ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಹೊರ ರಾಜ್ಯಗಳಿಗೆ ಸರಬರಾಜು : ಎಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಆಮ್ಲಜನಕದ ಕೊರತೆ ಉಂಟಾಗಿದೆ. ರಾಜ್ಯದಲ್ಲಿ ಉತ್ಪಾದನೆಯಾಗುವ ಆಮ್ಲಜನಕ ಗುಜರಾತ್, ಉತ್ತರ ಪ್ರದೇಶಕ್ಕೆ ಸರಬರಾಜು ಆಗುತ್ತಿದೆ. ಕೇಂದ್ರ ಸರಕಾರಕ್ಕೆ ರಾಜ್ಯದ  ಪರಿಸ್ಥಿತಿಯ ಮನವರಿಕೆ ಮಾಡಿಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ‌.

ರಾಜ್ಯದಲ್ಲಿ ಪರಿಸ್ಥಿತಿ ಸರಕಾರದ ಕೈ ಮೀರಿಲ್ಲ. ಆದರೆ ಪರಿಸ್ಥಿತಿಯನ್ನು ನಿರ್ವಹಣೆ ಮಾಡುವುದರಲ್ಲಿ ರಾಜ್ಯ ಸರಕಾರ ಎಡವಿದೆ. ರಾಜ್ಯದಲ್ಲಿ ಸಣ್ಣ ಆಕ್ಸಿಜನ್ ಉತ್ಪಾದನಾ ಘಟಕಗಳು ಮುಚ್ಚಿದ್ದು, ಅವುಗಳನ್ನು ತೆರೆಯುವ ನಿಟ್ಟಿನಲ್ಲಿ ಸರಕಾರ ಕ್ರಮವಹಿಸಬೇಕಾಗಿದೆ. ಇನ್ನು ಉತ್ಪಾದನಾ ವಲಯಕ್ಕೆ ಬಳಕೆಯಾಗುತ್ತಿರುವ ಆಮ್ಲಜನಕವನ್ನು ಸರಕಾರ ಆಸ್ಪತ್ರೆಗಳಿಗೆ ಪೂರೈಕೆ ಮಾಡಬೇಕು ಎಂದಿದ್ದಾರೆ.

ಮಾರ್ಚ್ 15 ರಂದು ರಾಜ್ಯದಲ್ಲಿ ಲಾಕ್ ಡೌನ್ ಹೇರಿಕೆಯ ಬಗ್ಗೆ ಸರಕಾರಕ್ಕೆ ಸೂಚಿಸಿದ್ದೇನೆ. ರಾಜ್ಯಪಾಲರ ಸಭೆಯಲ್ಲಿಯೂ ತಿಳಿಸಿ ದ್ದೇನೆ. ಆದರೆ ರಾಜ್ಯ ಸರಕಾರ ಲಾಕ್ ಡೌನ್ ಘೋಷಣೆ ಮಾಡಿಲ್ಲ. ಇದೀಗ ಸುಪ್ರೀಂ ಕೋರ್ಟ್ ಲಾಕ್ ಡೌನ್ ಹೇರಿಕೆ ಮಾಡುವಂತೆ ಸೂಚನೆಯನ್ನು ನೀಡಿದೆ. ರಾಜ್ಯದಲ್ಲಿ ಜನತಾ ಕರ್ಪ್ಯೂ, ನೈಟ್ ಕರ್ಪ್ಯೂ , ಸೆಕ್ಷನ್ ಹೇರಿಕೆಯಿಂದ ಏನು ಪ್ರಯೋಜನವಾಗಿದೆ ಎಂದು ಪ್ರಶ್ನಿಸಿದ್ದಾರೆ.

Comments are closed.