ಪಶ್ಚಿಮ ಬಂಗಾಳ ಉಪಚುನಾವಣೆ : ಮಮತಾ ಬ್ಯಾನರ್ಜಿ ಎಲ್ಲಿ ಕಣಕ್ಕೆ ಇಳಿಯುತ್ತಾರೆ ಗೊತ್ತಾ?

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಳಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಈ ಪಟ್ಟಿಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಹೆಸರು ಕೂಡಾ ಇದೆ. ಪಶ್ಚಿಮ ಬಂಗಾಳದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಟಿಎಂಸಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಮಮತಾ ಬ್ಯಾನರ್ಜಿ ನಿರೀಕ್ಷೆಯಂತೆಯೇ ಭವಾನಿಪುರ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಸೆಪ್ಟೆಂಬರ್ 30ಕ್ಕೆ ಉಪಚುನಾವಣೆ ನಿಗದಿಯಾಗಿದೆ.

ಇನ್ನುಳಿದ ಎರಡು ಕ್ಷೇತ್ರಗಳಾದ ಮುರ್ಷಿದಾಬಾದ್‌ನ ಜಂಗೀಪುರ ಕ್ಷೇತ್ರದಲ್ಲಿ ಮಾಜಿ ಸಚಿವ ಜಾಕಿರ್ ಹುಸೇನ್, ಸಮ್‌ಸೇರ್‌ಗಂಜ್ ಕ್ಷೇತ್ರದಿಂದ ಅಮಿರುಲ್ ಇಸ್ಲಾಂ ಕಣಕ್ಕೆ ಇಳಿಸಲಾಗಿದೆ ಎಂದು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಟ್ವೀಟ್ ಮಾಡಿದೆ. ಈ ಎರಡೂ ಕ್ಷೇತ್ರಗಳ ಶಾಸಕರು ಕೋವಿಡ್‌ನಿಂದಾಗಿ ಸಾವನ್ನಪ್ಪಿದ್ದಾರೆ. ಹೀಗಾಗಿ ಉಪಚುನಾವಣೆ ನಡೆಯುತ್ತಿದೆ.

ಇದನ್ನೂ ಓದಿ: Petrol-Diesel:ವಾಹನ ಸವಾರರಿಗೆ ಸಿಹಿಸುದ್ದಿ: ದೇಶದಾದ್ಯಂತ ಇಳಿಕೆಯಾಯ್ತು ಇಂಧನ ದರ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ವಕ್ಷೇತ್ರ ಭವಾನಿ ಪುರ ದಲ್ಲಿ ಸ್ಪರ್ಧಿಸಿರಲಿಲ್ಲ. ಬದಲಾಗಿ ನಂದಿಗ್ರಾಮ ಕ್ಷೇತ್ರದಲ್ಲಿ ಸ್ಪರ್ಧಿಸಿ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಸೋಲನ್ನುಂಡಿದ್ದರು. ಬಳಿಕ ಮಮತಾ ಬ್ಯಾನರ್ಜಿ ಮೇ 5ಕ್ಕೆ ಮುಖ್ಯಮಂತ್ರಿ ಯಾಗಿ ಅಧಿಕಾರ ಸ್ವೀಕಾರ ಮಾಡಿದ್ದರು. ಆದರೆ ನವೆಂಬರ್ 5ರ ಒಳಗೆ ವಿಧಾನಸಭೆಗೆ ಆಯ್ಕೆಯಾಗ ಬೇಕಿದೆ. ಈ ಹಿನ್ನೆಲೆಯಿಂದಾಗಿ ಮಮತಾ ಬ್ಯಾನರ್ಜಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಡಲು ಭವಾನಿಪುರದ ಶಾಸಕ ಸ್ಥಾನಕ್ಕೆ ಶೋಭನ್‌ದೇವ್‌ ಚಟ್ಟೋಪಾಧ್ಯಾಯ ರಾಜೀನಾಮೆ ನೀಡಿದ್ದರು. ಸೆಪ್ಟೆಂಬರ್ 30ಕ್ಕೆ ಉಪ ಚುನಾವಣೆ ನಿಗದಿಯಾಗಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ 17 ವರ್ಷಗಳ ಬಳಿಕ ಅರಳಿದ ಕಮಲ !

ಇನ್ನು ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಸೋಲು ಕಂಡಿದ್ದರೂ ಕೂಡಾ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಅಧಿಕ ಬಹುಮತ ಪಡೆದು ಪಶ್ಚಿಮ ಬಂಗಾಳ ರಾಜ್ಯವನ್ನು ತನ್ನ ತೆಕ್ಕೆಯಲ್ಲೇ ಉಳಿಸಿಕೊಂಡಿದೆ. ಈ ಕಾರಣದಿಂದಾಗಿ ಮಮತಾ ಬ್ಯಾನರ್ಜಿಯನ್ನೇ ಮುಖ್ಯಮಂತ್ರಿಯಾಗಿ ಟಿಎಂಸಿ ಪಕ್ಷ ಆಯ್ಕೆ ಮಾಡಿತ್ತು. ಈ ಹಿನ್ನೆಲೆ ಮಮತಾ ಬ್ಯಾನರ್ಜಿಗೆ ಶಾಸಕರಾಗಿ ಆಯ್ಕೆಯಾಗುವುದು ಅನಿವಾರ್ಯವಾಗಿದೆ. ಈ ಕಾರಣದಿಂದಾಗಿ ತಮ್ಮ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದಾರೆ.

(West Bengal bypoll : Do you know where Mamata Banerjee will enter the fray?)

Comments are closed.