ಮೋದಿ ಮೈಸೂರು ಆಗಮನಕ್ಕೆ ಭರದ ಸಿದ್ಧತೆ : ಖಡಕ್ ರೂಲ್ಸ್ ಪ್ರಕಟಿಸಿದ ಖಾಕಿ ಪಡೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ದೇಶದ ಪ್ರಧಾನಿ ಮೋದಿ ಆಗಮನಕ್ಕೆ ಸಜ್ಜಾಗಿದೆ. ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಮೋದಿ ಮೈಸೂರಿನಲ್ಲಿ ಯೋಗ ಪ್ರದರ್ಶನದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಬೃಹತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಹಾಗೂ ನಗರದಾದ್ಯಂತ ಹಲವೆಡೆ ಮೋದಿ ಸಂಚಾರ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಮಾರ್ಗಸೂಚಿ ಪ್ರಕಟಿಸಿ ಮೈಸೂರು ನಗರ ಪೊಲೀಸ್ ಇಲಾಖೆ ( tuff Rules Guidelines) ಆದೇಶ ಹೊರಡಿಸಿದೆ.

ಮಹಾರಾಜ ಕಾಲೇಜು ಮೈದಾನದಲ್ಲಿ ಪ್ರಧಾನ ಮಂತ್ರಿಗಳ ಕಾರ್ಯಕ್ರಮವಿದ್ದು ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ನಿಗದಿಪಡಿಸಲಾಗಿರುವ ಆಸನದ ವ್ಯವಸ್ಥೆಯಲ್ಲೇ ಬಂದು ಸಾರ್ವಜನಿಕರು ಆಸೀನರಾಗಬೇಕು. ಸಾರ್ವಜನಿಕರು ಆಗಮಿಸುವಾಗ ನಿಗಧಿಪಡಿಸಿದ ಪ್ರವೇಶ ದ್ವಾರಗಳಿಂದಲೇ ಆಗಮಿಸಬೇಕು. ಸಾರ್ವಜನಿಕರು ಪ್ರವೇಶ ದ್ವಾರದಲ್ಲಿ ಭದ್ರತಾ ಸಿಬ್ಬಂದಿಗಳ ತಪಾಸಣೆಗೆ ಸಹಕರಿಸಿ,ಲೋಹ ಶೋಧಕ ಯಂತ್ರದ ಮೂಲಕ ತಪಾಸಣಿಗೆ ಒಳಪಟ್ಟು, ನಂತರ ಕಾರ್ಯಕ್ರಮದ ಸ್ಥಳಕ್ಕೆ ನಿಗಧಿ ಪಡಿಸಿದ ಸ್ಥಳಕ್ಕೆ ತೆರಳಲು ಸೂಚಿಸಲಾಗಿದೆ.

ಸುರಕ್ಷತೆಯ ದೃಷ್ಟಿಯಿಂದ ಸಾರ್ವಜನಿಕರು ತಮ್ಮೊಂದಿಗೆ ನೀರಿನ ಬಾಟಲ್, ಗಾಜಿನ ಬಾಟಲ್, ಬ್ಯಾಗ್, ವ್ಯಾನಿಟಿಬ್ಯಾಗ್, ಹರಿತವಾದ ವಸ್ತುಗಳು, ಯಾವದೇ ರೀತಿಯ ಆಯುಧಗಳು, ಲೋಹದ ವಸ್ತುಗಳು ಹಾಗೂ ಇತರೆ ಯಾವುದೇ ರೀತಿಯ ವಸ್ತುಗಳನ್ನು ಹೊಂದಿರಬಾರದೆಂದು ಪೊಲೀಸ್ ಇಲಾಖೆ ಆದೇಶಿಸಿದೆ. ಯಾವುದೇ ರೀತಿಯ ಕರಪತ್ರ, ಬ್ಯಾನರ್, ಕಪ್ಪು ಬಟ್ಟೆ/ಪ್ಲಾಗ್, ಪ್ಲಕಾರ್ಡ್‌ಗಳಿಗೆ ಅನುಮತಿ ಇರುವುದಿಲ್ಲ. ಅಲ್ಲದೇ ಸಾರ್ವಜನಿಕರ ಮೊಬೈಲ್‌ಗೆ ಮಾತ್ರ ಅವಕಾಶವಿದ್ದು ಉಳಿದ ಯಾವುದೇ ರೀತಿಯ ಎಲೆಕ್ಟ್ರಾನಿಕ್‌ ವಸ್ತುಗಳನ್ನು ಹೊಂದಲು ಅವಕಾಶ ಇರುವುದಿಲ್ಲ ಎಂದು ಸೂಚಿಸಿದೆ. ಕ್ಯಾಮರಾ, ವೀಡಿಯೋಕ್ಯಾಮರಾ, ಪವರ್ ಬ್ಯಾಂಕ್‌, ಇಯರ್‌ಫೋನ್, ಹ್ಯಾಂಡ್ಸ್ ಫ್ರೀ ಇತ್ಯಾದಿಗಳನ್ನು ತರುವಂತಿಲ್ಲ. ಅಲ್ಲದೇ ಮೊಬೈಲ್‌ ಫೋನ್‌ಗಳನ್ನು Switch off ಮಾಡಿರ ತಕ್ಕದ್ದು.ಬೆಂಕಿ ಉತ್ಪತ್ತಿ ಮಾಡುವ ಬೆಂಕಿಪೊಟ್ಟಣ, ಲೈಟರ್, ಪಟಾಕಿ ಹಾಗೂ ಇತ್ಯಾದಿ ವಸ್ತುಗಳನ್ನು ತೆಗೆದುಕೊಂಡು ಬರಬಾರದು ಎಂದು ಪೊಲೀಸ್ ಇಲಾಖೆ ಆದೇಶಿಸಿದೆ.

