ಬೆಂಗಳೂರು : Priyank Kharge : ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಲಂಚ ಹಾಗೂ ಮಂಚ ಎರಡೇ ನಡೆಯುತ್ತೆ. ಈಗ ಸರ್ಕಾರಿ ಉದ್ಯೋಗ ಪಡೆಯಬೇಕು ಅಂದರೆ ಯುವತಿಯರು ಮಂಚ ಏರಬೇಕು ಎಂಬ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿಕೆಯನ್ನು ರಾಜ್ಯ ಬಿಜೆಪಿ ವಿರೋಧಿಸಿದೆ. ಕಾಂಗ್ರೆಸ್ ನಾಯಕರ ಗುಪ್ತ ಸಿಡಿಗಳು ನಮ್ಮ ಬಳಿಯೂ ಇದೆ ಎಂದು ಟಾಂಗ್ ಕೂಡ ನೀಡಿದೆ.
ಪ್ರಿಯಾಂಕ್ ಖರ್ಗೆಯನ್ನು ಮಹಿಳಾ ವಿರೋಧಿ ಎಂದು ಜರಿದ ರಾಜ್ಯ ಬಿಜೆಪಿ ಈ ಸಂಬಂಧ ಟ್ವೀಟ್ ಮಾಡಿದ್ದು. ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ರಂಗ್-ಬಿರಂಗಿ ಬಗ್ಗೆ ಸಾಕಷ್ಟು ದಂತಕತೆಗಳು ಮಾತ್ರವಲ್ಲ, ಗುಪ್ತಸಿಡಿಗಳೂ ಇವೆ. ಜೂನಿಯರ್ ಖರ್ಗೆ ಅವರೇ, ಸಭ್ಯಸ್ಥರ ಮುಖವಾಡ ಹಾಕಿ ಸಮಾಜದ ಕಣ್ಣಿಗೆ ಗಣ್ಯರೆಂದು ಬಿಂಬಿಸಿಕೊಂಡ ಕಾಂಗ್ರೆಸ್ ಗೋಮುಖ ವ್ಯಾಘ್ರಗಳ ಪಟ್ಟಿ ನೀಡಿದರೆ ಸಮರ್ಥನೆ ಮಾಡಿಕೊಳ್ಳುವುದಕ್ಕೂ ನಿಮಗೆ ಕಷ್ಟವಾಗಬಹುದು ಎಂದು ಬರೆದುಕೊಂಡಿದೆ.
ಪ್ರಿಯಾಂಕ್ ಖರ್ಗೆ ಅವರೇ, ಸಹಾಯ ಮಾಡುವುದಾಗಿ ನಂಬಿಸಿ ಅಸಹಾಯಕ ಹೆಣ್ಣೊಬ್ಬಳ ಮೇಲೆ ಮೇಟಿ ಲೈಂಗಿಕ ದೌರ್ಜನ್ಯ ಎಸಗಿದ್ದು ನಿಮ್ಮ ಕಾಲದಲ್ಲೇ ಅಲ್ಲವೇ? ಯುಪಿಎ ಸರ್ಕಾರದಲ್ಲಿ ಪ್ರಭಾವಿಗಳಾಗಿದ್ದ ಕಾಂಗ್ರೆಸ್ ನಾಯಕರು ಮಹಿಳೆಯರ ಮೇಲೆ ನಡೆಸಿದ ‘ದಿಗ್ವಿಜಯ’ ‘ಅಭಿಷೇಕ’ಗಳ ಸಿಡಿ ನಿಮ್ಮ ಮಂಚದ ಸರ್ಕಾರದ ಫಲವಲ್ಲವೇ? ಎಂದು ಪ್ರಶ್ನೆ ಮಾಡಿದೆ.
ಲಂಚ- ಮಂಚದ ಸರ್ಕಾರ ಎಂದು ಆರೋಪ ಮಾಡಿದ್ದ ಮಾಜಿ ಸಚಿವ ಪ್ರಿಯಾಂಕ ಖರ್ಗೆಯವರಿಗೆ “ತಮ್ಮ ಮನೆಯ ಹೆಂಚು ತೂತು” ಎಂಬುದೇ ಗೊತ್ತಿಲ್ಲ.
