Setback for Sasikala:ಎಐಡಿಎಂಕೆ ಪ್ರಧಾನ ಕಾರ್ಯದರ್ಶಿ ಸ್ಥಾನದ ಹೋರಾಟದಲ್ಲಿ ಶಶಿಕಲಾಗೆ ಹಿನ್ನಡೆ

Setback for Sasikala:ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ(ಎಐಎಡಿಎಂಕೆ) ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ವಿ.ಕೆ ಶಶಿಕಲಾರನ್ನು ವಜಾಗೊಳಿಸಿದ್ದ ಎಡಪ್ಪಾಡಿ ಪಳನಿಸ್ವಾಮಿ ಹಾಗೂ ಓ ಪನ್ನೀರಸೆಲ್ವಂ ನಿರ್ಧಾರವನ್ನು ಮದ್ರಾಸ್​ ಹೈಕೋರ್ಟ್​ ಎತ್ತಿ ಹಿಡಿದಿದ್ದು ಇದರಿಂದಾಗಿ ಉಚ್ಛ ನ್ಯಾಯಾಲಯದಲ್ಲಿ ವಿ.ಕೆ ಶಶಿಕಲಾಗೆ ಹಿನ್ನಡೆಯಾದಂತಾಗಿದೆ.

ತಮಿಳುನಾಡು ಮಾಜಿ ಮುಖ್ಯ ಮಂತ್ರಿ ಜಯಲಲಿತಾ ನಿಧನದ ಬಳಿಕ ಓ ಪನ್ನಿರ ಸೆಲ್ವಂ ತಮಿಳುನಾಡಿದ ಮುಖ್ಯಮಂತ್ರಿಯಾದರೆ 2017ರ ಫೆಬ್ರವರಿ ತಿಂಗಳಲ್ಲಿ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಸೇರುವ ಮುನ್ನ ಶಶಿಕಲಾ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಸ್ಥಾನವನ್ನು ಅಲಂಕರಿಸಿದ್ದರು.


ಓ. ಪನ್ನೀರ ಸೆಲ್ವಂ ಹಾಗೂ ಎಡಪ್ಪಾಡಿ ಪಳನಿಸ್ವಾಮಿ ನಿರ್ಧಾರವನ್ನು ಮದ್ರಾಸ್​ ಹೈಕೋರ್ಟ್ ಎತ್ತಿ ಹಿಡಿದ ಬಳಿಕ ಶಶಿಕಲಾ ಶೀಘ್ರದಲ್ಲೇ ತಮ್ಮ ನಿರ್ಧಾರವನ್ನು ಪ್ರಕಟಿಸುತ್ತೇನೆಂದು ಮಾಹಿತಿ ನೀಡಿದ್ದಾರೆ. ಮೂಲಗಳ ಪ್ರಕಾರ ಶಶಿಕಲಾ ಈ ಸಂಬಂಧ ಸುಪ್ರೀಂ ಕೋರ್ಟ್​ಗೆ ತೆರಳಲು ಮಾರ್ಗ ಹುಡುಕುತ್ತಿದ್ದಾರೆ ಎನ್ನಲಾಗಿದೆ.


ಇನ್ನು ಈ ವಿಚಾರವಾಗಿ ಮಾತನಾಡಿದ ಎಐಎಡಿಎಂಕೆ ವಕ್ತಾರ ಕೋವೈ ಸತ್ಯನ್​, ಎಐಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಶಶಿಕಲಾರ ಹಕ್ಕುಗಳನ್ನು ವಜಾಗೊಳಸುವಂತೆ ಮನವಿ ಮಾಡಿದ್ದು, ಇಂದು ಚೆನ್ನೈನ ಸೆಷನ್ಸ್​ ನ್ಯಾಯಾಲಯದಲ್ಲಿ ಪಟ್ಟಿ ಮಾಡಲಾಗಿದೆ. ಗೌರವಾನ್ವಿತ ನ್ಯಾಯಾಧೀಶರು, ಅರ್ಜಿಯನ್ನು ಅಂಗೀಕರಿಸಿದ್ದಾರೆ.ಇಪಿಎಸ್​ ಹಾಗೂ ಒಪಿಎಸ್​​ ಶಶಿಕಲಾ ಮನವಿಯನ್ನು ವಜಾಗೊಳಿಸಿದೆ ಎಂದು ಹೇಳಿದರು .
ಎಐಎಡಿಂಕೆ ಮೇಲಿನ ನಿಯಂತ್ರಣವನ್ನು ಕಳೆದುಕೊಂಡು ಐದು ವರ್ಷಗಳ ಬಳಿಕ ಇದೀಗ ಶಶಿಕಲಾ ಮತ್ತೆ ಪಕ್ಷದೊಳಗೆ ನುಸಳಲು ಇನ್ನಿಲ್ಲದ ಕಸರತ್ತನ್ನು ನಡೆಸುತ್ತಿದ್ದಾರೆ. ಆದರೆ ಪನ್ನೀರಸೆಲ್ವಂ ಹಾಗೂ ಪಳನಿಸ್ವಾಮಿ ಪಕ್ಷದಲ್ಲಿ ತಮ್ಮ ಸ್ಥಾನಗಳನ್ನು ಬಲಪಡಿಸಿಕೊಂಡಿದ್ದಾರೆ.

ಇದನ್ನು ಓದಿ : gang rape on girl child : 16 ವರ್ಷದ ಬಾಲಕಿ ಮೇಲೆ 8 ಮಂದಿಯಿಂದ ಗ್ಯಾಂಗ್​ ರೇಪ್​​: ಆರೋಪಿಗಳ ಬಂಧನ

ಇದನ್ನೂ ಓದಿ : Doctorate for Actor Ravichandran : ನಟ ರವಿಚಂದ್ರನ್​​ಗೆ ಗೌರವ ಡಾಕ್ಟರೇಟ್​ ಘೋಷಣೆ

Setback for Sasikala: HC Upholds Her Removal as AIADMK General Secy after Jayalalithaa’s Death

Comments are closed.