ಬೆಂಗಳೂರು : ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಇಂದು ಸಿಲಿಕಾನ್ ಸಿಟಿಯಲ್ಲಿ ಸೈಕಲ್ ರ‍್ಯೆಲಿ ನಡೆಸಿದ್ದಾರೆ. ರಾಲಿಯಲ್ಲಿ ಕೈ ಕಾರ್ಯಕರ್ತರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ನೇತೃತ್ವದಲ್ಲಿ ಟ್ರಿನಿಟಿ ಸರ್ಕಲ್ ನಿಂದ ಬ್ರಿಗೇಡ್ ರೋಡ್ ವರೆಗೆ ಸೈಕಲ್ ರ‍್ಯೆಲಿ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಪೆಟ್ರೋಲ್, ಡಿಸೆಲ್, ಅಡುಗೆ ಅನಿಲ ಬೆಲೆ ಏರಿಕೆಯನ್ನು ಖಂಡಿಸಿದರು.
ಇದನ್ನೂ ಓದಿ: ಬಿಜೆಪಿ ಸರ್ಕಾರ ಜನರ ರಕ್ತ ಕುಡಿಯುತ್ತಿದೆ : ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ
ಈ ವೇಳೆ ಮಾತನಾಡಿದ ಬಿ.ವಿ. ಶ್ರೀನಿವಾಸ್, ಸೂಜಿಯಿಂದ ಹಿಡಿದು ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಗಗನಮುಖಿಯಾಗಿದೆ. ಬೆಲೆ ಏರಿಕೆಗೆ ತಾಲಿಬಾನಿಗಳು ಕಾರಣ ಎಂದು ಬಿಜೆಪಿ ನಾಯಕರು ಹೇಳಿಕೆ ನೀಡುತ್ತಿದ್ದಾರೆ.
ಈ ಸರ್ಕಾರ ಕುಂಭಕರ್ಣ ನಿದ್ದೆಯಲ್ಲಿದೆ. ಬೆಲೆ ಏರಿಕೆ ನಿಯಂತ್ರಿಸದಿದ್ದರೆ ಯುವ ಕಾಂಗ್ರೆಸ್ ನಿಂದ ಇನ್ನೂ ದೊಡ್ಡಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
(Ride for Unity Rally by Congress activists: Outrage against state government)