arun singh : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ನಾಯಕತ್ವ ಬದಲಾವಣೆ ಇಲ್ಲ : ಅರುಣ್​ ಸಿಂಗ್​

ಬೆಂಗಳೂರು :arun singh : ರಾಜ್ಯದಲ್ಲಿ ಸಂಪುಟ ವಿಸ್ತರಣೆಯ ಚರ್ಚೆ ಬೆನ್ನಲ್ಲೇ ನಾಯಕತ್ವ ಬದಲಾವಣೆ ಕೂಡ ಆಗಲಿದೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಕೇಂದ್ರ ಗೃಹ ಸಚಿವ ಅಮಿತ್​ ಶಾ ರಾಜ್ಯ ಭೇಟಿ ಬೆನ್ನಲ್ಲೇ ಸಂಪುಟ ವಿಸ್ತರಣೆ ಹಾಗೂ ನಾಯಕತ್ವ ಬದಲಾವಣೆ ವಿಚಾರಗಳು ಮುನ್ನೆಲೆಗೆ ಬಂದಿವೆ.


ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಮಾತನಾಡಿದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​​ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಎನ್ನುವುದು ಒಂದು ಕಾಲ್ಪನಿಕ ಸುದ್ದಿಯಾಗಿದೆ. ಬಸವರಾಜ ಬೊಮ್ಮಾಯಿಯವರೇ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​ ಸ್ಪಷ್ಟನೆ ನೀಡಿದರು.


ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಒಳ್ಳೆಯ ಆಡಳಿತವನ್ನು ನೀಡುತ್ತಿದ್ದಾರೆ. ಬಸವರಾಜ ಬೊಮ್ಮಾಯಿ ಒಬ್ಬ ಕಾಮನ್​ ಮ್ಯಾನ್​ ಸಿಎಂ. ನಾಯಕತ್ವ ಬದಲಾವಣೆ ಎನ್ನುವುದು ಒಂದು ಕಾಲ್ಪನಿಕ ಕತೆಯಾಗಿದೆ. ಕಾಲ್ಪನಿಕ ಪ್ರಶ್ನೆಗಳಿಗೆ ಉತ್ತರ ನೀಡಲು ಸಾಧ್ಯವಿಲ್ಲ. 2023ರ ರಾಜ್ಯ ವಿಧಾನಸಭಾ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಎದುರಿಸಲಿದ್ದೇವೆ ಎಂದು ಹೇಳಿದರು.


ರಾಜ್ಯದ ಜನತೆ ಕೂಡ ಬಸವರಾಜ ಬೊಮ್ಮಾಯಿ ಮತ್ತೆ ಸಿಎಂ ಆಗಲಿ ಎಂದು ಬಯಸುತ್ತಿದ್ದಾರೆ. ಹೀಗಾಗಿ ಅವರ ನೇತೃತ್ವದಲ್ಲಿಯೇ ಚುನಾವಣೆಯನ್ನು ಎದುರಿಸುತ್ತೇವೆ. ಜನರ ಬಯಕೆ ಕೂಡ ಇದೇ ಆಗಿದೆ. ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್​ ರಚನೆ ಸಿಎಂಗೆ ಬಿಟ್ಟ ವಿಚಾರವಾಗಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ಜೊತೆ ಚರ್ಚಿಸಿ ಅಂತಿಮ ನಿರ್ಧಾರಕ್ಕೆ ಬರಬಹುದು ಎಂದು ಹೇಳಿದರು.

ಇದನ್ನು ಓದಿ : Amit Shah ಆಗಮನದ ಹೊತ್ತಲ್ಲೇ ಅಶ್ವತ್ಥ ನಾರಾಯಣ್ ಗೆ ಶಾಕ್ : ಭ್ರಷ್ಟಾಚಾರದ ಆರೋಪ ಕೆಂಡಾಮಂಡಲ

ಇದನ್ನೂ ಓದಿ : BJP Secret Meeting : ಸಿಎಂ ಬೊಮ್ಮಾಯಿ ಬದಲಾವಣೆ ? ಕುತೂಹಲ ಮೂಡಿಸಿದೆ ಬಿಜೆಪಿ ತ್ರಿಮೂರ್ತಿಗಳ ಸಭೆ

no leadership change bommai will continue arun singh

Comments are closed.