ಸೋಮವಾರ, ಏಪ್ರಿಲ್ 28, 2025
Homekarnatakaಸಿಎಂ ಬೊಮ್ಮಾಯಿಗೆ ಮೊದಲ ಅಧಿವೇಶನ: ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜು

ಸಿಎಂ ಬೊಮ್ಮಾಯಿಗೆ ಮೊದಲ ಅಧಿವೇಶನ: ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜು

- Advertisement -

ಬೆಂಗಳೂರು : ವಿಧಾನಮಂಡಲದ ಮಳೆಗಾಲದ ಅಧಿವೇಶನ ನಾಳೆಯಿಂದ ಆರಂಭವಾಗಲಿದ್ದು, ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿವೆ. ಪ್ರತಿಪಕ್ಷಗಳನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಸನ್ನದ್ಧವಾಗಿದೆ.

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ನಂತರ ನಡೆಯುತ್ತಿರುವ ಮೊದಲ ವಿಧಾನಮಂಡಲ ಅಧಿವೇಶನ ಇದಾಗಿದೆ. ರಾಜ್ಯದ ಹಲವು ಜ್ವಲಂತ ಸಮಸ್ಯೆಗಳ ವಿಚಾರದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿದ್ದು, ಇದನ್ನು ಎದುರಿಸಲು ಆಡಳಿತಪಕ್ಷ ಕೂಡ ಸಿದ್ಧವಾಗಿದೆ.

ಇದನ್ನೂ ಓದಿ: ನಮ್ಮ ಜೊತೆ ಹೊಂದಾಣಿಕೆ ಮಾಡಿಕೊಂಡ್ರೆ ಸಿಎಂ ಕುರ್ಚಿಗೆ ಕುತ್ತು: ರೇವಣ್ಣ ಟೀಕೆ

ಈಗಾಗಲೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಲಾಗಿದ್ದು, ಅಧಿವೇಶನದಲ್ಲಿ ಚರ್ಚಿಸುವ ವಿಷಯಗಳ ಕುರಿತು ಸಮಾಲೋಚನೆ ನಡೆಸಲಾಗಿದೆ.

ಇದನ್ನೂ ಓದಿ: ಗಡಿ ಜಿಲ್ಲೆಗಳ ಜಿಲ್ಲಾಡಳಿತಕ್ಕೆ ಖಡಕ್ ಸೂಚನೆ ಕೊಟ್ಟ ಸಿಎಂ ಬೊಮ್ಮಾಯಿ

(First session for CM Bommai)
RELATED ARTICLES

Most Popular