ದೆಹಲಿಗೆ ಹೊರಡಲು ಸಜ್ಜಾದ ಸಿಎಂ ಬೊಮ್ಮಾಯಿ : ಶಾಸಕರಿಗೆ ಶುರುವಾಗಿದ್ಯಾಕೆ ತಳಮಳ

ಬೆಂಗಳೂರು : ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ದೆಹಲಿಗೆ ಹೊರಡಲು ಸಜ್ಜಾಗಿದ್ದಾರೆ. ಸಿಎಂ ಯಾವ ಕಾರಣಕ್ಕೆ ದೆಹಲಿಗೆ ಹೊಟ್ಟಿದ್ದಾರೆ‌ ಅನ್ನೋದು ರಾಜ್ಯ ರಾಜಕೀಯದಲ್ಲಿ ಚರ್ಚೆಯನ್ನು ಹುಟ್ಟುಹಾಕಿಸಿದೆ. ಅಷ್ಟೇ ಯಾಕೆ ರಾಜಕಾರಣಿಗಳಲ್ಲಿ ತಳಮಳ ಮೂಡಿಸಿದೆ.

ಸಿಎಂ ಬೊಮ್ಮಾಯಿ ವೈಯಕ್ತಿಕ ಕಾರ್ಯದ ನಿಮಿತ್ತ ನಾಳೆ ಬೆಳಿಗ್ಗೆ ದೆಹಲಿಗೆ ತೆರಳುತ್ತಿದ್ದು, ಸಂಜೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಈ ವೇಳೆ ಖಾಲಿ ಇರುವ ನಾಲ್ಕು ಸಚಿವ ಸ್ಥಾನ ಭರ್ತಿಯ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಮೈಸೂರು ಪೇಟ, ಬೃಹತ್‌ ಹಾರ, ಮೈ ಮೇಲೆ ಶಾಲು : ತಮ್ಮ ಆದೇಶವನ್ನೇ ಉಲ್ಲಂಘಿಸಿದ ಸಿಎಂ ಬಸವರಾಜ್‌ ಬೊಮ್ಮಾಯಿ

ಸಿಎಂ ನಾಳೆ ದೆಹಲಿಗೆ ಭೇಟಿ ನೀಡುತ್ತಿರುವ ಹಿನ್ನೆಯಲ್ಲಿ ಇತ್ತ ಸಚಿವಾಕಾಂಕ್ಷಿಗಳಿಂದ ಲಾಬಿ ಆರಂಭವಾಗಿದೆ. ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಸೇರಿದಂತೆ ಹಲವು ಶಾಸಕರು ಸಚಿವ ಸ್ಥಾನಕ್ಕಾಗಿ ಪೈಪೋಟಿ ನಡೆಸಿದ್ದು, ಇಂದು ಸಿಎಂ ಬೊಮ್ಮಾಯಿ ಅವರನ್ನು ಬೆಂಗಳೂರಿನ ಆರ್.ಟಿ.ನಗರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಸಚಿವ ಸ್ಥಾನಕ್ಕಾಗಿ ಬೇಡಿಕೆಯಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Mysore : ಸಿಎಂ ಬೊಮ್ಮಾಯಿ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ : ಅರುಣ್ ಸಿಂಗ್

ಒಟ್ಟಾರೆ ಉಳಿದ ನಾಲ್ಕು ಸಚಿವ ಸ್ಥಾನ ಭರ್ತಿ ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆದಿರುವ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನಾಳಿನ ದೆಹಲಿ ಪ್ರಯಾಣ ತೀವ್ರ ಕುತೂಹಲ ಮೂಡಿಸಿದೆ.

(CM Bommai set to leave for Delhi: Why did MLAs start nervous)

Comments are closed.