— BJP Karnataka (@BJP4Karnataka) August 13, 2022
ಇವರು ಆರೋಪ ಮಾಡಿದ ಬೆನ್ನಲ್ಲೆ ಜಯಮಾಲಾ ಅವರ ಲಂಚದ ಹಗರಣ ಬಯಲಾಗಿದೆ. ಹಾಗಾದರೆ ಲಂಚದ ಸರ್ಕಾರ ಯಾರದ್ದು?#ಮಹಿಳಾವಿರೋಧಿಕಾಂಗ್ರೆಸ್ pic.twitter.com/MQSd9gB8bc
ಲಂಚ- ಮಂಚದ ಸರ್ಕಾರ ಎಂದು ಆರೋಪ ಮಾಡಿದ್ದ ಮಾಜಿ ಸಚಿವ ಪ್ರಿಯಾಂಕ ಖರ್ಗೆಯವರಿಗೆ “ತಮ್ಮ ಮನೆಯ ಹೆಂಚು ತೂತು” ಎಂಬುದೇ ಗೊತ್ತಿಲ್ಲ.ಇವರು ಆರೋಪ ಮಾಡಿದ ಬೆನ್ನಲ್ಲೆ ಜಯಮಾಲಾ ಅವರ ಲಂಚದ ಹಗರಣ ಬಯಲಾಗಿದೆ. ಹಾಗಾದರೆ ಲಂಚದ ಸರ್ಕಾರ ಯಾರದ್ದು? ಎಂದೂ ಇದೇ ವೇಳೆ ಪ್ರಶ್ನಿಸಿದೆ.
ಸಾವಿರಾರು ಮಹಿಳೆಯರು, ಪ್ರತಿಭಾವಂತರು, ವಿದ್ಯಾವಂತರು ಕಷ್ಟಪಟ್ಟು, ಅನೇಕ ಪರೀಕ್ಷೆಗಳನ್ನು ಉತ್ತೀರ್ಣರಾಗಿ, ಕೆಲಸ ಗಿಟ್ಟಿಸಿಕೊಳ್ಳುತ್ತಾರೆ.
— BJP Karnataka (@BJP4Karnataka) August 13, 2022
ಪ್ರಿಯಾಂಕ ಖರ್ಗೆ ಅವರೇ ನಿಮ್ಮ ಈ ಮಾತುಗಳು, ಅಷ್ಟು ಜನ ಮಹಿಳೆಯರಿಗೆ ಅವಮಾನ ಮಾಡಿದಂತಲ್ಲವೇ?
ಕೂಡಲೇ ಕ್ಷಮೆಯಾಚಿಸಿ.#ಮಹಿಳಾವಿರೋಧಿಕಾಂಗ್ರೆಸ್ pic.twitter.com/lTpZkAvNwr
ಸಾವಿರಾರು ಮಹಿಳೆಯರು, ಪ್ರತಿಭಾವಂತರು, ವಿದ್ಯಾವಂತರು ಕಷ್ಟಪಟ್ಟು ಅನೇಕ ಪರೀಕ್ಷೆಗಳನ್ನು ಉತ್ತೀರ್ಣರಾಗಿ ಕೆಲಸ ಗಿಟ್ಟಿಸಿಕೊಳ್ಳುತ್ತಾರೆ. ಪ್ರಿಯಾಂಕ ಖರ್ಗೆ ಅವರೇ, ನಿಮ್ಮ ಈ ಮಾತುಗಳು ಅಷ್ಟು ಜನ ಮಹಿಳೆಯರಿಗೆ ಅವಮಾನ ಮಾಡಿದಂತಲ್ಲವೇ ? ಕೂಡಲೇ ಕ್ಷಮೆಯಾಚಿಸಿ ಎಂದು ಸರಣಿ ಟ್ವೀಟ್ಗಳ ಮೂಲಕ ಕಿಡಿಕಾರಿದೆ.
ಇದನ್ನು ಓದಿ : there is no change of CM : ಮುಂದಿನ ವಿಧಾನಸಭಾ ಚುನಾವಣೆಯವರೆಗೂ ಬೊಮ್ಮಾಯಿಯೇ ನಮ್ಮ ಸಿಎಂ : ಯಡಿಯೂರಪ್ಪ ಸ್ಪಷ್ಟನೆ
Outrage from state BJP through series of tweets against Priyank Kharge