Nalin Kumar Katelu resigns : ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್‌ ಕುಮಾರ್‌ ಕಟೀಲು ರಾಜೀನಾಮೆ

ಬೆಂಗಳೂರು : (Nalin Kumar Katelu resigns) ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದೆ. ಈ ಹಿನ್ನೆಲೆಯಲ್ಲಿ ಸೋಲಿನ ಹೊಣೆಹೊತ್ತು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್‌ ಕುಮಾರ್‌ ಕಟೀಲು ರಾಜೀನಾಮೆ ಸಲ್ಲಿಸಿದ್ದಾರೆ.

ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ನಳಿನ್‌ ಕುಮಾರ್‌ ಕಟೀಲು, ನಾನು ಲಿಖಿತವಾಗಿ ಹಾಗೂ ಮೌಖಿಕವಾಗಿ ರಾಜೀನಾಮೆಯನ್ನು ಸಲ್ಲಿಸಿದ್ದೇನೆ. ರಾಜ್ಯಾಧ್ಯಕ್ಷನಾಗಿ ಎರಡು ವರ್ಷಗಳ ಅವಧಿಯನ್ನು ಪೂರೈಸಿದ್ದೇನೆ. ಈ ಹಿನ್ನೆಲೆಯಲ್ಲಿ ತಾನು ರಾಜೀನಾಮೆ ಸಲ್ಲಿಸಿದ್ದೇನೆ ಎಂದಿದ್ದಾರೆ.

ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಅನಿರೀಕ್ಷಿತ ಫಲಿತಾಂಶ ಬಂದಿದೆ. ಕಾಂಗ್ರೆಸ್‌ನ ಗ್ಯಾರಂಟಿ ಕಾರ್ಡ್‌ಗಳಿಂದ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದಿದೆ. ರಾಜ್ಯದಲ್ಲಿ ಬಿಜೆಪಿ ಯಾವುದೇ ಒಳಒಪ್ಪಂದವನ್ನೂ ಮಾಡಿಕೊಂಡಿಲ್ಲ. ಅಲ್ಲದೇ ಲಿಂಗಾಯಿತ ನಾಯಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಕಡೆಗಣನೆ ಮಾಡಿಲ್ಲ. ಕರ್ನಾಟಕದಲ್ಲಿ ಯಡಿಯೂರಪ್ಪ, ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಮಾಡಿದ್ದು ಬಿಜೆಪಿ ಎಂದಿದ್ದಾರೆ.

ಇದನ್ನೂ ಓದಿ : Rahul Gandhi : ಬಿಜೆಪಿಯನ್ನು ಸೋಲಿಸಲು ವಿರೋಧ ಪಕ್ಷಗಳು ಒಟ್ಟಾಗಲಿವೆ : ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ

ಇದನ್ನೂ ಓದಿ : Parvati Siddaramaiah : ಸಿಎಂ ಸಿದ್ದರಾಮಯ್ಯ ಪತ್ನಿ ಆಸ್ಪತ್ರೆಗೆ ದಾಖಲು

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರಕಾರ ಭ್ರಷ್ಟಾಚಾರ ರಹಿತ ಆಡಳಿತವನ್ನು ನೀಡಿದ್ದೇವೆ. ಭಯೋತ್ಪಾದನೆ, ನಕ್ಸಲ್‌ ಚಟುವಟಿಕೆಯನ್ನು ನಿರ್ಮೂಲನೆ ಮಾಡಿದ್ದೇವೆ. ರಾಜ್ಯದಲ್ಲಿ ಹೊಸದಾಗಿ ರಾಜ್ಯಾಧ್ಯಕ್ಷರ ಆಯ್ಕೆ ನಡೆಯಲಿದೆ. ಚುನಾವಣೆ ಸೋಲಿನ ನೈತಿಕ ಹೊಣೆಹೊತ್ತು ನಾನು ಈಗಾಗಲೇ ರಾಜೀನಾಮೆಯನ್ನು ನೀಡಿದ್ದೇನೆ. ರಾಷ್ಟ್ರೀಯ ಅಧ್ಯಕ್ಷರಿಗೆ ರಾಜೀನಾಮೆ ಪತ್ರವನ್ನೂ ಕಳುಹಿಸಿ, ಮೌಖಿಕವಾಗಿಯೂ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

Nalin Kumar Katelu resigns: Nalin Kumar Katelu resigned from the post of BJP state president

Comments are closed.