ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಯನ್ನು ಚುರುಕುಗೊಳಿಸಿದೆ. ಆದ್ರೀಗ ಅನಾರೋಗ್ಯದ ಕಾರಣಕೊಟ್ಟು ರಮೇಶ್ ಜಾರಕಿಹೊಳಿ ಎಸ್ಐಟಿ ವಿಚಾರಣೆಗೆ ಗೈರು ಹಾಜರಾಗಿದ್ದಾರೆ.
ಸಂತ್ರಸ್ತ ಯುವತಿ ಎಸ್ಐಟಿ ವಿಚಾರಣೆಗೆ ಹಾಜರಾಗಿ ಸ್ಥಳ ಮಹಜರು ನಡೆಸುತ್ತಿದ್ದಂತೆಯೇ ಎಸ್ಐಟಿ ಅಧಿಕಾರಿಗಳು ರಮೇಶ್ ಜಾರಕಿಹೊಳಿ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಬುಲಾವ್ ನೀಡಿತ್ತು. ಆದ್ರೇ ಜಾರಕಿಹೊಳಿ ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ತಮ್ಮ ವಕೀಲರಾದ ಶ್ಯಾಮಸುಂದರ್ ಮೂಲಕ ಮನವಿ ಮಾಡಿಕೊಂಡಿದ್ದಾರೆ.
ರಮೇಶ್ ಜಾರಕಿಹೊಳಿ ಅವರು ಜ್ವರದಿಂದ ಬಳಲುತ್ತಿದ್ದು, ವಿಚಾರಣೆಗೆ ಹಾಜರಾಗಲು ಹೆಚ್ಚಿನ ಕಾಲಾವಕಾಶದ ಅಗತ್ಯವಿದೆ ಎಂದು ವಕೀಲರು ಎಸ್ಐಟಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಆದರೆ ರಮೇಶ್ ಜಾರಕಿಹೊಳಿ ಎಲ್ಲಿದ್ದಾರೆ ಅನ್ನೊ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ.