ಸೋಮವಾರ, ಏಪ್ರಿಲ್ 28, 2025
Homekarnatakaರಾಜ್ಯ ಸರಕಾರದ ವಿರುದ್ದ ಕಾಂಗ್ರೆಸ್‌ ಆಕ್ರೋಶ : ಎತ್ತಿನ ಗಾಡಿಯಲ್ಲಿ ಅಧಿವೇಶಕ್ಕೆ ಆಗಮಿಸಿದ ಡಿಕೆಶಿ, ಸಿದ್ದರಾಮಯ್ಯ

ರಾಜ್ಯ ಸರಕಾರದ ವಿರುದ್ದ ಕಾಂಗ್ರೆಸ್‌ ಆಕ್ರೋಶ : ಎತ್ತಿನ ಗಾಡಿಯಲ್ಲಿ ಅಧಿವೇಶಕ್ಕೆ ಆಗಮಿಸಿದ ಡಿಕೆಶಿ, ಸಿದ್ದರಾಮಯ್ಯ

- Advertisement -

ಬೆಂಗಳೂರು : ಇಂದಿನಿಂದ ಸೆ.23ರವರೆಗೆ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ರಾಜ್ಯ ಸರ್ಕಾರಕ್ಕೆ ಬೆಲೆ ಏರಿಕೆಯ ಬಿಸಿ ಮುಟ್ಟಿಸಲು ಮುಂದಾಗಿರುವ ಕಾಂಗ್ರೆಸ್ ನಾಯಕರು ಎತ್ತಿನ ಗಾಡಿಯೇರಿ ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಈ ಮೂಲಕ ಕರ್ನಾಟಕದ ಬಿಜೆಪಿ ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸದಾಶಿವನಗರದ ತಮ್ಮ ನಿವಾಸದಿಂದ ಎತ್ತಿನಗಾಡಿಯಲ್ಲಿ ವಿಧಾನಸೌಧಕ್ಕೆ ಆಗಮಿಸಿದರೆ ಇನ್ನೊಂದೆಡೆ ವಿಪಕ್ಷ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಇತರ ಕಾಂಗ್ರೆಸ್ ನಾಯಕರು ಕೂಡ ಎತ್ತಿನಗಾಡಿಯಲ್ಲಿ ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಈ ಮೂಲಕ ಕೈ ನಾಯಕರು ಬೆಲೆ ಏರಿಕೆ ವಿರುದ್ಧ ಎತ್ತಿನ ಗಾಡಿ ಚಲೋ ನಡೆಸಿದ್ದಾರೆ.

ಇದನ್ನೂ ಓದಿ: Kota Srinivas Poojari : ವಿಧಾನ ಪರಿಷತ್‌ ಸಭಾನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ

ಈ ವೇಳೆ ಸರ್ಕಾರದ ವಿರುದ್ಧ ಕಿಡಿಕಾರಿದ ಡಿ.ಕೆ. ಶಿವಕುಮಾರ್, ರಾಜ್ಯ ಸರ್ಕಾರ ಜನರಿಂದ ಪ್ರತಿದಿನ ಪಿಕ್ ಪಾಕೆಟ್ ಮಾಡುತ್ತಿದೆ. ನಾವು ಜನರ ಧ್ವನಿಯಾಗಿ ಕೆಲಸ ಮಾಡುತ್ತಿದ್ದೇವೆ. ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ, ಅಗತ್ಯವಸ್ತುಗಳ ಬೆಲೆ ಏರಿಕೆಯಾಗಿದೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ಮೊದಲ ಅಧಿವೇಶನ: ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜು

ಕೋವಿಡ್ ನಂತಹ ಸಂಕಷ್ಟದ ಸಂದರ್ಭದಲ್ಲಿ ಬೆಲೆ ಏರಿಕೆ ನಡುವೆ ಜನಸಾಮಾನ್ಯರು ಬದುಕು ನಡೆಸುವುದಾದರು ಹೇಗೆ? ಸರ್ಕಾರಕ್ಕೆ ಕಣ್ಣು, ಕಿವಿ ಇಲ್ಲ. ಬೆಲೆ ಏರಿಕೆ ಕಡಿಮೆಯಾಗುವವರೆಗೂ ನಮ್ಮ ಹೋರಾಟ ನಿಲ್ಲಿಸಲ್ಲ. ಸರ್ಕಾರಕ್ಕೆ ಬಿಸಿಮುಟ್ಟಿಸಲೆಂದೇ ಎತ್ತಿನಗಾಡಿಯಲ್ಲಿ ಹೋರಾಟ ನಡೆಸುತ್ತಿದ್ದೇವೆ ಎಂದು ಹೇಳಿದರು.

(Congress outrage against state government)

RELATED ARTICLES

Most Popular