ಬೆಂಗಳೂರು : ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿಯದ್ದು ತಾಲಿಬಾನ್ ಮಾದರಿ ಆಡಳಿತ ಎಂದು ಹೇಳಿಕೆ ನೀಡಿದ್ದರು. ಅದಕ್ಕೆ ಉತ್ತರವಾಗಿ ಕೃಷಿ ಸಚಿವ ಬಿ.ಸಿ. ಪಾಟೀಲ್ ತಿರುಗೇಟು ನೀಡಿದ್ದಾರೆ.
ನಿಪ್ಪಾಣಿಯಲ್ಲಿ ಮಾಧ್ಯಮದವರೊದಿಗೆ ಮಾತನಾಡಿದ ಅವರು, ತಾಲಿಬಾನ್ ಸಂಸ್ಕೃತಿಯನ್ನು ಹೊಂದಿರುವವರೇ ಇನ್ನೊಬ್ಬರನ್ನು ತಾಲಿಬಾನ್ ಎಂದು ಕರೆದರೆ ಅದಕ್ಕೆ ಅರ್ಥವಿರೋದಿಲ್ಲ ಎಂದು ಕುಟುಕಿದ್ದಾರೆ.
ಬಿಜೆಪಿಯದ್ದು ತಾಲಿಬಾನ್ ಸಂಸ್ಕೃತಿಯಲ್ಲ. ಕಾಂಗ್ರೆಸ್ನವರದ್ದು ತಾಲಿಬಾನ್ ಸಂಸ್ಕೃತಿ. ತಾಲಿಬಾನ್ಗೆ ಬೆಂಬಲ ವ್ಯಕ್ತಪಡಿಸಿದ್ದು ಯಾರು..? ಪಾಕಿಸ್ತಾನಕ್ಕೆ ಬೆಂಬಲ ನೀಡಿದವರು ಯಾರು..? ಕಾಶ್ಮೀರದ ಪರವಾಗಿ ವಾದ ಮಾಡಿದ್ದು ಯಾರು..? ಎಂದು ಸಿದ್ದರಾಮಯ್ಯಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.
ಬಿಜೆಪಿ ಒಂದು ರಾಷ್ಟ್ರೀಯ ಪಕ್ಷ. ರಾಷ್ಟ್ರೀಯ ವಾದವನ್ನು ಹಿಡಿದುಕೊಂಡು ಹೋಗ್ತಿದೆ. ಹೀಗಿರುವಾಗ ಸಿದ್ದರಾಮಯ್ಯ ಬಿಜೆಪಿಯನ್ನು ತಾಲಿಬಾನ್ಗೆ ಹೋಲಿಕೆ ಮಾಡಿರುವುದು ಸರಿಯಲ್ಲ ಎಂದು ಬಿ.ಸಿ. ಪಾಟೀಲ್ ಹೇಳಿದ್ದಾರೆ.
ಇದನ್ನೂ ಓದಿ:ಬಿಜೆಪಿ ಸರ್ಕಾರ ಜನರ ರಕ್ತ ಕುಡಿಯುತ್ತಿದೆ : ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ
ಸಿಂದಗಿ , ಹಾನಗಲ್ ಉಪಚುನಾವಣೆ ವಿಚಾರವಾಗಿಯೂ ಇದೇ ವೇಳೆ ಮಾತನಾಡಿದ ಬಿ.ಸಿ. ಪಾಟೀಲ್, ಈ ಎರಡೂ ಕ್ಷೇತ್ರದ ಉಪಚುನಾವಣೆಯನ್ನು ಚಾಲೆಂಜ್ ಆಗಿ ಸ್ವೀಕಾರ ಮಾಡುತ್ತೇವೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಲಿದೆ. ನೂರಕ್ಕೆ ನೂರರಷ್ಟು ಬಿಜೆಪಿ ಅಭ್ಯರ್ಥಿಗಳೇ ಜಯ ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.
(Taliban culture, another is called Taliban: Siddaramaiah to B.C. Patil)