ಶಿವಾಜಿ ನಗರ ಜೆಡಿಎಸ್‌ ಅಭ್ಯರ್ಥಿ ನಾಮಪತ್ರ ತಿರಸ್ಕೃತ

ಬೆಂಗಳೂರು : ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಬ್ದುಲ್ ಜಾಫರ್ ಅಲಿ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಹಲವು ವರ್ಷಗಳಿಂದ ವಿದೇಶದಲ್ಲಿದ್ದ ಜಾಫರ್ ಅಲಿ ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದ ಕಾರಣ (JDS candidate Zafar Ali) ನಾಮಪತ್ರ ತಿರಸ್ಕೃತಗೊಂಡಿತ್ತು. ಕರ್ನಾಟಕ ವಿಧಾನಸಭಾ ಚುನಾವಣೆಗೆ ಜೆಡಿಎಸ್‌ ಪಕ್ಷಕ್ಕೆ ಹಿನ್ನಡೆ ಉಂಟಾಗಿದೆ.

ನಾಮಪತ್ರ ತಿರಸ್ಕೃತವಾಗಿರುವುದನ್ನು ಶಿವಾಜಿನಗರ ಚುನಾವಣಾಧಿಕಾರಿ ಬಸವರಾಜ್‌ ಸೋಮಣ್ಣವರ್‌ ಖಚಿತಪಡಿಸಿದ್ದಾರೆ. ಶಿವಾಜಿನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜಾಫರ್ ಅಲಿ ಹಲವು ವರ್ಷಗಳಿಂದ ವಿದೇಶದಲ್ಲಿ ನೆಲೆಸಿದ್ದರು. ಈ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಅವರ ಹೆಸರಿರಲಿಲ್ಲ. ಆದರೆ, ಇತ್ತೀಚೆಗಷ್ಟೇ ಭಾರತಕ್ಕೆ ಮರಳಿದ್ದ ಜಾಫರ್ ಅಲಿ ರಾಜಕೀಯ ಸೇರುವ ಉದ್ದೇಶದಿಂದ ಜೆಡಿಎಸ್ ನಿಂದ ಬಿ-ಫಾರಂ ಪಡೆದು ನಾಮಪತ್ರ ಸಲ್ಲಿಸಿದ್ದರು.

ಶಿವಾಜಿನಗರದಲ್ಲಿ ಅಲ್ಪಸಂಖ್ಯಾತರ ಮತಗಳು ಹೆಚ್ಚಾಗಿದ್ದು, ಜೆಡಿಎಸ್ ಕೂಡ ಅದೇ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಇದರಿಂದಾಗಿ ಮುಸ್ಲಿಂ ಮತಗಳು ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಪಾಲಾಗಲಿದೆ ಎಂಬ ಆತಂಕವಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ಅಲ್ಪಸಂಖ್ಯಾತರ ಮತಗಳು ವಿಭಜನೆಯಾಗಲಿದ್ದು, ಬಿಜೆಪಿಗೆ ಪ್ಲಸ್ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೀಗ ಜೆಡಿಎಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿರುವುದರಿಂದ ಕಾಂಗ್ರೆಸ್ ಅಭ್ಯರ್ಥಿಗೆ ವರವಾದ್ರೆ, ಬಿಜೆಪಿಗೆ ಶಾಕ್‌ ಕೊಟ್ಟಿದೆ. ಶಿವಾಜಿನಗರ ಕ್ಷೇತ್ರದಲ್ಲಿ ಒಟ್ಟು 191528 ಮತದಾರರಿದ್ದು, ಇದರಲ್ಲಿ 94085 ಮಹಿಳೆಯರು ಹಾಗೂ 97441 ಪುರುಷರು ಇದ್ದಾರೆ.

ಇದನ್ನೂ ಓದಿ : ಬಸವ ಜಯಂತಿ 2023: ಹುಬ್ಬಳ್ಳಿಗೆ ಬಂದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ

2018 ರ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಲ್ಲಿ ಒಟ್ಟು 191528 ಮತದಾರರು ಇದ್ದು, ಇದರಲ್ಲಿ ಮಹಿಳೆಯರು 94085, ಪುರುಷರು 97441. 2018 ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರೋಷನ್ ಬೇಗ್ 59742 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ, ಬಿಜೆಪಿಯ ಕಟ್ಟಾ ಸುಬ್ರಹ್ಮಣ್ಯ ನಾಯ್ಡು 44702 ಮತಗಳನ್ನು ಪಡೆದು ಎರಡನೇ ಸ್ಥಾನಕ್ಕೆ ಸಮಾಧಾನ ಪಟ್ಟುಕೊಂಡಿದ್ದರು. ಬಳಿಕ ರೋಷನ್ ಬೇಗ್ ರಾಜೀನಾಮೆಯಿಂದ ತೆರವಾಗಿದ್ದರಿಂದ ಶಿವಾಜಿನಗರ ಕ್ಷೇತ್ರಕ್ಕೆ 2019ರಲ್ಲಿ ಉಪ ಚುನಾವಣೆ ನಡೆದಿತ್ತು. ಇಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಿಜ್ವಾನ್ ಅರ್ಷದ್ ಜಯ ಗಳಿಸಿದ್ದರು. ಭಾರತೀಯ ಜನತಾ ಪಾರ್ಟಿಯ ಎಂ ಸರವಣ 13521 ಮತಗಳ ಅಂತರದಿಂದ ಸೋಲು ಅನುಭವಿಸಿದ್ದರು.

Shivaji Nagar JDS candidate Zafar Ali’s nomination paper rejected

Comments are closed.