ನವದೆಹಲಿ : ಭಾರತದ ಪ್ರಧಾನಿ ನರೇಂದ್ರ ಮೋದಿ ವಿಶ್ವದಾದ್ಯಂತ ಪ್ರಸಿದ್ದಿಯನ್ನು ಪಡೆದುಕೊಂಡಿದ್ದಾರೆ. ವಿಶ್ವದ ಬಹುತೇಕ ರಾಷ್ಟ್ರಗಳಿಂದು ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದು ನರೇಂದ್ರ ಮೋದಿ. ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಇಂದು ವಿಶ್ವಕ್ಕೆ ಮನವರಿಕೆಯಾಗುತ್ತಿದ್ದು, ಟ್ವೀಟರ್ ಖಾತೆಯ ಮೂಲಕ ಚಾಯ್ ವಾಲಾ ಹೊಸ ದಾಖಲೆಯನ್ನು ಬರೆದಿದ್ದಾರೆ.

ನರೇಂದ್ರ ಮೋದಿ ಮಾಡಿದ್ದೆಲ್ಲಾ ದಾಖಲೆಯ ಪುಟಗಳೇ ಸೇರುತ್ತಿದೆ. ಜನರ ಸಮಸ್ಯೆಗಳನ್ನು ಅರಿಯುವ ಸಲುವಾಗಿ ಸದಾ ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯವಾಗಿರುವ ಮೋದಿ ಇದೀಗ ಟ್ವೀಟರ್ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. 2009ರಿಂದಲೂ ಟ್ವೀಟರ್ ಬಳಕೆ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ದೇಶವಾಸಿಗಳೊಂದಿಗೆ ನೇರ ಸಂಪರ್ಕವನ್ನು ಹೊಂದುತ್ತಿದ್ದಾರೆ.

ಜನರು ಪ್ರಧಾನಿಗಳೊಂದಿಗೆ ತಮ್ಮ ಸಮಸ್ಯೆಗಳನ್ನು ನೇರವಾಗಿ ಹಂಚಿಕೊಳ್ಳುವಷ್ಟರ ಮಟ್ಟಿಗೆ ಮೋದಿ ಟ್ವೀಟರ್ ಮೂಲಕ ಜನರಿಗೆ ಹತ್ತಿರವಾಗಿದ್ದಾರೆ. ಅದೆಷ್ಟೋ ಸಮಸ್ಯೆಗಳನ್ನು ತಮ್ಮ ಟ್ವೀಟರ್ ಖಾತೆಯ ಮೂಲಕವೇ ಪರಿಹಾರವನ್ನು ದೊರಕಿಸಿಕೊಡುವ ಕಾರ್ಯವನ್ನು ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಟ್ವೀಟರ್ ನಲ್ಲಿ ಹೊಸ ದಾಖಲೆಯನ್ನು ಬರೆದಿದ್ದು, ಟ್ವೀಟರ್ ಖಾತೆಯಲ್ಲಿ ಅತೀ ಹೆಚ್ಚು ಹಿಂಬಾಲಕರನ್ನು ಹೊಂದಿರುವ ರಾಜಕಾರಣಿಗಳ ಸಾಲಿನಲ್ಲಿ ವಿಶ್ವದಲ್ಲಿಯೇ ಮೂರನೇ ಸ್ಥಾನದಲ್ಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ವೈಯಕ್ತಿಕ ಖಾತೆಯಲ್ಲಿ 6 ಕೋಟಿ ಹಿಂಬಾಲಕರನ್ನು ಹೊಂದಿದ್ದರೆ, ಪಿಎಂಓ ಇಂಡಿಯಾ ಖಾತೆಯಲ್ಲಿ 3 ಕೋಟಿಗೂ ಅಧಿಕ ಹಿಂಬಾಲಕರಿದ್ದಾರೆ.