Setback for Sasikala:ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ(ಎಐಎಡಿಎಂಕೆ) ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ವಿ.ಕೆ ಶಶಿಕಲಾರನ್ನು ವಜಾಗೊಳಿಸಿದ್ದ ಎಡಪ್ಪಾಡಿ ಪಳನಿಸ್ವಾಮಿ ಹಾಗೂ ಓ ಪನ್ನೀರಸೆಲ್ವಂ ನಿರ್ಧಾರವನ್ನು ಮದ್ರಾಸ್ ಹೈಕೋರ್ಟ್ ಎತ್ತಿ ಹಿಡಿದಿದ್ದು ಇದರಿಂದಾಗಿ ಉಚ್ಛ ನ್ಯಾಯಾಲಯದಲ್ಲಿ ವಿ.ಕೆ ಶಶಿಕಲಾಗೆ ಹಿನ್ನಡೆಯಾದಂತಾಗಿದೆ.
ತಮಿಳುನಾಡು ಮಾಜಿ ಮುಖ್ಯ ಮಂತ್ರಿ ಜಯಲಲಿತಾ ನಿಧನದ ಬಳಿಕ ಓ ಪನ್ನಿರ ಸೆಲ್ವಂ ತಮಿಳುನಾಡಿದ ಮುಖ್ಯಮಂತ್ರಿಯಾದರೆ 2017ರ ಫೆಬ್ರವರಿ ತಿಂಗಳಲ್ಲಿ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಸೇರುವ ಮುನ್ನ ಶಶಿಕಲಾ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಸ್ಥಾನವನ್ನು ಅಲಂಕರಿಸಿದ್ದರು.
ಓ. ಪನ್ನೀರ ಸೆಲ್ವಂ ಹಾಗೂ ಎಡಪ್ಪಾಡಿ ಪಳನಿಸ್ವಾಮಿ ನಿರ್ಧಾರವನ್ನು ಮದ್ರಾಸ್ ಹೈಕೋರ್ಟ್ ಎತ್ತಿ ಹಿಡಿದ ಬಳಿಕ ಶಶಿಕಲಾ ಶೀಘ್ರದಲ್ಲೇ ತಮ್ಮ ನಿರ್ಧಾರವನ್ನು ಪ್ರಕಟಿಸುತ್ತೇನೆಂದು ಮಾಹಿತಿ ನೀಡಿದ್ದಾರೆ. ಮೂಲಗಳ ಪ್ರಕಾರ ಶಶಿಕಲಾ ಈ ಸಂಬಂಧ ಸುಪ್ರೀಂ ಕೋರ್ಟ್ಗೆ ತೆರಳಲು ಮಾರ್ಗ ಹುಡುಕುತ್ತಿದ್ದಾರೆ ಎನ್ನಲಾಗಿದೆ.
ಇನ್ನು ಈ ವಿಚಾರವಾಗಿ ಮಾತನಾಡಿದ ಎಐಎಡಿಎಂಕೆ ವಕ್ತಾರ ಕೋವೈ ಸತ್ಯನ್, ಎಐಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಶಶಿಕಲಾರ ಹಕ್ಕುಗಳನ್ನು ವಜಾಗೊಳಸುವಂತೆ ಮನವಿ ಮಾಡಿದ್ದು, ಇಂದು ಚೆನ್ನೈನ ಸೆಷನ್ಸ್ ನ್ಯಾಯಾಲಯದಲ್ಲಿ ಪಟ್ಟಿ ಮಾಡಲಾಗಿದೆ. ಗೌರವಾನ್ವಿತ ನ್ಯಾಯಾಧೀಶರು, ಅರ್ಜಿಯನ್ನು ಅಂಗೀಕರಿಸಿದ್ದಾರೆ.ಇಪಿಎಸ್ ಹಾಗೂ ಒಪಿಎಸ್ ಶಶಿಕಲಾ ಮನವಿಯನ್ನು ವಜಾಗೊಳಿಸಿದೆ ಎಂದು ಹೇಳಿದರು .
ಎಐಎಡಿಂಕೆ ಮೇಲಿನ ನಿಯಂತ್ರಣವನ್ನು ಕಳೆದುಕೊಂಡು ಐದು ವರ್ಷಗಳ ಬಳಿಕ ಇದೀಗ ಶಶಿಕಲಾ ಮತ್ತೆ ಪಕ್ಷದೊಳಗೆ ನುಸಳಲು ಇನ್ನಿಲ್ಲದ ಕಸರತ್ತನ್ನು ನಡೆಸುತ್ತಿದ್ದಾರೆ. ಆದರೆ ಪನ್ನೀರಸೆಲ್ವಂ ಹಾಗೂ ಪಳನಿಸ್ವಾಮಿ ಪಕ್ಷದಲ್ಲಿ ತಮ್ಮ ಸ್ಥಾನಗಳನ್ನು ಬಲಪಡಿಸಿಕೊಂಡಿದ್ದಾರೆ.
ಇದನ್ನು ಓದಿ : gang rape on girl child : 16 ವರ್ಷದ ಬಾಲಕಿ ಮೇಲೆ 8 ಮಂದಿಯಿಂದ ಗ್ಯಾಂಗ್ ರೇಪ್: ಆರೋಪಿಗಳ ಬಂಧನ
ಇದನ್ನೂ ಓದಿ : Doctorate for Actor Ravichandran : ನಟ ರವಿಚಂದ್ರನ್ಗೆ ಗೌರವ ಡಾಕ್ಟರೇಟ್ ಘೋಷಣೆ
Setback for Sasikala: HC Upholds Her Removal as AIADMK General Secy after Jayalalithaa’s Death