ಮಂಗಳೂರು : ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರ ತಲೆಯ ಒಳಭಾಗಕ್ಕೆ ಗಾಯವಾಗಿದ್ದು, ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಹಲವು ಸಮಯದಿಂದಲೂ ಆಸ್ಕರ್ ಫೆರ್ನಾಂಡಿಸ್ ಅವರು ಮನೆ ಯಲ್ಲಿಯೇ ಹೆಚ್ಚಿನ ವಿಶ್ರಾಂತಿಯನ್ನು ಪಡೆಯುತ್ತಿದ್ದರು. ಭಾನುವಾರ ಮನೆಯಲ್ಲಿ ನಿಯಂತ್ರಣ ತಪ್ಪಿ ಬಿದ್ದು ತಲೆಯ ಭಾಗಕ್ಕೆ ಪೆಟ್ಟಾಗಿತ್ತು. ಮನೆಯಲ್ಲಿಯೇ ವಿಶ್ರಾಂತಿ ಪಡೆದಿದ್ದು, ಇಂದು ಆಸ್ಪತ್ರೆಗೆ ತಪಾಸಣೆಗೆಂದು ತೆರಳಿದ್ದರು.
ಇದನ್ನೂ ಓದಿ : ಪೆಟ್ರೋಲ್ ಬೆಲೆ ಏರಿಕೆಗೆ ಖಂಡನೆ….! ಸೈಕಲ್ ನಲ್ಲಿ ಸಂಸತ್ತಿಗೆ ಬಂದ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ !!

ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಿದಾಗ ತಲೆಯ ಒಳಭಾಗಕ್ಕೆ ಗಾಯವಾಗಿರೋದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನುಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಇದೀಗ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.