ಬೆಂಗಳೂರು : ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿಯ ಪ್ರಮಾಣ ವಚನಕ್ಕೆ ಸಿದ್ದತೆ ನಡೆಯುತ್ತಿದೆ. ನಾಳೆಯೇ ಹೊಸ ಸಿಎಂ ಪ್ರಮಾಣ ವಚನ ಸ್ವೀಕಾರ ಮಾಡೋದು ಬಹುತೇಕ ಖಚಿತ. ಈ ಹಿನ್ನೆಲೆಯಲ್ಲಿಂದು ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.
ಇಂದು ಸಂಜೆ 7 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ರಾಜ್ಯದ ಹೊಸ ನಾಯಕನ ಆಯ್ಕೆಯನ್ನು ಮಾಡಲಾಗುತ್ತದೆ. ಬಿಜೆಪಿ ಹೈಕಮಾಂಡ್ ಈಗಾಗಲೇ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿದೆ. ಅಲ್ಲದೇ ಚುನಾವಣಾ ವೀಕ್ಷಕರಾಗಿ ಕಿಶನ್ ರೆಡ್ಡಿ ಅವರನ್ನು ಹೈಕಮಾಂಡ್ ನಾಯಕರು ಕಳುಹಿಸಿದ್ದಾರೆ. ಅಲ್ಲದೇ ಕಿಶನ್ ರೆಡ್ಡಿ ಅವರ ಕೈಯಲ್ಲಿ ಮುಚ್ಚಿದ ಲಕೋಟೆಯಲ್ಲಿ ಹೊಸ ಸಿಎಂ ಹೆಸರನ್ನು ಕಳುಹಿಸಿಕೊಟ್ಟಿದ್ದಾರೆ. ಇಂದಿನ ಶಾಸಕಾಂಗ ಸಭೆಯಲ್ಲಿ ಆ ಹೆಸರನ್ನು ಶಾಸಕರಿಗೆ ತಿಳಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ.
ರಾಜ್ಯದಲ್ಲಿ ನಾಳೆಯೇ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಮಾಡೋದು ಬಹುತೇಕ ಖಚಿತ. ಈಗಾಗಲೇ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಿದ್ದತೆಯನ್ನು ಮಾಡಿಕೊಳ್ಳುವಂತೆ ಈಗಾಗಲೇ ಸರಕಾರದ ವತಿಯಿಂದ ಸೂಚನೆಯನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ. ಹಂಗಾಮಿ ಸಿಎಂ ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ಲಾಭಿಯೂ ಶುರುವಾಗಿದೆ. ಈ ನಿಟ್ಟಿನಲ್ಲಿ ತುರ್ತಾಗಿ ಸಿಎಂ ನೇಮಕಕ್ಕೆ ಹೈಕಮಾಂಡ್ ಸಿದ್ದತೆ ಮಾಡಿಕೊಂಡಿದೆ.