ಕಾರ್ಕಳ: (Pramod Muthalik contesting from Karkala) ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ದಿಸುವ ಕ್ಷೇತ್ರದ ಬಗ್ಗೆ ಅಧಿಕೃತವಾಗಿ ಪ್ರಮೋದ್ ಮುತಾಲಿಕ್ ಘೋಷಣೆ ಮಾಡಿದ್ದಾರೆ. ಈ ಬಾರಿ ಕಾರ್ಕಳ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಘೋಷಿಸಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿಯೂ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುತಾಲಿಕ್ ಮುಂದಾಗಿದ್ದಾರೆ. ಅವರು ರಾಜ್ಯದ ಆರು ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸಿದ್ದಾರೆ. ಅಂತಿಮವಾಗಿ ಬಿಜೆಪಿಯ ಪ್ರಭಾವಿ ಸಚಿವ ಸುನೀಲ್ ಕುಮಾರ್ ಕ್ಷೇತ್ರವಾದ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ ಎಂದು ವರದಿಯಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ” ಈ ಬಾರಿ ಕಾರ್ಕಳ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ. ಕ್ಷೇತ್ರಕ್ಕೆ 7-8 ಬಾರಿ ಭೇಟಿ ನೀಡಿದ್ದೇನೆ. ಜನರು ಬೆಂಬಲ ನೀಡುತ್ತಿದ್ದಾರೆ. ಅದಕ್ಕಾಗಿಯೇ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ. ಯಾರು ಏನೇ ಒತ್ತಡ ಹಾಕಿದರೂ ಕಾರ್ಕಳ ಕ್ಷೇತ್ರದಲ್ಲೇ ಸ್ಪರ್ಧೆ ಮಾಡುವುದು ನಿಶ್ಚಿತ. ಸಾವಿರಾರು ಕಾರ್ಯಕರ್ತರ ನೋವಿನ ಧ್ವನಿಯಾಗಿ, ಅವರ ಒತ್ತಡದಿಂದ ನಾನು ಸ್ಪರ್ಧೆ ಮಾಡುತ್ತೇನೆ” ಎಂದರು.
” ನಾನು ಬಿಜೆಪಿ ಸಿದ್ಧಾಂತದ ವಿರೋಧಿಯಲ್ಲ. ನಾನು ಮೋದಿ ಪರವಾಗಿ ಹಿಂದುತ್ವದ ಪರವಾಗಿದ್ದೇನೆ. ಗೆದ್ದ ನಂತರವೂ ನನ್ನ ಬೆಂಬಲ ಬಿಜೆಪಿಗೆ ಇರಲಿದೆ. ನನ್ನ ಸ್ಪರ್ಧೆ ಏನಿದ್ದರೂ ವ್ಯಕ್ತಿಗಳ ವಿರುದ್ದ, ಭ್ರಷ್ಠರ ವಿರುದ್ದ, ಇಂದು ವಿರೋಧಿಗಳ ವಿರುದ್ದ” ಎಂದಿದ್ದಾರೆ. ಇದೀಗ ಪ್ರಮೋದ್ ಮುತಾಲಿಕ್ ಅವರ ಈ ಘೋಷಣೆಯಿಂದಾಗಿ ಕಾರ್ಕಳ ವಿಧಾನಸಭೆ ಚುನಾವಣೆ ಕಣ ರಂಗೇರಿದ್ದು, ಇಂಧನ ಸಚಿವ ವಿ ಸುನೀಲ್ ಕುಮಾರ್ ಅವರ ಕ್ಷೇತ್ರದಲ್ಲಿ ಇದೀಗ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.
ಇದನ್ನೂ ಓದಿ : ಪುತ್ತೂರು, ಬಂಟ್ವಾಳ ಸೇರಿ ಈ ಬಾರಿ ಹೊಸ ಮುಖಗಳಿಗೆ ಟಿಕೆಟ್: ಗೌಪ್ಯವಾಗಿ ಹಿರಿಯರಿಗೆ ಖಡಕ್ ಸಂದೇಶ ಕೊಟ್ಟ ಕಾಂಗ್ರೆಸ್ ಹೈಕಮಾಂಡ್
ಇದನ್ನೂ ಓದಿ : ಸಂತೆಕಟ್ಟೆಯಲ್ಲಿ ಓವರ್ ಪಾಸ್ ನಿರ್ಮಾಣಕ್ಕೆ ಶಿಲನ್ಯಾಸ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಇದನ್ನೂ ಓದಿ : MLA Election 2023 Siddaramaiah : ಸಿದ್ದರಾಮಯ್ಯಗೆ ಸೂಚನೆ ಕೊಟ್ಟ ಮನೆ ದೇವರು : 2 ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ದೈವವಾಣಿ
Pramod Muthalik contesting from Karkala: Pramod Muthalik is contesting from Karkala constituency as a non-party candidate