Opposition to JDS-BJP alliance : ಜೆಡಿಎಸ್‌ – ಬಿಜೆಪಿ ಮೈತ್ರಿಗೆ ರಾಜ್ಯ ಬಿಜೆಪಿ ನಾಯಕರ ವಿರೋಧ

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಇತ್ತ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯ ಮಾತು (Opposition to JDS-BJP alliance) ಕೇಳಿಬಂದಿದೆ. ಅಲ್ಲದೇ ಜೆಡಿಎಸ್‌ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ಹೈಕಮಾಂಡ್‌ ಜೊತೆಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಆದರೆ ಇದೀಗ ಮೈತ್ರಿಗೆ ರಾಜ್ಯ ಬಿಜೆಪಿ ನಾಯಕರು ವಿರೋಧವನ್ನು ವ್ಯಕ್ತಪಡಿಸುತ್ತಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಬಿಜೆಪಿ ಹಲವು ರಾಜ್ಯಗಳಲ್ಲಿ ಹಲವು ಪಕ್ಷಗಳ ಜೊತೆಗೆ ಮೈತ್ರಿ ಮಾಡಿಕೊಳ್ಳುತ್ತಿದೆ. ಇಷ್ಟು ವರ್ಷಗಳ ಕಾಲ ಯುಪಿಎ ಜೊತೆಗೆ ಕಾಣಿಸಿಕೊಳ್ಳುತ್ತಿದ್ದ ಜೆಡಿಎಸ್‌ ಈ ಬಾರಿ ಇಂಡಿಯಾ (ಯುಪಿಎ) ಸಭೆಯಲ್ಲಿಯೂ ಪಾಲ್ಗೊಂಡಿರಲಿಲ್ಲ. ಹೀಗಾಗಿ ಜೆಡಿಎಸ್‌ ಹಾಗೂ ಬಿಜೆಪಿ ಮೈತ್ರಿ ಫಿಕ್ಸ್‌ ಎನ್ನಲಾಗುತ್ತಿದೆ. ರಾಜ್ಯದಲ್ಲಿ ಸರಕಾರ ರಚನೆಯಾಗಿ ಎರಡು ತಿಂಗಳು ಕಳೆಯುತ್ತಾ ಬಂದಿದ್ದರೂ ಕೂಡ ಬಿಜೆಪಿ ಪ್ರತಿಪಕ್ಷ ನಾಯಕನ ಸ್ಥಾನವನ್ನು ಭರ್ತಿ ಮಾಡಿಲ್ಲ. ಜೊತೆಗೆ ಕುಮಾರಸ್ವಾಮಿ ಅಮಿತ್‌ ಶಾ ಹಾಗೂ ನರೇಂದ್ರ ಮೋದಿ ಅವರ ಜೊತೆಗೂ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು ಹಾಗೂ ಹಾಸನ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್‌ಗೆ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಈ ಪೈಕಿ ಹಾಸನ ಕ್ಷೇತ್ರ ಈಗಾಗಲೇ ಜೆಡಿಎಸ್‌ ತೆಕ್ಕೆಯಲ್ಲಿದೆ. ಉಳಿದಂತೆ ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್‌ ಕೈಯಲ್ಲಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸಂಸದ ಡಿಕೆ ಸುರೇಶ್‌ ಸ್ಪರ್ಧೆ ಅನುಮಾನ ಎನ್ನಲಾಗುತ್ತಿದೆ. ಉಳಿದಂತೆ ಚಿಕ್ಕಬಳ್ಳಾಪುರದಲ್ಲಿ ಬಚ್ಚೇಗೌಡ, ಮೈಸೂರಿನಲ್ಲಿ ಪ್ರತಾಪ್‌ ಸಿಂಹ, ಮಂಡ್ಯದಲ್ಲಿ ಸುಮಲತಾ, ತುಮಕೂರಿನಲ್ಲಿ ಜಿಎಸ್‌ ಬಸವರಾಜು, ಕೋಲಾರದಲ್ಲಿ ಮುನಿಸ್ವಾಮಿ ಬಿಜೆಪಿ ಸಂಸದರಾಗಿದ್ದಾರೆ. ಒಂದೊಮ್ಮೆ ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಂಡ್ರೆ ಹಾಲಿ ಶಾಸಕರಿಗೆ ಟಿಕೆಟ್‌ ಕೈ ತಪ್ಪುವ ಭೀತಿ ಎದುರಾಗಿದೆ. ಚಿಕ್ಕಬಳ್ಳಾಪುರ, ತುಮಕೂರು ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳು ಈ ಬಾರಿ ಕಣಕ್ಕೆ ಇಳಿಯುವುದು ಖಚಿತ. ಆದರೆ ಮೈಸೂರು ಸಂಸದ ಪ್ರತಾಪ್‌ ಸಿಂಹ, ಮಂಡ್ಯದಲ್ಲಿ ಸುಮಲತಾ, ಕೋಲಾರದಲ್ಲಿ ಮುನಿಸ್ವಾಮಿ ಅವರು ಅತಂತ್ರರಾಗುವ ಸಾಧ್ಯತೆಯಿದೆ.

