ಮಂಗಳೂರು : ಉಪಚುನಾವಣೆ ಘೋಷಣೆಯಾದ ಬೆನ್ನಲ್ಲೇ ರಾಜ್ಯದ ರಾಜಕೀಯ ನಾಯಕ ನಡುವೆ ಮಾತಿನ ವಾಕ್ಸಮರ ಮುಂದುವರಿದಿದೆ. ಬಿಜೆಪಿಯನ್ನು ಸಿದ್ದರಾಮಯ್ಯ ತಾಲಿಬಾನ್‌ಗೆ ಹೋಲಿ ಮಾಡುತ್ತಲೇ, ಬಿಜೆಪಿ ನಾಯಕರು ಸಿದ್ದರಾಮಯ್ಯ ವಿರುದ್ದ ತಿರುಗಿಬಿದ್ದಿದ್ದಾರೆ. ಸಿದ್ದರಾಮಯ್ಯ ದೊಡ್ಡ ಭಯೋತ್ಪಾದಕ, ಅವರದ್ದು ತಾಲಿಬಾನ್ ಸಂಸ್ಕೃತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ದೊಡ್ಡ ಭಯೋತ್ಪಾದಕ ಎಂದು ಅನಿಸುತ್ತಿದೆ. ಸಿದ್ದರಾಮಯ್ಯ ಅತಂತ್ರ ಸ್ಥಿತಿಯಲ್ಲಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ತಾಲಿಬಾನ್ ಸಂಸ್ಕೃತಿ ಹೊಂದಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಅತೀ ಹೆಚ್ಚು ಹತ್ಯೆಗಳು ನಡೆದಿವೆ. ಕೊಲೆ,ಸುಲಿಗೆ, ಗೋಹತ್ಯೆ ಅವರ ಕಾಲದಲ್ಲೇ ಹೆಚ್ಚು ನಡೆದಿವೆ. 24 ಕ್ಕೂ ಹೆಚ್ಚು ಹಿಂದೂಗಳ ಹತ್ಯೆ ಆಗಿದ್ದು, ಅವರ ಸರ್ಕಾರದಲ್ಲೇ ಅವರಿಗೆ ನಮ್ಮ ಬಗ್ಗೆ ಕೇಳುವ ನೈತಿಕತೆ ಇಲ್ಲ ಎಂದು ಹೇಳಿದ್ದಾರೆ.
(Siddaramaiah is a big terrorist, his own Taliban culture: Kateel)