ಬೀಡಿ, ಸಿಗರೇಟ್, ಗುಟ್ಕಾ ಇತ್ಯಾದಿ ತಂಬಾಕು ಪದಾರ್ಥಗಳನ್ನು ಕಡ್ಡಾಯವಾಗಿ ನಿಷೇದಿಸಿದೆ. ಅಲ್ಲದೇ ಕರ್ಕಶ ಶಬ್ಧವನ್ನು ಮಾಡುವ ಪೀಪಿ, ತಮಟೆ, ನಗಾರಿ ಇತ್ಯಾದಿ ವಸ್ತುಗಳನ್ನು ನಿಷೇಧಿಸಿದೆ.ಸಾರ್ವಜನಿಕರು ತಮಗೆ ಮೀಸಲಿರುವ ಆಸನಗಳಲ್ಲಿಯೇ ಕುಳಿತುಕೊಳ್ಳುವುದು. ಸಾರ್ವಜನಿಕರು ಆಸೀನರಾದ ನಂತರ ಕಾರ್ಯಕ್ರಮ ಮುಗಿಯುವ ವರೆಗೆ ಒಂದು ಸೆಕ್ಟರ್ ನಿಂದ ಇನ್ನೊಂದು ಸೆಕ್ಟರ್‌ಗೆ ಹೋಗಬಾರದು, ಸಾರ್ವಜನಿಕರು ಆಸೀನರಾದ ಸ್ಥಳದಲ್ಲಿ ನಿಂತುಕೊಳ್ಳುವುದು, ಅನಾವಶ್ಯಕವಾಗಿ ತಿರುಗಾಡುವುದಕ್ಕೂ ನಿಷೇಧ ಹೇರಲಾಗಿದೆ.

Narendra Modi prepares for arrival in Mysore Police Released tuff Rules Guidelines

ಯಾವುದೇ ವಾರಸುದಾರರಿಲ್ಲದ ಬ್ಯಾಗುಗಳು, ಪೊಟ್ಟಣ, ಆಟಿಕೆ ಸಾಮಾನುಗಳು ಹಾಗೂ ಇತರೆ ವಸ್ತುಗಳು ಕಂಡು ಬಂದಲ್ಲಿ ಅದನ್ನು ಮುಟ್ಟದೇ ಕೂಡಲೇ ಪೊಲೀಸರಿಗೆ ಮಾಹಿತಿ ನೀಡುವುದು. ಕಾರ್ಯಕ್ರಮ ವೀಕ್ಷಣೆಗೆ ಬರುವವರು ತಮ್ಮ ವಾಹನಗಳನ್ನು ಸಂಚಾರಿ ಪೊಲೀಸರು ನಿಗದಿಪಡಿಸಿರುವ ಸ್ಥಳದಲ್ಲೇ ನಿಲ್ಲಿಸಬೇಕೆಂದು ಸೂಚಿಸಲಾಗಿದೆ.

ಇದನ್ನೂ ಓದಿ : EXCLUSIVE : ಕೋಟಿ ಕೋಟಿ ತೆರಿಗೆ ಕಟ್ಟದೇ ಮಾಲ್ ಗಳ ಕಳ್ಳಾಟ: ಇಲ್ಲಿದೆ ಪ್ರತಿಷ್ಠಿತ ಮಾಲ್ ಗಳ ಲಿಸ್ಟ್‌

ಇದನ್ನೂ ಓದಿ : Mysore golden gift : ಪ್ರಧಾನಿ ನರೇಂದ್ರ ಮೋದಿ ಕೈಗೆ ಮೈಸೂರು ಚಿನ್ನ: ಸಿದ್ಧವಾಗಿದೆ ಸ್ವರ್ಣಲೇಪಿತ ಸ್ಪೆಶಲ್ ಗಿಫ್ಟ್

Narendra Modi prepares for arrival in Mysore Police Released tuff Rules Guidelines

Comments are closed.