Rahul Gandhi sacked : ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ವಜಾ

ನವದೆಹಲಿ : (Rahul Gandhi sacked) ಕೇರಳದ ವಯನಾಡ್‌ನ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ತಮ್ಮ ‘ಮೋದಿ ಉಪನಾಮ’ ಹೇಳಿಕೆಯಿಂದಾಗಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೊಳಗಾಗಿದ್ದು, ಇದಾದ ಬಳಿಕ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದಾರೆ. ಗಾಂಧಿ ಉಪನಾಮ ಮಾನಹಾನಿ ಪ್ರಕರಣದಲ್ಲಿ ದೋಷಿಯಾದ ರಾಹುಲ್‌ ಗಾಂಧಿಗೆ ಗುಜರಾತ್ ನ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ನೀಡಿದೆ.

2019ರಲ್ಲಿ ‘ಮೋದಿ’ ಎಂಬ ಮನೆತನದ ಹೆಸರಿಗೆ ಅಪಮಾನವಾಗುವಂತೆ ಹೇಳಿಕೆ ನೀಡಿದ್ದಕ್ಕೆ ಸಂಬಂಧಪಟ್ಟಂತೆ ರಾಹುಲ್‌ ಗಾಂಧಿ ವಿರುದ್ಧ ಸೂರತ್‌ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಸೂರತ್‌ನ ಸ್ಥಳೀಯ ನ್ಯಾಯಾಲಯ ರಾಹುಲ್‌ ಗಾಂಧಿ ಅವರು ಐಪಿಸಿ ಸೆಕ್ಷನ್‌ 499 ಹಾಗೂ 500ರಡಿಯಲ್ಲಿ ದೋಷಿ ಎಂದು ತೀರ್ಪು ನೀಡಿದೆ. ಮ್ಯಾಜಿಸ್ಟ್ರೆಟ್‌ ನ್ಯಾಯಾಲಯದ ನ್ಯಾಯಮೂರ್ತಿ ಎಚ್‌ಎಚ್‌ ವರ್ಮಾ ತೀರ್ಪು ಪ್ರಕಟಿಸಿದ್ದು, ರಾಹುಲ್‌ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.

ಯಾವುದೇ ಶಾಸಕರು ಅಥವಾ ಸಂಸದರು ಅಪರಾಧ ಪ್ರಕರಣದಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚು ವರ್ಷ ಶಿಕ್ಷೆಗೆ ಒಳಗಾದರೆ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗುತ್ತದೆ. ಇದೇ ನಿಯಮವನ್ನು ಕಾಂಗ್ರೆಸ್‌ ಕೂಡ ಪಾಲಿಸಿದ್ದು, ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅವರಿಗೂ ಅನ್ವಯವಾಗಿದೆ. ಸದ್ಯ ಈ ಪ್ರಕರಣದಲ್ಲಿ ರಾಹುಲ್‌ ಗಾಂಧಿ ಜಾಮೀನು ಪಡೆದಿದ್ದು, ಶಿಕ್ಷೆ ರದ್ದುಪಡಿಸುವಂತೆ ಮೇಲಿನ ಕೋರ್ಟ್‌ಗಳಿಗೆ ಮೇಲ್ಮನವಿ ಸಲ್ಲಿಸಲು 30 ದಿನ ಅವಕಾಶ ನೀಡಲಾಗಿದೆ ಎಂದು ರಾಹುಲ್‌ ಗಾಂಧಿ ಪರ ವಕೀಲ ಬಾಬು ಮಾಂಗುಕ್ಯ ಹೇಳಿದ್ದಾರೆ.

ಇದನ್ನೂ ಓದಿ : Minister S Angara : ಅಂಗಾರ ಸಾಕು- ಹೊಸಬರು ಬೇಕು: ಅಂಗಾರಗೆ ಬಿಜೆಪಿ ಕಾರ್ಯಕರ್ತರಿಂದಲೇ ವಿರೋಧ

2019ರ ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ರಾಹುಲ್‌ ಗಾಂಧಿ ಕೋಲಾರದಲ್ಲಿ ನಡೆದಿದ್ದ ಬಹಿರಂಗ ಸಭೆಯಲ್ಲಿ, ಅದು ಹೇಗೆ ಮೋದಿ ಹೆಸರಿಟ್ಟುಕೊಂಡವರೆಲ್ಲರೂ ಕಳ್ಳರಾಗುತ್ತಾರೆ ಎಂದು ಹೇಳಿದ್ದರು. ಈ ಹೇಳಿಕೆಯ ವಿರುದ್ಧ ಗುಜರಾತ್‌ನ ಬಿಜೆಪಿ ಶಾಸಕ ಪೂರ್ಣೇಶ್‌ ಮಾನನಷ್ಟ ಪ್ರಕರಣವನ್ನು ದಾಖಲಿಸಿದ್ದರು. ಇದೇ ಪ್ರಕರಣದಲ್ಲಿ ರಾಹುಲ್‌ ಗಾಂಧಿ ಅವರನ್ನು ದೋಷಿ ಎಂದು ತೀರ್ಪು ನೀಡಲಾಗಿದ್ದು, 2 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

Rahul Gandhi: Rahul Gandhi sacked from Lok Sabha seat

Comments are closed.