- Advertisement -
ಬೆಂಗಳೂರು : ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ತುಂಬಿದ ಸಂದರ್ಭದಲ್ಲಿಯೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯದ 24 ಶಾಸಕರಿಗೆ ಗಿಫ್ಟ್ ಕೊಟ್ಟಿದ್ದಾರೆ. ಹಲವು ತಿಂಗಳುಗಳಿಂದ ಬಾಕಿ ಉಳಿದಿದ್ದ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮ ಮಾಡಿ ಆದೇಶ ಹೊರಡಿಸಿದ್ದಾರೆ.

ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅವರಿಗೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಉಳಿದಂತೆ ಶಾಸಕರಿಗೆ ಯಾವ ನಿಗಮ ಮಂಡಳಿಯಲ್ಲಿ ಸ್ಥಾನ ದೊರೆತಿದೆ ಎನ್ನುವ ಕುರಿತ ಮಾಹಿತಿ ಇಲ್ಲಿದೆ.

