ಅವಿಭಜಿತ ದ.ಕ. ಜಿಲ್ಲೆಯ ಮೊದಲ ಕೇಂದ್ರ ಸಚಿವೆ : ನಮೋ ಸಂಪುಟ ಸೇರಿದ ಶೋಭಾ ಕರಂದ್ಲಾಜೆ

ಬೆಂಗಳೂರು : ಈ ಬಾರಿ ಕೇಂದ್ರ ಸಂಪುಟ ಪುನರಚನೆ ಕರ್ನಾಟಕದ ಪಾಲಿಗೆ ಸಿಹಿ ಸುದ್ದಿಯನ್ನು ಕೊಟ್ಟಿತ್ತು. ಆದ್ರೀಗ ಉಡುಪಿ – ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಸಚಿವ ರಾಗುವ ಮೂಲಕ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಯಾದ ಮೊದಲ ಕೇಂದ್ರ ಸಚಿವೆ ಅನ್ನೋ ಖ್ಯಾತಿಗೆ ಪಾತ್ರರಾಗಿದ್ದಾರೆ.

ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸತತ ಎರಡನೇ ಬಾರಿಗೆ ಲೋಕಸಭೆ ಪ್ರವೇಶಿಸಿರುವ ಶೋಭಾ ಕರಂದ್ಲಾಜೆ ಅವರಿಗೆ ನಮೋ ಸಂಪುಟದಲ್ಲಿ ಸ್ಥಾನ ಲಭಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಚಾರ್ವಾಕ ಗ್ರಾಮದಲ್ಲಿ 1966ರ ಅಕ್ಟೋಬರ್‌ 23 ರಂದು ಜನಿಸಿದ ಶೋಭಾ ಕರಂದ್ಲಾಜೆ ಬಾಲ್ಯದಿಂದಲೂ ಆರ್‌ಎಸ್‌ಎಸ್‌ ನತ್ತ ಆಕರ್ಷಿತರಾಗಿದ್ದರು. ಮಂಗಳೂರಿನ ರೋಶನಿ ನಿಲಯದಲ್ಲಿ ಎಂಎಸ್ ಡಬ್ಲ್ಯು ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದುಕೊಂಡಿದ್ದಾರೆ. ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಸಿದಿದ್ದಾರೆ.

2004 ರಲ್ಲಿ ಮೊದಲ ಬಾರಿಗೆ ವಿಧಾನ ಪರಿಷತ್‌ ಸದಸ್ಯೆಯಾಗಿ ಆಯ್ಕೆಯಾದ ಶೋಭಾ ಕರಂದ್ಲಾಜೆ ಅವರು 2008 ರಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. ಅಲ್ಲದೇ ಬಿ.ಎಸ್.ಯಡಿಯೂರಪ್ಪ ಸರಕಾರದಲ್ಲಿ ಗ್ರಾಮೀಣಾಭಿವೃದ್ದಿ ಸಚಿವರಾಗಿ, ಜಗದೀಶ್‌ ಶೆಟ್ಟರ್‌ ಸಿಎಂ ಆಗಿದ್ದಾಗ ಇಂಧನ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. 2010 ರಲ್ಲಿ ಯಡಿಯೂರಪ್ಪ ಬಿಜೆಪಿ ಬಿಟ್ಟು ಕೆಜೆಪಿ ಪಕ್ಷ ಕಟ್ಟುತ್ತಿದ್ದಂತೆಯೇ ಬಿಜೆಪಿ ತೊರೆದು ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲನ್ನು ಕಂಡಿದ್ದರು. ಆದರೆ ೨೦೧೪ರಲ್ಲಿ ಯಡಿಯೂರಪ್ಪ ಬಿಜೆಪಿಗೆ ಮರು ಸೇರ್ಪಡೆ ಯಾಗುತ್ತಲೇ ಬಿಜೆಪಿಗೆ ವಾಪಾಸಾದ ಶೋಭಾ ಕರಂದ್ಲಾಜೆ ಅವರು ೨೦೧೪ರ ಲೋಕಸಭಾ ಚುನಾವಣೆ ಯಲ್ಲಿ ಉಡುಪಿ – ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವನ್ನು ಸಾಧಿಸಿದ್ರು. ಅಲ್ಲದೇ ೩೦೧೯ರ ಚುನಾವಣೆಯಲ್ಲಿಯೂ ಮರು ಆಯ್ಕೆಯಾಗಿ, ಇದೀಗ ಕೇಂದ್ರ ಸಚಿವರಾಗಿಯೂ ನೇಮಕವಾಗಿದ್ದಾರೆ.