ಒಂದೊಮ್ಮೆ ಜೆಡಿಎಸ್‌ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡ್ರೆ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ವೀಕ್‌ ಆಗಲಿದೆ. ಮುಂಬರುವ ಬಿಬಿಎಂಪಿ, ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆಯಲ್ಲಿ ಬಿಜೆಪಿಗೆ ದೊಡ್ಡ ಹೊಡೆತ ಬೀಳಲಿದೆ. ಇನ್ನೊಂದೆಡೆಯಲ್ಲಿ ಬಿಜೆಪಿ ಕಾರ್ಯಕರ್ತರು ಇತರ ಪಕ್ಷಗಳತ್ತ ಮುಖಮಾಡುವ ಸಾಧ್ಯತೆಯಿದೆ. ಇದೇ ಕಾರಣದಿಂದಲೇ ರಾಜ್ಯ ಬಿಜೆಪಿಯ ಕೆಲವು ನಾಯಕರು ಜೆಡಿಎಸ್‌ ಜೊತೆ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲನ್ನು ಕಂಡಿತ್ತು. ಜೆಡಿಎಸ್‌ ಕೂಡ ನಿರೀಕ್ಷಿತ ಮಟ್ಟದಲ್ಲಿ ಸ್ಥಾನಗಳನ್ನು ಗೆಲ್ಲುವಲ್ಲಿ ಸಾಧ್ಯವಾಗಿಲ್ಲ. ಹೀಗಾಗಿ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಜೆಡಿಎಸ್‌ ಬಿಜೆಪಿ ಮೈತ್ರಿ ಸೂತ್ರಕ್ಕೆ ಸಜ್ಜಾಗಿದೆ. ಮಹಾರಾಷ್ಟ್ರದಲ್ಲಿ ಈಗಾಗಲೇ ಬಿಜೆಪಿ ಹಲವು ಪಕ್ಷಗಳ ಜೊತೆಗೆ ಮೈತ್ರಿ ಮಾಡಿಕೊಂಡು ಅಧಿಕಾರದ ಗದ್ದುಗೆಗೆ ಏರಿದೆ. ಇದೇ ಮಾದರಿಯನ್ನೇ ಕರ್ನಾಟಕದಲ್ಲಿಯೂ ತರಲು ಬಿಜೆಪಿ ಪ್ಲಾನ್‌ ರೂಪಿಸಿದೆ ಎನ್ನಲಾಗುತ್ತಿದೆ. ಈಗಾಗಲೇ ಎಚ್.ಡಿ.ಕುಮಾರಸ್ವಾಮಿ ಅವರು ನವೆಂಬರ್‌ ತಿಂಗಳ ನಂತರ ರಾಜ್ಯದಲ್ಲಿ ರಾಜಕೀಯ ಪರಿಸ್ಥಿತಿ ಬದಲಾವಣೆಯಾಗಲಿದೆ ಎಂದಿದ್ದಾರೆ. ಇನ್ನೊಂದೆಡೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಖುದ್ದು ಕುಮಾರಸ್ವಾಮಿ ಅವರು ಸರಕಾರವನ್ನು ಬೀಳಿಸಲು ಸಿಂಗಾಪುರದಲ್ಲಿ ಕುಳಿತು ಕಸರತ್ತು ನಡೆಸುತ್ತಿದ್ದಾರೆ ಅಂತಾ ಆರೋಪಿಸಿದ್ದಾರೆ.

ಇದನ್ನೂ ಓದಿ : Udupi : ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಹಿಡನ್‌ ಕ್ಯಾಮೆರಾ ಇಟ್ಟಿರುವುದು ಘೋರ ಅಪರಾಧ: ತೇಜಸ್ವಿನಿ

ಒಟ್ಟಿನಲ್ಲಿ ರಾಜ್ಯ ರಾಜ್ಯದಲ್ಲಿ ಸದ್ದಿಲ್ಲದೇ ಹಲವು ಬದಲಾವಣೆಗಳು ನಡೆಯುತ್ತಿವೆ. ಬಿಜೆಪಿ ಜೆಡಿಎಸ್‌ ಮೈತ್ತಿಯಿಂದ ಹಲವು ಕ್ಷೇತ್ರಗಳಲ್ಲಿ ಅನುಕೂಲವಾದ್ರೆ ಕೆಲವು ಕ್ಷೇತ್ರಗಳಲ್ಲಿ ಪಕ್ಷಕ್ಕೆ ಹಿನ್ನಡೆಯಾಗುವ ಭೀತಿಯಿದೆ. ಆದರೆ ಬಿಜೆಪಿ ಹೈಕಮಾಂಡ್‌ ಮೈತ್ರಿಗೆ ಈಗಾಗಲೇ ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದು, ರಾಜ್ಯ ನಾಯಕರ ಅಭಿಪ್ರಾಯವನ್ನು ಕೇಂದ್ರ ನಾಯಕರು ಎಷ್ಟರ ಮಟ್ಟಿಗೆ ಪರಿಗಣಿಸುತ್ತಾರೆ ಅನ್ನೋದನ್ನು ಕಾದುನೋಡಬೇಕಾಗಿದೆ.

Opposition to JDS-BJP alliance: Opposition of state BJP leaders to JDS-BJP alliance

Comments are closed.