pramod madhvaraj :ಕಾಂಗ್ರೆಸ್​ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ ಪ್ರಮೋದ್ ಮಧ್ವರಾಜ್​

ಉಡುಪಿ : pramod madhvaraj : ಮಾಜಿ ಸಚಿವ ಹಾಗೂ ಮಾಜಿ ಶಾಸಕ ಪ್ರಮೋದ್​ ಮಧ್ವರಾಜ್​ ಕಾಂಗ್ರೆಸ್​ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ಗೆ ಪತ್ರ ಬರೆಯುವ ಮೂಲಕ ಕಾಂಗ್ರೆಸ್​ ಪಕ್ಷಕ್ಕೆ ಪ್ರಮೋದ್​ ಮಧ್ವರಾಜ್​ ರಾಜೀನಾಮೆಯನ್ನು ಘೋಷಿಸಿದ್ದಾರೆ. ಬಿಜೆಪಿ ಸೇರ್ಪಡೆಗ ಗ್ರೀನ್​ ಸಿಗ್ನಲ್​ ದೊರೆತ ಬೆನ್ನಲ್ಲೇ ಪ್ರಮೋದ್​ ಮಧ್ವರಾಜ್​ ರಾಜೀನಾಮೆ ನಿರ್ಧಾರವನ್ನು ಘೋಷಿಸಿದ್ದಾರೆ ಎನ್ನಲಾಗಿದೆ.


ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ಗೆ ಪತ್ರ ಬರೆದಿರುವ ಪ್ರಮೋದ್​ ಮಧ್ವರಾಜ್​ ಇಷ್ಟು ವರ್ಷಗಳ ಕಾಲ ನನಗೆ ಕಾಂಗ್ರೆಸ್​ ಪಕ್ಷದಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕೆ ಧನ್ಯವಾದಗಳು.ಕಾಂಗ್ರೆಸ್​ ಸರ್ಕಾರದ ಅವಧಿಯಲ್ಲಿ ನನಗೆ ಸಚಿವ ಸ್ಥಾನವನ್ನು ನೀಡಿ ಜನರ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕೆ ಆಭಾರಿಯಾಗಿದ್ದೇನೆ. ಆದರೆ ಉಡುಪಿ ಜಿಲ್ಲಾ ಕಾಂಗ್ರೆಸ್​ನಲ್ಲಿ ನನಗೆ ಮುಂದುವರಿಯಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಲು ವಿಷಾದ ವ್ಯಕ್ತಪಡಿಸುತ್ತೇನೆ. ನನಗೆ ಕೆಪಿಸಿಸಿ ಉಪಾಧ್ಯಕ್ಷನ ಸ್ಥಾನವನ್ನು ನೀಡಿದ್ದೀರಿ. ಆದರೆ ಇದನ್ನು ಒಪ್ಪಿಕೊಳ್ಳಲು ನನ್ನಿಂದ ಸಾಧ್ಯವಾಗುತ್ತಿಲ್ಲ. ಹೀಗಾಗಿ ನಾನು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ಸುದೀರ್ಘವಾಗಿ ಬರೆದಿದ್ದಾರೆ.


ಸಿದ್ದರಾಮಯ್ಯ ರಾಜ್ಯದ ಸಿಎಂ ಆಗಿದ್ದ ಸಂದರ್ಭದಲ್ಲಿ ಪ್ರಮೋದ್​ ಮಧ್ವರಾಜ್​ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವನಾಗಿ ಸೇವೆ ಸಲ್ಲಿಸಿದ್ದಾರೆ. ಕಳೆದ ಬಾರಿಯ ಚುನಾವಣೆಯಲ್ಲಿ ಇವರು ಜೆಡಿಎಸ್​ – ಕಾಂಗ್ರೆಸ್ ಜಂಟಿ ಅಭ್ಯರ್ಥಿಯೆಂದುಕೊಂಡು ಚುನಾವಣಾ ಕಣಕ್ಕೆ ಇಳಿದಿದ್ದರು. ಇದಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ಸಿಗರು ಅಸಮಾಧಾನ ಹೊರ ಹಾಕಿದ್ದರು. ಹೀಗಾಗಿ ಪ್ರಮೋದ್​ ಮಧ್ವರಾಜ್​ ಬಿಜೆಪಿಯ ಕದ ತಟ್ಟಿದ್ದರು. ಆದರೆ ಉಡುಪಿ ಜಿಲ್ಲಾ ಬಿಜೆಪಿಯು ಪ್ರಮೋದ್​ ಮಧ್ವರಾಜ್​ರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಅಷ್ಟೊಂದು ಒಲವು ತೋರಿರಲಿಲ್ಲ. ಆದರೆ ಇದೀಗ ಬಿಜೆಪಿಯು ಪ್ರಮೋದ್​ ಮಧ್ವರಾಜ್​ಗೆ ಪಕ್ಷ ಸೇರ್ಪಡೆಗ ಗೇಟ್​ ಒಪನ್​ ಮಾಡಿದೆ ಎನ್ನಲಾಗಿದ್ದು ಈ ಬೆಳವಣಿಗೆಯ ಬೆನ್ನಲ್ಲೇ ಪ್ರಮೋದ್​ ಮಧ್ವರಾಜ್​ ಕಾಂಗ್ರೆಸ್​ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಇದನ್ನು ಓದಿ : Mohan Juneja : ಸ್ಯಾಂಡಲ್‌ವುಡ್‌ ಖ್ಯಾತ ಹಾಸ್ಯನಟ ಮೋಹನ್‌ ಜುನೇಜ ಇನ್ನಿಲ್ಲ

ಇದನ್ನೂ ಓದಿ : CSK out of Playoffs : IPL 2022 ರಲ್ಲಿ ಪ್ಲೇಆಫ್ ರೇಸ್‌ನಿಂದ ಹೊರಬಿದ್ದ CSK : ಇಲ್ಲಿದೆ ಐಪಿಎಲ್‌ ಪಾಯಿಂಟ್ಸ್‌ ಟೇಬಲ್‌

pramod madhvaraj resigned congress party

Comments are closed.