ಬೆಂಗಳೂರು : ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುತ್ತಲೇ ಬಿಗ್ ಶಾಕ್ ಎದುರಾಗಿದೆ. ಆರ್‌ಎಸ್‌ಎಸ್ ನಾಯಕರು ಬಸವರಾಜ್ ಬೊಮ್ಮಾಯಿ ಅವರಿಗೆ ಆರು ತಿಂಗಳ ಕಾಲಾವಕಾಶವನ್ನು ನೀಡಿದ್ದು, ಕಾರ್ಯವೈಖರಿ ಮೆಚ್ಚುಗೆಯಾಗದಿದ್ರೆ ಅಧಿಕಾರದಿಂದ ಕೆಳಗಿಳಿಯೋದು ಖಚಿತ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗೆ ಇಳಿದಿದ್ದಾರೆ. ಈ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಪುತ್ರ ಬಸವರಾಜ್ ಬೊಮ್ಮಾಯಿ ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಆದ್ರೀಗ ಅಧಿಕಾರ ಸ್ವೀಕಾರ ಮಾಡಿದ ಒಂದೇ ದಿನಕ್ಕೆ ಆರ್‌ಎಸ್‌ಎಸ್ ಡೆಡ್‌ಲೈನ್ ನೀಡಿದೆ.
ಆರ್‌ಎಸ್‌ಎಸ್ ಬೈಠಕ್‌ನಲ್ಲಿ ಪ್ರಮುಖವಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಕುರಿತು ಚರ್ಚೆಯನ್ನು ನಡೆಸಲಾಗಿದೆ. ಬೊಮ್ಮಾಯಿ ಮೂಲತಃ ಬಿಜೆಪಿಗರಲ್ಲ, ಅಲ್ಲದೇ ಅವರಿಗೆ ಆರ್‌ಎಸ್‌ಎಸ್ ನಂಟೂ ಇಲ್ಲ. ಆದರೆ ವೈಯಕ್ತಿಯ ವರ್ಚಸ್ಸನ್ನು ಹೊಂದಿದ್ದಾರೆ. ಹೀಗಾಗಿ ಪಕ್ಷವನ್ನು ಸಮರ್ಥವಾಗಿ ಮುನ್ನೆಡೆಸಿದ್ರೆ ಅನುಕೂಲವಾಗಲಿದೆ, ಬೊಮ್ಮಾಯಿ ಅವರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಣೆಯನ್ನು ಮಾಡಿದ್ರೆ ಎಲೆಕ್ಷನ್ ವರೆಗೂ ಮುಂದುವರಿಯಲಿ.
ಒಂದೊಮ್ಮೆ ಯಡಿಯೂರಪ್ಪ ಅವರ ಆಣತಿಯಂತೆ ಕಾರ್ಯನಿರ್ವಹಣೆಯನ್ನು ಮಾಡಿದ್ರೆ ಪರ್ಯಾಯ ವ್ಯವಸ್ಥೆಯನ್ನು ನೋಡಬೇಕು. ಅಲ್ಲದೇ ಸಿಎಂ ಬೊಮ್ಮಾಯಿ ಅವರು ಯಡಿಯೂರಪ್ಪ ಅವಧಿಯಲ್ಲಿ ನೇಮಕವಾಗಿರುವ ಅಧಿಕಾರಿಗಳನ್ನು ಬೇರೆಡೆಗೆ ವರ್ಗಾವಣೆಯನ್ನು ಮಾಡಬೇಕು. ಮಾತ್ರವಲ್ಲ ಭ್ರಷ್ಟಾಚಾರದ ಕಳಂಕದಿಂದ ಪಕ್ಷ ದೂರವಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಬೈಠಕ್‌ನಲ್ಲಿ ನಿರ್ಧಾರ ಮಾಡಲಾಗಿದೆ.
ಹೀಗಾಗಿ ಸಿಎಂ ಬಸವರಾಜ ಬೊಮ್ಮಾಯಿ ಕಾರ್ಯ ನಿರ್ವಹಣೆಯ ಮೇಲೆ ಅವರ ಅಧಿಕಾರದ ಅವಧಿಯೂ ನಿರ್ಧಾರವಾಗುವ ಸಾಧ್ಯತೆಯಿದೆ. ಆರ್‌ಎಸ್‌ಎಸ್ ನಾಯಕರು ರಾಜ್ಯ ಸರಕಾರದ ಕಾರ್ಯದ ಮೇಲೆ ಕಣ್ಣಿಟ್ಟಿದ್ದು, ವಾರ್ನಿಂಗ್ ಕೊಟ್ಟಿದ್ದಾರೆ ಎಂದು ಆರ್‌ಎಸ್‌ಎಸ್ ಉನ್ನತ ಮೂಲಗಳಿಂದ ತಿಳಿದುಬಂದಿದೆ.