Suraj Revanna arrest : ಹಾಸನ : ಮಾಜಿ ಸಚಿವ ಎಚ್‌ಡಿ ರೇವಣ್ಣ (HD Revann) ಕುಟುಂಬಕ್ಕೆ ಸದ್ಯ ಸಂಕಷ್ಟಗಳ ಸರಮಾಲೆಯಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಹಿರಿಯ ಮಗ ಪ್ರಜ್ವಲ್ ರೇವಣ್ಣ (Prajwal Revanna) ಜೈಲು ಸೇರಿದ್ದರೆ, ಇತ್ತ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ (Dr. Suraj Revanna arrest) ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ದ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಸೂರಜ್ ರೇವಣ್ಣ ಅವರನ್ನು ಹಾಸನದ ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಸೂರಜ್ ರೇವಣ್ಣ ಅವರು ತನ್ನ ಮೇಳೆ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಅರಕಲಗೋಡು ಮೂಲದ ಜೆಡಿಎಸ್ ಕಾರ್ಯಕರ್ತನೋರ್ವ ಪೊಲೀಸರಿಗೆ ದೂರು ನೀಡಿದ್ದ.
ಇದನ್ನೂ ಓದಿ : ಗೃಹಲಕ್ಷ್ಮೀ ಯೋಜನೆ 11ನೇ ಕಂತು : ರಾಜ್ಯ ಸರಕಾರದಿಂದ ಭರ್ಜರಿ ಗುಡ್‌ನ್ಯೂಸ್
ದೌರ್ಜನ್ಯಕ್ಕೆ ಒಳಗಾಗಿರುವ ಜೆಡಿಎಸ್ ಕಾರ್ಯಕರ್ತ ಡಿಜಿಪಿ ಕಚೇರಿಯಲ್ಲಿ ದೂರು ನೀಡಿ, ದೂರಿನ ಪ್ರತಿಯನ್ನು ಹಾಸನ ಎಸ್ಪಿ ಅವರಿಗೆ ಈ ಮೇಲ್ ಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಹೊಳೆ ನರಸೀಪುರ ಗ್ರಾಮಾಂತರ ಠಾಣೆಯ ಪೊಲೀಸರು ಸೆಕ್ಷನ್ 377, 342, 506ರ ಅಡಿಯಲ್ಲಿ ಅಸ್ವಾಭಾವಿಕ ಅಪರಾಧ, ಬೆದರಿಕೆಯೊಡ್ಡಿದ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸೂರಜ್ ರೇವಣ್ಣ ಅವರನ್ನು ವಿಚಾರಣೆಗೆ ಒಳಪಡಿಸಿರುವ ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಅಡಿಯಲ್ಲಿ ಪ್ರಜ್ವಲ್ ರೇವಣ್ಣ ಅರೆಸ್ಟ್ ಆಗಿದ್ದರು. ನಂತರದಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಯನ್ನು ಕಿಡ್ನಾಪ್ ಮಾಡಿರುವ ಪ್ರಕರಣದ ಅಡಿಯಲ್ಲಿ ಎಚ್‌ಡಿ ರೇವಣ್ಣ ಹಾಗೂ ಭವಾನಿ ರೇವಣ್ಣ ಬಂಧನಕ್ಕೆ ಒಳಗಾಗಿ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದಾರೆ.
ಇದನ್ನೂ ಓದಿ : ರಾಜ್ಯ ಸರ್ಕಾರ, ಬಿಬಿಎಂಪಿಯ ಮತ್ತೊಂದು ಎಡವಟ್ಟು: ಶಿಕ್ಷಕರ ಆಯ್ಕೆ ಹೊಣೆ ಸೆಕ್ಯೂರಿಟಿ ಏಜೆನ್ಸಿಗೆ
ಏನಿದು ಡಾ. ಸೂರಜ್ ರೇವಣ್ಣ ಪ್ರಕರಣ ?
ತಾನು ಜೂನ್ 16 ರಂದು ಗನ್ನಿಕಡ ಫಾರಂಹೌಸ್ ಗೆ ತೆರಳಿದ್ದ ವೇಳೆಯಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಅವರು ತನ್ನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಜೆಡಿಎಸ್ ಕಾರ್ಯಕರ್ತ ಆರೋಪ ಮಾಡಿದ್ದಾನೆ. ಅಲ್ಲದೇ ಈ ಕುರಿತು ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದ.

5 ಕೋಟಿಗೆ ಬ್ಲಾಕ್ ಮೇಲೆ ದೂರು ಕೊಟ್ಟ ಸೂರಜ್ ರೇವಣ್ಣ
ಜೆಡಿಎಸ್ ಕಾರ್ಯಕರ್ತ ದೂರು ನೀಡಿದ ಬೆನ್ನಲ್ಲೇ ಡಾ. ಸೂರಜ್ ರೇವಣ್ಣ ಪರವಾಗಿ ಆಪ್ತ ಶಿವಕುಮಾರ್ ಎಂಬವರು, ಪ್ರತಿದೂರು ನೀಡಿದ್ದು. ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ವ್ಯಕ್ತಿ ತಮಗೆ 5ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.
ಇದನ್ನೂ ಓದಿ : HSRP Number Plate Deadline : ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಅವಧಿ ಸೆಪ್ಟೆಂಬರ್ 15ರ ವರೆಗೆ ವಿಸ್ತರಣೆ
ಜೂನ್ 16 ರಂದು ಜೆಡಿಎಸ್ ಕಾರ್ಯಕರ್ತ ಸೂರಜ್ ರೇವಣ್ಣ ಅವರ ಬಳಿಯಲ್ಲಿ ಕೆಲಸ ಕೇಳಿಕೊಂಡು ಬಂದಿದ್ದರು. ಆದರೆ ಈ ವೇಳೆಯಲ್ಲಿ ನಿಮ್ಮ ನಾಯಕರಿಂದ ಕೆಲಸ ಕೊಡಿಸಲು ಸಾಧ್ಯವಿಲ್ಲ. ನನಗೆ ತುಂಬಾ ಕಷ್ಟವಿದ್ದು, ಐದು ಕೋಟಿ ರೂಪಾಯಿ ಹಣ ನೀಡಬೇಕು. ಇಲ್ಲವಾದ್ರೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದ ಎಂದು ಹೊಳೆನರಸಿಪುರ ಠಾಣೆಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇನ್ನೊಂದೆಡೆ ಯಲ್ಲಿ ಖುದ್ದು ಸೂರಜ್ ರೇವಣ್ಣ ಅವರು ಹಾಸನ ಠಾಣೆಯಲ್ಲಿ ದೂರುದಾರನ ವಿರುದ್ದ ಮತ್ತೊಂದು ಪ್ರಕರಣ ದಾಖಲಿಸಿದ್ದರು.
Prajwal Revanna behind, Suraj Revanna arrested: What is the case ?