Oscar Fernandes : ಕಾಂಗ್ರೆಸ್‌ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ, ಡಿಕೆಶಿ

ಮಂಗಳೂರು: ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಂಗಳೂರಿನ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಆಸ್ಕರ್‌ ಫೆರ್ನಾಂಡಿಸ್‌ ಅವರು ಮನೆಯಲ್ಲಿ ಆಕಸ್ಮಿಕವಾಗಿ ಜಾರಿ ಬಿದ್ದು ತಲೆಯ ಭಾಗಕ್ಕೆ ಗಾಯ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಯೆನಪೋಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಅವರಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರು ಆಗಮಿಸಿ ಆಸ್ಕರ್‌ ಫೆರ್ನಾಂಡಿಸ್‌ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ.

ಆಸ್ಕರ್‌ ಫೆರ್ನಾಂಡಿಸ್‌ ಅವರ ಆರೋಗ್ಯ ಹದಗೆಟ್ಟಿಲ್ಲ ಅವರು ಚಿಕಿತ್ಸೆ ಸ್ಪಂದಿಸುತ್ತಿದ್ದಾರೆ. ತಜ್ಞ ವೈದ್ಯರೇ ಚಿಕಿತ್ಸೆಯನ್ನು ನೀಡಿಉತ್ತಿದ್ದು, ದೆಹಲಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸುವ ಅಗತ್ಯವಿಲ್ಲ ಎಂದು ಡಿ.ಕೆ.ಶಿವಕುಮಾರ್‌ ಪ್ರತಿಕ್ರೀಯೆ ನೀಡಿದ್ದಾರೆ.

ಆಸ್ಕರ್‌ ಫೆರ್ನಾಂಡಿಸ್‌ ಅನಾರೋಗ್ಯದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕರು ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ. ಇನ್ನೊಂದೆಡೆ ಆಸ್ಕರ್‌ ಫೆರ್ನಾಂಡಿಸ್‌ ಅವರು ಆರೋಗ್ಯವಾಗಿದ್ದು

Comments are closed.