R. Dhruvanarayana: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ ನಿಧನ

ಮೈಸೂರು: (R. Dhruvanarayana) 61 ವರ್ಷ ಪ್ರಾಯದ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಆರ್.ಧ್ರುವನಾರಾಯಣ ಇಂದು ಬೆಳಗ್ಗೆ ಹೃದಯಾಘಾತದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹೃದಯಾಘಾತ ಸಂಭವಿಸಿದ ಕೂಡಲೇ ಅವರನ್ನು ಮೈಸೂರಿನ ಡಿಆರ್​ಎಂಎಸ್​​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ.

2004ರಲ್ಲಿ ಸಂತೇಮರಹಳ್ಳಿ ವಿಧಾನ ಸಭಾ ಕ್ಷೇತ್ರ ಹಾಗೂ 2008ರಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳಿಂದ ಸತತ ಎರಡು ಬಾರಿ ಶಾಸಕರಾಗಿ ಜಯ ಗಳಿಸಿದ್ದರು. 1999ರಲ್ಲಿ ಸಂತೇಮರಹಳ್ಳಿ ಕ್ಷೇತ್ರದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಎ.ಆರ್. ಕೃಷ್ಣಮೂರ್ತಿ ಅವರ ಎದುರು ಪರಾಜಿತರಾದರು. ಆದರೆ ಇದೇ ಕೃಷ್ಣಮೂರ್ತಿ ಅವರನ್ನು 2004ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 1 ಮತದಿಂದ ಧೃವನಾರಾಯಣ (R. Dhruvanarayana) ಸೋಲಿಸಿದ್ದರು. ಹಾಗೆಯೇ 2009 ಹಾಗೂ 2014ರ ಲೋಕಸಭಾ ಚುನಾವಣೆಯಲ್ಲಿ ಕೂಡ ಕೃಷ್ಣಮೂರ್ತಿ ಅವರನ್ನು ಸೋಲಿಸಿ ಸಂಸದರಾದರು

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವ ನಾರಾಯಣ ಅವರು ನಂಜನಗೂಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ನಿರ್ಧರಿಸಿದ್ದರು. ಈ ಹಿನ್ನೆಲೆಯಲ್ಲಿ ಮತದಾರರನ್ನು ಭೇಟಿ ಮಾಡುವ ಕಾರ್ಯದಲ್ಲಿ ತೊಡಗಿದ್ದರು. ಇನ್ನು ಇಂದಿನ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಗಳನ್ನು ಮುಂದೂಡುವ ಸಾಧ್ಯತೆಯಿದ್ದು, ರಾಣೆಬೆನ್ನೂರಿನಲ್ಲಿ ನಡೆಯಲಿರುವ ಪ್ರಜಾಧ್ವನಿ ಸಮಾವೇಶವನ್ನು ಮುಂದೂಡುವ ಸಾಧ್ಯತೆಯಿದೆ.

ಇದನ್ನೂ ಓದಿ : BJP campaign committee list: ಪ್ರಚಾರ ಸಮಿತಿ ಪಟ್ಟಿ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ

ಇದನ್ನೂ ಓದಿ : Sumalatha join BJP: ನನ್ನ ಬೆಂಬಲ ನರೇಂದ್ರ ಮೋದಿ ಸರಕಾರಕ್ಕೆ: ಬಿಜೆಪಿ ಸೇರ್ಪಡೆ ಬಗ್ಗೆ ಸುಮಲತಾ ಅಧಿಕೃತ ಘೋಷಣೆ

ಇದನ್ನೂ ಓದಿ : ಬಿಜೆಪಿಗೆ ಬಿಸಿತುಪ್ಪವಾದ ಸೋಮಣ್ಣ ಮುನಿಸು: ಸ್ವತಃ ಸಂಧಾನಕ್ಕಿಳಿದ ಸಿಎಂ ಬೊಮ್ಮಾಯಿ

ಧ್ರುವನಾರಾಯಣ ಅವರಿಗೆ ನಂಜನಗೂಡು ಕ್ಷೇತ್ರಕ್ಕೆ ಬಹುತೇಕ ಟಿಕೆಟ್ ‌ಖಚಿತವಾಗಿತ್ತು. ಮಹಾದೇವಪ್ಪ ಹಾಗೂ ಧ್ರುವನಾರಾಯಣ ನಡುವೆ ಸಿದ್ದರಾಮಯ್ಯ, ಡಿಕೆಶಿ ಸಂಧಾನ ಕೂಡ ಮಾಡಿದ್ದರು. ಇನ್ನು 1983ರಲ್ಲಿ ಓರ್ವ ಸಾಮಾನ್ಯ ಕಾರ್ಯಕರ್ತನಾಗಿ ಕಾಂಗ್ರೆಸ್ ಪಕ್ಷ ಸೇರಿದ ಆರ್. ಧ್ರುವನಾರಾಯಣ ಅವರು ಕಾಲಾಂತರದಲ್ಲಿ ಪಕ್ಷದ ಮುಖಂಡನಾಗಿ ಬೆಳೆದರು.

R. Dhruvanarayana: KPCC Working President R. Dhruvanarayana passed away

Comments are closed.