಆದರೆ ಇಬ್ಬರೂ ಅಭ್ಯರ್ಥಿಗಳು ಪ್ರಥಮ ಪ್ರಾಶಸ್ತ್ಯದ ಮತಗಳಿಂದಲೇ ಗೆಲುವು ಕಂಡಿದ್ದಾರೆ. ಎಸ್​​ಡಿಪಿಐನ ಶಾಫಿ ಬೆಳ್ಳಾರೆ 204 ಮತಗಳನ್ನು ಪಡೆದುಕೊಂಡಿದ್ದಾರೆ. ಚಲಾವಣೆಯಾಗಿದ್ದ ಒಟ್ಟು ಮತಗಳ ಪೈಕಿ 56 ಮತಗಳು ಅಸಿಂಧುವಾಗಿದ್ದವು.

ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರದಿಂದ ಕಳೆದ ಬಾರಿ ಬಿಜೆಪಿ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಕಾಂಗ್ರೆಸ್‌ನಿಂದ ಪ್ರತಾಪ್‌ ಚಂದ್ರ ಶೆಟ್ಟಿ ಅವರು ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದರು. ೨೦೦೯ರಲ್ಲಿ ಮೊದಲ ಬಾರಿಗೆ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ವಿಧಾನ ಪರಿಷತ್‌ ಸದಸ್ಯರಾಗಿ ಆಯ್ಕೆಯಾಗಿದ್ದರು. ಯಡಿಯೂರಪ್ಪ ಸರಕಾರದಲ್ಲಿ ಮುಜರಾಯಿ ಸಚಿವರಾಗಿ, ನಂತರದಲ್ಲಿ ಬಂದರು ಹಾಗೂ ಮೀನುಗಾರಿಕೆ, ಹಿಂದುಳಿದ ವರ್ಗಗಳ ಖಾತೆಯ ಸಚಿವರಾಗಿಯೂ ಸೇವೆಯನ್ನು ಸಲ್ಲಸಿದ್ದಾರೆ. ಅಲ್ಲದೇ ವಿಧಾನ ಪರಿಷತ್‌ ಆಡಳಿತ ಪಕ್ಷದ ನಾಯಕನಾಗಿ, ವಿರೋಧ ಪಕ್ಷದ ನಾಯಕನಾಗಿಯೂ ಸೇವೆ ಸಲ್ಲಿಸಿದ್ದಾರೆ. ಸದ್ಯ ಹಿಂದುಳಿದ ವರ್ಗಗಳ ಖಾತೆಯ ಸಚಿವರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಸತತವಾಗಿ ಮೂರು ಬಾರಿ ವಿಧಾನ ಪರಿಷತ್‌ ಪ್ರವೇಶಿಸಿದ್ದಾರೆ.

ಇನ್ನು ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಮಂಜುನಾಥ್‌ ಭಂಡಾರಿ ಅವರು ಈ ಹಿಂದೆ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು. ಇದೀಗ ಮೊದಲ ಬಾರಿಗೆ ವಿಧಾನ ಪರಿಷತ್‌ ಪ್ರವೇಶಿಸಿದ್ದಾರೆ. ಒಟ್ಟಿನಲ್ಲು ಕುತೂಹಲ ಮೂಡಿಸಿದ್ದ ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರದ ವಿಧಾನ ಪರಿಷತ್‌ ಚುನಾವಣೆ ನಿರೀಕ್ಷೆಯಂತೆಯೇ ಕಾಂಗ್ರೆಸ್‌ ಹಾಗೂ ಬಿಜೆಪಿ ಒಂದೊಂದು ಸ್ಥಾನಗಳನ್ನು ಹಂಚಿಕೊಂಡಿವೆ.

ಇದನ್ನೂ ಓದಿ : Atmanirbhar DMK MP Kanimozhi : ಈ ಕಾರಣಕ್ಕೆ ಸಂಸತ್ತಿನಲ್ಲಿ ತಮಿಳು ಭಾಷೆಯಲ್ಲಿ ಭಾಷಣ ಮಾಡಿದ ಡಿಎಂಕೆ ಸಂಸದೆ..!

ಇದನ್ನೂ ಓದಿ : Karnataka New CM : ರಾಜ್ಯಕ್ಕೆ ಮತ್ತೆ ಹೊಸ ಸಿಎಂ : ಬೊಮ್ಮಾಯಿ ಹುದ್ದೆಗೆ ಕಂಟಕವಾಯ್ತು ಮಂಡಿನೋವು

ಇದನ್ನೂ ಓದಿ : Siddaramaiah: ಓಮಿಕ್ರಾನ್​ ಸೋಂಕಿತರು ವಿದೇಶಕ್ಕೆ ಹಾರೋದಕ್ಕೆ ಏರ್​ಪೋರ್ಟ್ ಭ್ರಷ್ಟಾಚಾರವೇ ಕಾರಣ: ಧಮ್​ ಇದ್ರೆ ತನಿಖೆ ನಡೆಸಿ – ಸರ್ಕಾರಕ್ಕೆ ಸಿದ್ದರಾಮಯ್ಯ ಸವಾಲ್​

( MLC Election Bjp Kota Srinivas Poojari and Congress Majunath Bhandary win)

Comments are closed.