HDK vs Siddaramaiah : ಸುಳ್ಳು ಹೇಳುವುದಕ್ಕೂ ಇತಿಮಿತಿ ಇರಬೇಕು : ಸಿದ್ದು ವಿರುದ್ದ ಕುಮಾರಸ್ವಾಮಿ ವಾಗ್ದಾಳಿ

ರಾಮನಗರ : ಜಾತಿಗಣತಿ ವರದಿ ಬಿಡುಗಡೆ ವಿಚಾರ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಡುವಿನ ಮಾತಿನ ಸಮರಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯನವರ ಸುಳ್ಳಿಗೂ ಇತಿಮಿತಿ ಇರಬೇಕು ಎಂದು ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಜಾತಿ ಗಣತಿ ವರದಿ ಬಿಡುಗಡೆಗೆ ಕುಮಾರಸ್ವಾಮಿ ಬೆದರಿಕೆ ಇತ್ತು. ಅವರ ಮೇಲಿನ ಹೆದರಿಕೆಯಿಂದಲೇ ಅಂದು ಸಚಿವ ಪುಟ್ಟರಂಗಶೆಟ್ಟಿ ಸಮೀಕ್ಷೆ ಬಿಡುಗಡೆ ಮಾಡಲಿಲ್ಲ ಎಂಬ ಸಿದ್ದರಾಮಯ್ಯ ಆರೋಪಕ್ಕೆ ರಾಮನಗರದಲ್ಲಿ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಜಾತಿ ಗಣತಿ ವಿಚಾರವನ್ನು ಸದನದಲ್ಲಿ ಪ್ರಸ್ತಾಪಿಸಿ ಚರ್ಚೆ ನಡೆಸಬೇಕಿತ್ತು. ಜನರಿಗೆ ಸತ್ಯಾಂಶವನ್ನು ತಿಳಿಸಬಹುದಿತ್ತು. ಅದನ್ನು ಬಿಟ್ಟು ಸಿದ್ದರಾಮಯ್ಯ ಸದನದ ಹೊರಗೆ ಬೀದಿಯಲ್ಲಿ ಹೇಳಿಕೆಗಳನ್ನು ನೀಡುತ್ತಾ ಅನಗತ್ಯವಾಗಿ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ.

ಇದನ್ನೂ ಓದಿ:RIDE FOR UNITY : ಕೈ ಕಾರ್ಯಕರ್ತರಿಂದ ರೈಡ್ ಫಾರ್ ಯೂನಿಟಿ ರಾಲಿ: ರಾಜ್ಯ ಸರಕಾರ ವಿರುದ್ದ ಆಕ್ರೋಶ

ಹತ್ತು ದಿನಗಳ ಕಾಲ ನಡೆದ ಅಧಿವೇಶನದಲ್ಲಿ ಇವರು ಸದನದಲ್ಲಿ ನಡೆದುಕೊಂಡಿದ್ದು ಹೇಗೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ನಾನು ಜಾತಿ ಗಣತಿ ಬಿಡುಗಡೆಗೆ ತಡೆದೆ ಎನ್ನುವುದಾದರೆ ಅದನ್ನು ಸದನದಲ್ಲಿ ಪ್ರಸ್ತಾಪ ಮಾಡಬೇಕಾಗಿತ್ತು. ಸುಳ್ಳು ಹೇಳುವುದಕ್ಕೂ ಕೂಡ ಇತಿಮಿತಿ ಇರಬೇಕು. ಸಿದ್ದರಾಮಯ್ಯ ಪ್ರಚಾರಕ್ಕಾಗಿ ಜಾತಿ ಗಣತಿ ಹೇಳಿಕೆಗಳನ್ನು ನೀಡುತ್ತಾ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ಪ್ರತಿದಿನ ನನ್ನ ಹೆಸರನ್ನು ಕೆದಕಲಿಲ್ಲ ಎಂದರೆ ಸಿದ್ದರಾಮಯ್ಯನವರಿಗೆ ನಿದ್ದೆ ಬರಲ್ಲ ಅನಿಸುತ್ತೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಬಿಜೆಪಿ ಸರ್ಕಾರ ಜನರ ರಕ್ತ ಕುಡಿಯುತ್ತಿದೆ : ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ

(There should be no limit to lying: Kumaraswamy’s verdict against Siddaramaiah)

Comments are closed.