ಶಾಸಕಾಂಗ ಸಭೆ : ಬೆಂಗಳೂರಿಗೆ ಅರುಣ್‌ ಸಿಂಗ್‌, ಕಟೀಲು ಆಗಮನ

ಬೆಂಗಳೂರು : ರಾಜ್ಯದಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆಯ ಕುರಿತು ಇಂದು ಬಿಜೆಪಿ ಶಾಸಕಾಂಗ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಬೆಂಗಳೂರಿಗೆ ಆಗಮಿಸಿದ್ದಾರೆ.

ಬಿಜೆಪಿ ಹೈಕಮಾಂಡ್‌ ನಾಯಕರು ಈಗಾಗಲೇ ನೂತನ ಮುಖ್ಯಮಂತ್ರಿಯ ಹೆಸರನ್ನು ಬಹುತೇಕ ಅಂತಿಮಗೊಳಿಸಿದ್ದಾರೆ. ಸಂಜೆಯ ವೇಳೆಗೆ ಚುನಾವಣಾ ವೀಕ್ಷಕರಾಗಿ ಕಿಶನ್‌ ರೆಡ್ಡಿ ಹಾಗೂ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಚುನಾವಣಾ ವೀಕ್ಷಕರು ಬಂದ ನಂತರದಲ್ಲಿಯೇ ನೂತನ ಮುಖ್ಯಮಂತ್ರಿಯ ಆಯ್ಕೆ ನಡೆಯಲಿದೆ. ಹಂಗಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅನುಭವ, ಸಲಹೆಯನ್ನು ಪಡೆದುಕೊಳ್ಳಲಿದ್ದೇನೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ತಿಳಿಸಿದ್ದಾರೆ.

ಇನ್ನು ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಇಂದು ಸಂಜೆ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ. ಸಿಎಂ ಯಾರು ಆಗ್ತಾರೆ ಅನ್ನೋ ಕುರಿತು ಬಿಜೆಪಿ ಹೈಕಮಾಂಡ್‌ ನಾಯಕರು ತೀರ್ಮಾನ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

Comments are closed.