Rahul Gandhi : ಬಿಜೆಪಿಯನ್ನು ಸೋಲಿಸಲು ವಿರೋಧ ಪಕ್ಷಗಳು ಒಟ್ಟಾಗಲಿವೆ : ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ

ಪಾಟ್ನಾ: (Rahul Gandhi) ಮುಂಬರುವ 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ವಿರೋಧ ಪಕ್ಷಗಳು ಒಟ್ಟಾಗಿ ಬಿಜೆಪಿಯನ್ನು ಸೋಲಿಸಲಿವೆ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಹೇಳಿದ್ದಾರೆ. ಅಲ್ಲದೇ ಮುಂಬರುವ ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ತೆಲಂಗಾಣದಲ್ಲಿ ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ದಾಖಲಿಸಲಿದೆ ಎಂದಿದ್ದಾರೆ.

ಅವರು ಲಕ್ನೋದಲ್ಲಿನ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರನ್ನು ಉದ್ದೇಶಿಸಿ ಮಾತನಾಡಿದ್ರು. ಬಿಜೆಪಿ ಭಾರತವನ್ನು ವಿಭಜಿಸಲು ಹಾಗೂ ದ್ವೇಷ, ಹಿಂಸಾಚಾರವನ್ನು ಹರಡುವ ಕೆಲಸವನ್ನು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಸದ್ಯ ಭಾರತದಲ್ಲಿ ಸಿದ್ದಾಂತಗಳ ಹೋರಾಟ ನಡೆಯುತ್ತಿದೆ. ಕಾಂಗ್ರೆಸ್‌ ಒಂದೆಡೆ ‘ಭಾರತ್ ಜೋಡೋ’ ಸಿದ್ಧಾಂತ ಮತ್ತು ಇನ್ನೊಂದು ಕಡೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ‘ಭಾರತ್ ತೋಡೊ’ ಚಿಂತನೆ ಇದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಎಲ್ಲಾ ವಿರೋಧ ಪಕ್ಷಗಳು ಇಲ್ಲಿಗೆ ಬಂದಿವೆ ಮತ್ತು ನಾವು ಒಟ್ಟಾಗಿ ಬಿಜೆಪಿಯನ್ನು ಸೋಲಿಸಲಿದ್ದೇವೆ, ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಬಿಜೆಪಿ ವಿರೋಧಿ ರಂಗ ರಚನೆಗೆ ಮಾರ್ಗಸೂಚಿ ರೂಪಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಕಾರ್ಯತಂತ್ರ ರೂಪಿಸಿದ್ದಾರೆ. ಜೆಡಿಯುನ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಅವರ ಉಪನಾಯಕ ಆರ್ಜೆಡಿಯ ತೇಜಸ್ವಿ ಯಾದವ್ ಆಯೋಜಿಸಿದ್ದರು. ಕರ್ನಾಟಕದಲ್ಲಿ ಕಾಂಗ್ರೆಸ್‌ ನಾಯಕರು ಒಗ್ಗಟ್ಟಾಗಿ ನಿಂತ ನಂತರದಲ್ಲಿ ಬಿಜೆಪಿ ಕಣ್ಮರೆಯಾಗಿದೆ. ತೆಲಂಗಾಣ, ಛತ್ತೀಸ್‌ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿ ಇಲ್ಲ. ಕಾಂಗ್ರೆಸ್‌ ಪಕ್ಷ ಬಡವರ ಪರ ನಿಲ್ಲುತ್ತದೆ. ನಾವು ಜನರನ್ನು ಒಗ್ಗೂಡಿಸುವ ಹಾಗೂ ಪ್ರೀತಿಯನ್ನು ಹರಡುವ ಕಾರ್ಯವನ್ನು ಮಾಡುತ್ತಿದ್ದೇವೆ. ದ್ವೇಷವನ್ನು ದ್ವೇಷದಿಂದ ಎದುರಿಸಲು ಸಾಧ್ಯವಿಲ್ಲ ಅನ್ನೋದು ನಮಗೆ ಚೆನ್ನಾಗಿ ತಿಳಿದಿದೆ.ಪ್ರೀತಿಯಿಂದ ದ್ವೇಷವನ್ನು ಎದುರಿಸಲು ಮತ್ತು ದ್ವೇಷದ ವಿರುದ್ಧ ನಾವು ಹೋರಾಡುತ್ತೇವೆ. ಆದ್ದರಿಂದ ನಾವು ಪ್ರೀತಿಯ ಬಗ್ಗೆ ಮಾತನಾಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : Parvati Siddaramaiah : ಸಿಎಂ ಸಿದ್ದರಾಮಯ್ಯ ಪತ್ನಿ ಆಸ್ಪತ್ರೆಗೆ ದಾಖಲು

ಇದನ್ನೂ ಓದಿ : Gruha Lakshmi Scheme : ಗೃಹಲಕ್ಷ್ಮೀ ಯೋಜನೆಗೆ ನಿಮ್ಮ ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಬಹುದು : ಇಲ್ಲಿದೆ ಕಂಪ್ಲೀಟ್‌ ಮಾಹಿತಿ

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಕೇವಲ ಎರಡರಿಂದ ಮೂರು ಜನರ ಲಾಭಕ್ಕಾಗಿ ಕೆಲಸ ಮಾಡುತ್ತಿದೆ. ಇಡೀ ದೇಶದ ಸಂಪತ್ತನ್ನು ಅವರಿಗೆ ಹಸ್ತಾಂತರಿಸುತ್ತಿದೆ ಎಂದು ಇಡೀ ದೇಶ ಅರ್ಥಮಾಡಿಕೊಂಡಿದೆ. ಕಾಂಗ್ರೆಸ್ ಎಂದರೆ ಬಡವರ ಜೊತೆ ನಿಲ್ಲುವುದು, ಅವರನ್ನು ಭೇಟಿ ಮಾಡುವುದು, ಅಪ್ಪಿಕೊಳ್ಳುವುದು ಮತ್ತು ಅವರಿಗಾಗಿ ಕೆಲಸ ಮಾಡುವುದು’ ಎಂದರು. ಭಾರತ್ ಜೋಡೋ ಯಾತ್ರೆಗೆ ನೀಡಿದ ಕೊಡುಗೆ ಮತ್ತು ಬೆಂಬಲಕ್ಕಾಗಿ ಅವರು ಅವರಿಗೆ ಧನ್ಯವಾದ ತಿಳಿಸಿದ್ದಾರೆ. 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಮಾರ್ಗಸೂಚಿಯನ್ನು ರೂಪಿಸಲು ಗಾಂಧಿ ಅವರು ಕಾಂಗ್ರೆಸ್ ಮುಖ್ಯಸ್ಥ ಖರ್ಗೆ ಮತ್ತು ಇತರ ಪಕ್ಷದ ನಾಯಕರೊಂದಿಗೆ ಪ್ರತಿಪಕ್ಷಗಳ ಸಭೆಯಲ್ಲಿ ಭಾಗವಹಿಸಿದರು.

Rahul Gandhi : Opposition parties will unite to defeat BJP: Congress leader Rahul Gandhi

Comments are closed.