ಶಿವಮೊಗ್ಗ : santosh patil death row : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಸದ್ಯ ರಾಜ್ಯ ರಾಜಕಾರಣದಲ್ಲಿ ಭಾರೀ ದೊಡ್ಡ ಸಂಚಲನವನ್ನೇ ಸೃಷ್ಟಿಸುತ್ತಿದೆ . ಈ ಪ್ರಕರಣದಲ್ಲಿ ಕೆ.ಎಸ್ ಈಶ್ವರಪ್ಪ ನಿನ್ನೆ ಸಂಜೆಯಷ್ಟೇ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಸಲ್ಲಿಕೆಗೂ ಮುನ್ನ ಬಲ ಪ್ರದರ್ಶನ ಮಾಡಿರುವ ಈಶ್ವರಪ್ಪ ತಮ್ಮ ಶಕ್ತಿ ಏನೆಂಬುದನ್ನು ವಿಪಕ್ಷಗಳಿಗೆ ತೋರಿಸಿಕೊಟ್ಟಿದ್ದಾರೆ. ಆದರೆ ಇದ್ಯಾವುದಕ್ಕೂ ಜಗ್ಗದ ಕಾಂಗ್ರೆಸ್ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ತನ್ನ ಹೋರಾಟವನ್ನು ಮುಂದುವರಿಸಿದೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪರ ಶಿವಮೊಗ್ಗದಲ್ಲಿರುವ ನಿವಾಸಕ್ಕೆ ಇಂದು ವಿವಿಧ ಸ್ವಾಮೀಜಿಗಳು ಭೇಟಿ ನೀಡಿದ್ದಾರೆ. 9 ಸ್ವಾಮೀಜಿಗಳ ದಿಢೀರ್ ಭೇಟಿಯಿಂದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪರೇ ಒಂದು ಕ್ಷಣ ಅಚ್ಚರಿ ವ್ಯಕ್ತಪಡಿಸಿದರು ಎನ್ನಲಾಗಿದೆ. ಮಾದಾರ ಚನ್ನಯ್ಯ ಸ್ವಾಮೀಜಿ, ಕಾಗಿನೆಲೆಯ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಹೊಸದುರ್ಗದ ಈಶ್ವರನಂದಪುರಿ ಸ್ವಾಮೀಜಿ ಸೇರಿದಂತೆ ಒಟ್ಟು 9 ಸ್ವಾಮೀಜಿಗಳು ಕೆ.ಎಸ್ ಈಶ್ವರಪ್ಪ ನಿವಾಸಕ್ಕೆ ಭೇಟಿ ನೀಡಿದ್ದಾರೆ.
ಕೆ.ಎಸ್ ಈಶ್ವರಪ್ಪರನ್ನು ಭೇಟಿಯಾದ ಮಾದಾರ ಚನ್ನಯ್ಯ ಸ್ವಾಮೀಜಿ, ಕಾಗಿನೆಲೆಯ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಹೊಸದುರ್ಗದ ಈಶ್ವರನಂದಪುರಿ ಸ್ವಾಮೀಜಿ ಸೇರಿದಂತೆ ಒಟ್ಟು 9 ಸ್ವಾಮೀಜಿಗಳು ರಾಜ್ಯದಲ್ಲಿ ನಡೆಯುತ್ತಿರುವ ಪ್ರಸಕ್ತ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಸದ್ಯದ ರಾಜಕೀಯ ಬೆಳವಣಿಗೆಗಳಿಂದ ಯಾವುದೇ ಕಾರಣಕ್ಕೂ ಎದೆಗುಂದಬೇಡಿ ಎಂದು ಸ್ವಾಮೀಜಿಗಳು ಹೇಳಿದ್ದಾರೆ ಎನ್ನಲಾಗಿದೆ. ಸ್ಬಾಮೀಜಿಗಳ ಭೇಟಿ ಸಂದರ್ಭದಲ್ಲಿ ಕರೆ ಮೂಲಕ ಈಶ್ವರಪ್ಪರ ಜೊತೆಯಲ್ಲಿ ಮಾತನಾಡಿದ ಮಂತ್ರಾಲಯದ ಸುಭುದೇಂದ್ರ ಶ್ರೀಗಳು ನಿಮ್ಮ ಈ ಹೋರಾಟದಲ್ಲಿ ನಾವೆಲ್ಲರೂ ನಿಮ್ಮ ಪರ ಇದ್ದೇವೆ ಎಂದು ಅಭಯ ನೀಡಿದ್ದಾರೆ. ಇದೇ ವೇಳೆ ಈಶ್ವರಪ್ಪ ಸ್ವಾಮೀಜಿಗಳಿಗೆ ತಮ್ಮ ಮೊಮ್ಮಗನ ಮದುವೆ ಆಮಂತ್ರಣ ನೀಡಿದ್ದಾರೆ ಎನ್ನಲಾಗಿದೆ.
ಇದನ್ನು ಓದಿ : HD Kumaraswamy : ಒಂದೇ ಕಲ್ಲಿಗೆ ಎರಡು ಹಕ್ಕಿ : ಮುಸ್ಲೀಂ ಮತ ಓಲೈಕೆಗೆ ಇಬ್ರಾಹಿಂಗೆ ರಾಜ್ಯಾಧ್ಯಕ್ಷ ಪಟ್ಟ
ಇದನ್ನೂ ಓದಿ : ರಾಜೀನಾಮೆಗೂ ಮುನ್ನ ಈಶ್ವರಪ್ಪ ಮುಂದಿಟ್ಟಿದ್ರು ವಿಚಿತ್ರ ಬೇಡಿಕೆ: ಇಲ್ಲಿದೆ Resign Inside Story
santosh patil death row swamijis visits to ks eshwarappa house at shivamogga