ಆರೋಗ್ಯ ಸೇವೆ ಇನ್ನೂ ಹತ್ತಿರ : 120 ಅಂಬ್ಯುಲೆನ್ಸ್ ಉದ್ಘಾಟಿಸಿದ CM ಬಸವರಾಜ ಬೊಮ್ಮಾಯಿ

ಬೆಂಗಳೂರು : ರಾಜ್ಯ ಸರಕಾರ ಆರೋಗ್ಯ ಸೇವೆಗೆ ಹೆಚ್ಚಿನ ಒತ್ತು ನೀಡಿತ್ತಿದೆ. ಇದೀಗ ಜನರ ಅನುಕೂಲಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 120 ಆಂಬ್ಯುಲೆನ್ಸ್‌ಗಳನ್ನು ಲೋಕಾರ್ಪಣೆ ಮಾಡಿದ್ದಾರೆ‌. ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸೇರಿದಂತೆ ಹಲವರು ಸಚಿವರು ಉಪಸ್ಥಿತರಿದ್ದರು.

ಎಎನ್‌ಐ ಜೊತೆ ಮಾತನಾಡಿದ ಮುಖ್ಯಮಂತ್ರಿ, ‘ನಾವು ಸ್ಥಳೀಯ ಮತ್ತು ತಾಲೂಕು ಮಟ್ಟದಲ್ಲಿ ಆರೋಗ್ಯ ಮೂಲಸೌಕರ್ಯವನ್ನು ವಿಸ್ತರಿಸುತ್ತಿದ್ದೇವೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳು (ಪಿಎಚ್‌ಸಿ) ಮತ್ತು ಸಮುದಾಯ ಆರೋಗ್ಯ ಕೇಂದ್ರ (ಸಿಎಚ್‌ಸಿ) ಗಳಲ್ಲಿ ಎಲ್ಲಾ ಸೌಲಭ್ಯಗಳು ಮತ್ತು ಕೇಂದ್ರಗಳ ಉನ್ನತೀಕರಣದೊಂದಿಗೆ ವ್ಯಾಪ್ತಿಯನ್ನು ಹೆಚ್ಚಿಸಲು ಹೆಚ್ಚಿನ ಸಂಖ್ಯೆಯ ಆಂಬ್ಯುಲೆನ್ಸ್‌ಗಳನ್ನು ಸೇರಿಸಲು ನಿರ್ಧರಿಸಿದ್ದೇವೆ ಎಂದರು.

ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ಮೊದಲ ಅಧಿವೇಶನ: ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜು

ನಾವು ಆರೋಗ್ಯ ನಿಯತಾಂಕಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಆರೋಗ್ಯ ಮೂಲಸೌಕರ್ಯಗಳನ್ನು ಕಾಪಾಡುವ ನಿಟ್ಟಿನಲ್ಲಿ ನಾವು ವೈಜ್ಞಾನಿಕ ವಿಧಾನವನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಗಣೇಶೋತ್ಸವ ನಿಯಮ ಸಡಿಲಿಕೆ : ಸಿಎಂ ಬೊಮ್ಮಾಯಿ ಸೂಚನೆ

(CM Basavaraja Bommai inaugurated 120 ambulance)

Comments are closed.