Breaking News: ಅಣ್ಣಾಮಲೈ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್

ಕೆಲ ದಿನಗಳ ಹಿಂದಷ್ಟೇ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯಿಂದ ಕೆಳಗಿಳಿದಿದ್ದ ಅಣ್ಣಾಮಲೈ, ಇದೀಗ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ಗುಡ್‌ಬೈ ಹೇಳಿದ್ದಾರೆ.

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸಲ್ಲಿಸಿದ್ದ ರಾಜೀನಾಮೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅಧಿಕೃತವಾಗಿ ಅಂಗೀಕರಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯಿಂದ ಕೆಳಗಿಳಿದಿದ್ದ ಅಣ್ಣಾಮಲೈ, ಇದೀಗ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ಗುಡ್‌ಬೈ ಹೇಳಿದ್ದಾರೆ. ಈ ಮೂಲಕ ಭಾರತೀಯ ಜನತಾ ಪಾರ್ಟಿಯೊಂದಿಗೆ ಇದ್ದ ಎಲ್ಲಾ ರಾಜಕೀಯ ಸಂಬಂಧಗಳನ್ನು ಅವರು ಅಧಿಕೃತವಾಗಿ ಕಡಿತಗೊಳಿಸಿಕೊಂಡಂತಾಗಿದೆ.

ಅಣ್ಣಾಮಲೈ ಅವರ ಈ ಹಠಾತ್ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ತಕ್ಷಣವೇ ಅಂಗೀಕರಿಸಿ ಆದೇಶ ಹೊರಡಿಸಿದೆ. ಮಾಜಿ ಐಪಿಎಸ್ ಅಧಿಕಾರಿಯಾಗಿದ್ದ ಕೆ. ಅಣ್ಣಾಮಲೈ ಅವರು ತಮಿಳುನಾಡಿನಲ್ಲಿ ಬಿಜೆಪಿಯನ್ನು ತಳಮಟ್ಟದಿಂದ ಬಲಪಡಿಸಲು ಮತ್ತು ಪಕ್ಷಕ್ಕೆ ಹೊಸ ವೇಗ ನೀಡಲು ತೀವ್ರ ಶ್ರಮವಹಿಸಿದ್ದರು.

Also Read: ಕೆ. ಅಣ್ಣಾಮಲೈ ಬಿಜೆಪಿ ತೊರೆಯುವುದು ಬಹುತೇಕ ಫಿಕ್ಸ್​ : ಇಂದು ಮುಂದಿನ ನಡೆ ಬಗ್ಗೆ ಅಧಿಕೃತ ಘೋಷಣೆ

ಆದರೆ, ಇತ್ತೀಚಿನ ರಾಜಕೀಯ ಬದಲಾವಣೆ ಹಾಗೂ ಆಂತರಿಕ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅವರು ಪಕ್ಷದಿಂದಲೇ ಹೊರನಡೆದಿದ್ದಾರೆ. ಅಣ್ಣಾಮಲೈ ಅವರ ಈ ನಡೆ ತಮಿಳುನಾಡು ಮಾತ್ರವಲ್ಲದೆ ರಾಷ್ಟ್ರ ರಾಜಕಾರಣದಲ್ಲೂ ತೀವ್ರ ಕುತೂಹಲ ಮೂಡಿಸಿದ್ದು, ಅವರ ಮುಂದಿನ ರಾಜಕೀಯ ನಡೆ ಏನು ಎಂಬ ಚರ್ಚೆ ಆರಂಭವಾಗಿದೆ. ಬಿಜೆಪಿ ಹೈ ಕಮಾಂಡ್ ರಾಜೀನಾಮೆ ಅಂಗೀಕಾರ ಮಾಡಿರುವುದರಿಂದ ಇಂದು ಮದ್ಯಾಹ್ನ 12 ಗಂಟೆಗೆ ಹೊಸ ಪ್ರಾದೇಶಿಕ ಪಕ್ಷ ಘೋಷಣೆ ಮಾಡುವುದು ಪಕ್ಕಾ ಆಗಿದೆ.

Anil Gundmi | ಅನಿಲ್‌ ಗುಂಡ್ಮಿ

ಅನಿಲ್‌ ಗುಂಡ್ಮಿ ಅವರು ನ್ಯೂಸ್‌ ನೆಕ್ಸ್ಟ್‌ ಕನ್ನಡದಲ್ಲಿ ಸಂಪಾದಕರಾಗಿ ಕೆಲಸ ಮಾಡುತ್ತಿದ್ದಾರೆ. ಬಿಎಸ್ಸಿ ಪದವೀಧರರಾಗಿದ್ದು, ಪ್ರಚಲಿತ ವಿದ್ಯಾಮಾನ, ಕ್ರೀಡೆ, ಸಿನಿಮಾ, ದೇಶ, ವಿದೇಶಗಳ ಸುದ್ದಿಗಳ ಬರವಣೆಗೆಯಲ್ಲಿ ಹಿಡಿತಹೊಂದಿದ್ದಾರೆ. ಕಳೆದ ಐದು ವರ್ಷಗಳಿಂದಲೂ ನ್ಯೂಸ್‌ ನೆಕ್ಸ್ಟ್‌ ನಲ್ಲಿ ಕೆಲಸ ಮಾಡುತ್ತಿದ್ದಾರೆ.

Related Stories