Rahul Gandhi to Kolar : ನಾಳೆ ಕೋಲಾರಕ್ಕೆ ರಾಹುಲ್‌ ಗಾಂಧಿ ಆಗಮನ: ʻಜೈ ಭಾರತ್ʼ ರ್ಯಾಲಿಯಲ್ಲಿ ಭಾಗಿ

ಕೋಲಾರ : (Rahul Gandhi to Kolar) ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ. ಈ ನಡುವೆ ಈಗಾಗಲೇ ಕೇಂದ್ರ ನಾಯಕರು ರಾಜ್ಯಕ್ಕೆ ಆಗಮಿಸಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಬಿಜೆಪಿಯಿಂದ ಪ್ರಧಾನಿ ಮೋದಿ, ಅಮಿತ್‌ ಶಾ ಕರ್ನಾಟಕಕ್ಕೆ ಈಗಾಗಲೇ ಹಲವು ಬಾರಿ ಭೇಟಿ ನೀಡಿದ್ದು, ಪ್ರಚಾರ ನಡೆಸಿದ್ದಾರೆ. ಇದೀಗ ಚುನಾವಣೆ ಹಿನ್ನಲೆಯಲ್ಲಿ ಕೇಂದ್ರ ಸಚಿವ ರಾಹುಲ್‌ ಗಾಂದಿ ಕೂಡ ರಾಜ್ಯಕ್ಕೆ ಆಗಮಿಸುತ್ತಿದ್ದು, ಕಾಂಗ್ರೆಸ್‌ ಪರ ಕೋಲಾರದಲ್ಲಿ ಪ್ರಚಾರ ನಡೆಸಲಿದ್ದಾರೆ. ಇದರ ಜೊತೆಗೆ ಪಕ್ಷದ ರ್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ರಾಜ್ಯ ಕಾಂಗ್ರೆಸ್ ಮೂಲಗಳ ಪ್ರಕಾರ, ಎಐಸಿಸಿ ಮಾಜಿ ಅಧ್ಯಕ್ಷರು ಭಾನುವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಿ, ಕೋಲಾರಕ್ಕೆ ಪ್ರಯಾಣಿಸಲಿದ್ದು, ಅಲ್ಲಿ ಪಕ್ಷ ಆಯೋಜಿಸಿರುವ ‘ಜೈ ಭಾರತ್’ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಂಜೆ, ಬೆಂಗಳೂರಿನ ಕರ್ನಾಟಕ ಪಿಸಿಸಿ ಕಚೇರಿ ಬಳಿ ಹೊಸದಾಗಿ ನಿರ್ಮಿಸಲಾದ ‘ಇಂದಿರಾ ಗಾಂಧಿ ಭವನ’ – 750 ಜನರ ಆಸನ ಸಾಮರ್ಥ್ಯದ ಕಚೇರಿ ಮತ್ತು ಸಭಾಂಗಣವನ್ನು ಗಾಂಧಿ ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಮುಖ್ಯಸ್ಥ ಡಿ ಕೆ ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ. ರ್ಯಾಲಿಯನ್ನು ಮೊದಲು ಏಪ್ರಿಲ್ 5 ರಂದು ನಿಗದಿಪಡಿಸಲಾಗಿತ್ತು, ನಂತರ ಅದನ್ನು ಏಪ್ರಿಲ್ 9 ಕ್ಕೆ ಮತ್ತು ಅಂತಿಮವಾಗಿ ಚುನಾವಣಾ ತಯಾರಿ ಮತ್ತು ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ, ಇತರ ಕಾರಣಗಳಿಂದಾಗಿ ಏಪ್ರಿಲ್ 16 ಕ್ಕೆ ಮುಂದೂಡಲಾಯಿತು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ : ದೇವನಹಳ್ಳಿ : ಮಾಜಿ ಶಾಸಕ ವೆಂಕಟಸ್ವಾಮಿ ಹೃದಯಾಘಾತದಿಂದ ಸಾವು

ಕೋಲಾರದಲ್ಲಿ ಎರಡನೇ ಸ್ಥಾನವಾಗಿ ಕಣಕ್ಕಿಳಿಯುವ ಇಚ್ಛೆಯನ್ನು ಸಿದ್ದರಾಮಯ್ಯ ವ್ಯಕ್ತಪಡಿಸಿದ್ದು, ಈ ಬಾರಿ ಚುನಾವಣೆಯಲ್ಲಿ ಕೋಲಾರ ಮಹತ್ವ ಪಡೆದುಕೊಂಡಿದೆ. ಈಗಾಗಲೇ ಸಿದ್ದರಾಮಯ್ಯ ಮೈಸೂರು ಜಿಲ್ಲೆಯ ವರುಣಾದಿಂದ ಕಣಕ್ಕಿಳಿದಿದ್ದಾರೆ. ಆದರೆ ಕೋಲಾರ ಕ್ಷೇತ್ರಕ್ಕೆ ಕಾಂಗ್ರೆಸ್ ಇನ್ನೂ ತನ್ನ ಅಭ್ಯರ್ಥಿಯನ್ನು ಹೆಸರಿಸಿಲ್ಲ. ಅಭ್ಯರ್ಥಿ ಯಾರೆಂದು ಫೈನಲ್‌ ಆಗುವುದಕ್ಕೂ ಮೊದಲೇ ಕಾಂಗ್ರೆಸ್‌ ಕೇಂದ್ರ ನಾಯಕರ ಮೂಲಕ ಪ್ರಚಾರ ಕಾರ್ಯ ಆರಂಭಿಸಿದೆ.

Rahul Gandhi to Kolar: Rahul Gandhi to come to Kolar tomorrow: Participate in “Jai Bharat” rally

Comments are closed.