santosh patil death row : ಕೆ.ಎಸ್​ ಈಶ್ವರಪ್ಪ ನಿವಾಸಕ್ಕೆ 9 ಶ್ರೀಗಳ ದಿಢೀರ್​ ಭೇಟಿ

ಶಿವಮೊಗ್ಗ : santosh patil death row : ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಸದ್ಯ ರಾಜ್ಯ ರಾಜಕಾರಣದಲ್ಲಿ ಭಾರೀ ದೊಡ್ಡ ಸಂಚಲನವನ್ನೇ ಸೃಷ್ಟಿಸುತ್ತಿದೆ . ಈ ಪ್ರಕರಣದಲ್ಲಿ ಕೆ.ಎಸ್ ಈಶ್ವರಪ್ಪ ನಿನ್ನೆ ಸಂಜೆಯಷ್ಟೇ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್​ ರಾಜ್​ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಸಲ್ಲಿಕೆಗೂ ಮುನ್ನ ಬಲ ಪ್ರದರ್ಶನ ಮಾಡಿರುವ ಈಶ್ವರಪ್ಪ ತಮ್ಮ ಶಕ್ತಿ ಏನೆಂಬುದನ್ನು ವಿಪಕ್ಷಗಳಿಗೆ ತೋರಿಸಿಕೊಟ್ಟಿದ್ದಾರೆ. ಆದರೆ ಇದ್ಯಾವುದಕ್ಕೂ ಜಗ್ಗದ ಕಾಂಗ್ರೆಸ್​ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ತನ್ನ ಹೋರಾಟವನ್ನು ಮುಂದುವರಿಸಿದೆ.


ಈ ಎಲ್ಲಾ ಬೆಳವಣಿಗೆಗಳ ನಡುವೆ ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪರ ಶಿವಮೊಗ್ಗದಲ್ಲಿರುವ ನಿವಾಸಕ್ಕೆ ಇಂದು ವಿವಿಧ ಸ್ವಾಮೀಜಿಗಳು ಭೇಟಿ ನೀಡಿದ್ದಾರೆ. 9 ಸ್ವಾಮೀಜಿಗಳ ದಿಢೀರ್​ ಭೇಟಿಯಿಂದ ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪರೇ ಒಂದು ಕ್ಷಣ ಅಚ್ಚರಿ ವ್ಯಕ್ತಪಡಿಸಿದರು ಎನ್ನಲಾಗಿದೆ. ಮಾದಾರ ಚನ್ನಯ್ಯ ಸ್ವಾಮೀಜಿ, ಕಾಗಿನೆಲೆಯ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಹೊಸದುರ್ಗದ ಈಶ್ವರನಂದಪುರಿ ಸ್ವಾಮೀಜಿ ಸೇರಿದಂತೆ ಒಟ್ಟು 9 ಸ್ವಾಮೀಜಿಗಳು ಕೆ.ಎಸ್​ ಈಶ್ವರಪ್ಪ ನಿವಾಸಕ್ಕೆ ಭೇಟಿ ನೀಡಿದ್ದಾರೆ.

ಕೆ.ಎಸ್​ ಈಶ್ವರಪ್ಪರನ್ನು ಭೇಟಿಯಾದ ಮಾದಾರ ಚನ್ನಯ್ಯ ಸ್ವಾಮೀಜಿ, ಕಾಗಿನೆಲೆಯ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಹೊಸದುರ್ಗದ ಈಶ್ವರನಂದಪುರಿ ಸ್ವಾಮೀಜಿ ಸೇರಿದಂತೆ ಒಟ್ಟು 9 ಸ್ವಾಮೀಜಿಗಳು ರಾಜ್ಯದಲ್ಲಿ ನಡೆಯುತ್ತಿರುವ ಪ್ರಸಕ್ತ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಸದ್ಯದ ರಾಜಕೀಯ ಬೆಳವಣಿಗೆಗಳಿಂದ ಯಾವುದೇ ಕಾರಣಕ್ಕೂ ಎದೆಗುಂದಬೇಡಿ ಎಂದು ಸ್ವಾಮೀಜಿಗಳು ಹೇಳಿದ್ದಾರೆ ಎನ್ನಲಾಗಿದೆ. ಸ್ಬಾಮೀಜಿಗಳ ಭೇಟಿ ಸಂದರ್ಭದಲ್ಲಿ ಕರೆ ಮೂಲಕ ಈಶ್ವರಪ್ಪರ ಜೊತೆಯಲ್ಲಿ ಮಾತನಾಡಿದ ಮಂತ್ರಾಲಯದ ಸುಭುದೇಂದ್ರ ಶ್ರೀಗಳು ನಿಮ್ಮ ಈ ಹೋರಾಟದಲ್ಲಿ ನಾವೆಲ್ಲರೂ ನಿಮ್ಮ ಪರ ಇದ್ದೇವೆ ಎಂದು ಅಭಯ ನೀಡಿದ್ದಾರೆ. ಇದೇ ವೇಳೆ ಈಶ್ವರಪ್ಪ ಸ್ವಾಮೀಜಿಗಳಿಗೆ ತಮ್ಮ ಮೊಮ್ಮಗನ ಮದುವೆ ಆಮಂತ್ರಣ ನೀಡಿದ್ದಾರೆ ಎನ್ನಲಾಗಿದೆ.

ಇದನ್ನು ಓದಿ : HD Kumaraswamy : ಒಂದೇ ಕಲ್ಲಿಗೆ ಎರಡು ಹಕ್ಕಿ : ಮುಸ್ಲೀಂ ಮತ ಓಲೈಕೆಗೆ ಇಬ್ರಾಹಿಂಗೆ ರಾಜ್ಯಾಧ್ಯಕ್ಷ ಪಟ್ಟ

ಇದನ್ನೂ ಓದಿ : ರಾಜೀನಾಮೆಗೂ ಮುನ್ನ ಈಶ್ವರಪ್ಪ ಮುಂದಿಟ್ಟಿದ್ರು ವಿಚಿತ್ರ ಬೇಡಿಕೆ: ಇಲ್ಲಿದೆ Resign Inside Story

santosh patil death row swamijis visits to ks eshwarappa house at shivamogga

Comments are closed.