ಸಿಎಂ ಯಡಿಯೂರಪ್ಪಗೆ ಮತ್ತೆ ಸಂಕಷ್ಟ : ಆಪರೇಷನ್ ಕಮಲ ತನಿಖೆಗೆ ಸಮ್ಮತಿಸಿದ ಹೈಕೋರ್ಟ್

ಬೆಂಗಳೂರು : ಆಪರೇಷನ್ ಕಮಲ ನಡೆಸಲು ಶಾಸಕರಿಗೆ ಹಣದ ಆಮಿಷವೊಡ್ಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ದ ತನಿಖೆ ನಡೆಸಲು ಹೈಕೋರ್ಟ್ ಅನುಮತಿಯನ್ನು ನೀಡಿದೆ. ಈ ಮೂಲಕ ಯಡಿಯೂರಪ್ಪಗೆ ಸಂಕಷ್ಟ ಎದುರಾಗಿದೆ.

ತನ್ನ ತಂದೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿಸಲು ಹಣದ ಆಮಿಷವೊಡ್ಡಲಾಗಿತ್ತು ಎಂದು ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರು ಪುತ್ರ ಶರಣಗೌಡ ಪಾಟೀಲ್ ಕಂದಕೂರ ವಿಡಿಯೋ ಬಿಡುಗಡೆ ಮಾಡಿದ್ದರು. ಅಲ್ಲದೇ ಈ ಕುರಿತು ದೇವದುರ್ಗ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ದ ದೂರು ದಾಖಲಿಸಿದ್ದರು. ಆದರೆ ಸಿಎಂ ಯಡಿಯೂರಪ್ಪ ದೇವದುರ್ಗ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐಆರ್ ತಡೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಈ ಹಿಂದೆ ತಡೆಯಾಜ್ಞೆಯನ್ನು ನೀಡಿತ್ತು, ಆದರೀಗ ನ್ಯಾಯಾಲಯ ತಡೆಯಾಜ್ಞೆ ತೆರವುಗೊಳಿಸಿದ್ದು, ಸಿಎಂ ವಿರುದ್ದ ತನಿಖೆಗೆ ಆದೇಶಿಸಿದೆ.

https://kannada.newsnext.live/jarkiholi-cd-case-jds-bjp-alliance/

ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಯಡಿಯೂರಪ್ಪ ವಿರುದ್ಧದ ಅಪರೇಷನ್ ಕಮಲ ಆಡಿಯೋ ಪ್ರಕರಣದ ತನಿಖೆಗೆ ಆದೇಶ ನೀಡಿದೆ. ರಾಜ್ಯ ರಾಜಕೀಯದಲ್ಲಿ ಸಂಚಲನವನ್ನುಂಟು ಮಾಡಿತ್ತು. ಅಂದಿನ ಸ್ಪೀಕರ್​ ರಮೇಶ್​ ಕುಮಾರ್​ ಈ ಪ್ರಕರಣವನ್ನು ಎಸ್​ಐಟಿ ತನಿಖೆಗೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದರು. ಆದರೆ, ಅಂದಿನ ಸಿಎಂ ಕುಮಾರಸ್ವಾಮಿ ಈ ಪ್ರಕರಣವನ್ನು ಎಸ್​ಐಟಿ ತನಿಖೆಗೆ ನೀಡಿರಲಿಲ್ಲ.

https://kannada.newsnext.live/karnataka-teachers-demand-summer-holiday/

Comments are closed.