ಶಾಸಕ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ..!! ಬಿಜೆಪಿ ಸರಕಾರಕ್ಕೆ ಸಡ್ಡು ಹೊಡೆದ ಸಾಹುಕಾರ್

ಬೆಳಗಾವಿ : ರಾಸಲೀಲೆ ಸಿಡಿ ಪ್ರಕರಣ ಬಯಲಿಗೆ ಬರುತ್ತಿದ್ದಂತೆಯೇ ರಾಜಕೀಯದಿಂದ ಅಂತರ ಕಾಯ್ದು ಕೊಂಡಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ‌ ನೀಡಲು ಮುಂದಾಗಿದ್ದಾರೆ. ಈ ಮೂಲಕ ರಾಜ್ಯದ ಬಿಜೆಪಿ ಸರಕಾರಕ್ಕೆ ಶಾಕ್ ಕೊಟ್ಟಿದ್ದಾರೆ.

ಒಂದೆಡೆ ರಾಸಲೀಲೆ ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇನ್ನೊಂದೆಡೆ ಸಚಿವ ಸ್ಥಾನವಿಲ್ಲದೇ ಸೊರಗಿದ್ದಾರೆ. ಶತಾಯಗತಾಯ ಸಚಿವ ಸ್ಥಾನ ಪಡೆಯಲು ಮುಂದಾಗಿರುವ ರಮೇಶ್ ಜಾರಕಿಹೊಳಿ ಸಚಿವ ಸ್ಥಾನ ಸಿಗದಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡೋದು ಪಕ್ಕಾ ಎನ್ನಲಾಗುತ್ತಿದೆ.

ರಮೇಶ್ ಜಾರಕಿಹೊಳಿ ತಮ್ಮ ಗೋಕಾಕ್ ಕ್ಷೇತ್ರದಲ್ಲಿ ಬೀಡು ಬಿಡ್ಡು, ಕೊರೋನಾ ನಿಯಂತ್ರಣ, ಜನರಿಗೆ ನೆರವಾಗುವಂತ ಕೆಲಸದಲ್ಲಿ ತೊಡಗಿದ್ದಾರೆ. ಹಲವು ಸಮಯದಿಂದಲೂ ಬೆಂಗಳೂರಿನತ್ತ ಮುಖ ಮಾಡಿಲ್ಲ, ಅಷ್ಟೇ ಯಾಕೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಂದಲೂ ಅಂತರ ಕಾಯ್ದುಕೊಂಡಿದ್ದರು. ಈ ನಡುವೆ ಸಾಹುಕಾರ್ ಪಾಳಯದಿಂದ ಶಾಕಿಂಗ್ ಸುದ್ದಿ ಹೊರಬಿದ್ದಿದೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರು ಮಹಾರಾಷ್ಟ್ರಕ್ಕೆ ತೆರಳಿರ, ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಲಿದ್ದಾರೆ. ನಂತರ ಜೂನ್.23ರಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದೆ.

Comments are closed.