ರಾಜ್ಯ ಸರಕಾರದಿಂದ ಅಂತರ ಕಾಯ್ದುಕೊಳ್ಳಿವಂತೆ ಶೋಭಾ ಕರಂದ್ಲಾಜೆ ಅವರಿಗೆ ಆರ್‌ಎಸ್‌ಎಸ್‌ ಸೂಚನೆಯನ್ನು ನೀಡಿತ್ತು. ಹೀಗಾಗಿ ರಾಜ್ಯ ರಾಜಕೀಯದಿಂದ ದೂರವಿದ್ದ ಶೋಭಾ ಅವರಿಗೆ ಇದೀಗ ಕೇಂದ್ರದಲ್ಲಿ ಉನ್ನತ ಸ್ಥಾನ ಲಭಿಸಿದೆ. ರಾಜ್ಯದಲ್ಲಿ ಹಿರಿಯ ಸಂಸದರಿದ್ದರೂ ಕೂಡ ಪ್ರಧಾನಿ ನರೇಂದ್ರ ಮೋದಿ ಅವರು ಶೋಭಾ ಕರಂದ್ಲಾಜೆ ಅವರಿಗೆ ಮಣೆ ಹಾಕಿದ್ದಾರೆ. ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ನಿರ್ಮಲಾ ಸೀತಾರಾಮನ್‌ ಈಗಾಗಲೇ ಹಣಕಾಸು ಖಾತೆಯನ್ನು ನಿಭಾಯಿಸುತ್ತಿದ್ದಾರೆ. ಅಲ್ಲದೇ ಈ ಹಿಂದೆ ಸರೋಜಿನಿ ಮಹಿಷಿ, ರತ್ನಮಾಲಾ ಸವಣೂರು, ಬಸವರಾಜೇಶ್ವರಿ, ಡಿ.ಕೆ.ತಾರಾದೇವಿ, ಮಾರ್ಗರೇಟ್‌ ಆಳ್ವ ಬಳಿಕ ಕೇಂದ್ರ ಸಂಪುಟ ಸೇರಿದ ರಾಜ್ಯದ ಆರನೇ ಮಹಿಳೆ ಅನ್ನೋ ಹಿರಿಮೆಗೂ ಶೋಭಾ ಕರಂದ್ಲಾಜೆ ಅವರು ಪಾತ್ರರಾಗಿದ್ದಾರೆ.

ಡಿ.ವಿ.ಸದಾನಂದ ಗೌಡರಿಗೆ ಮಂತ್ರಿ ಪದವಿ ಕೈ ತಪ್ಪಿದ್ದರೂ ಕೂಡ ಇದೀಗ ಶೋಭಾ ಕರಂದ್ಲಾಜೆ ಅವರಿಗೆ ಮಂತ್ರಿ ಸ್ಥಾನ ಲಭಿಸಿರೋದು ಕರಾವಳಿ ಭಾಗದ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ. ಎರಡು ಬಾರಿ ಸಂಸದರಾಗಿದ್ದರೂ ತಮ್ಮ ಕ್ಷೇತ್ರವನ್ನು ಕಡೆಗಣಿಸಿದ್ದಾರೆನ್ನುವ ಆರೋಪ, ಆಕ್ರೋಶದ ನಡುವಲ್ಲೇ ಕೇಂದ್ರ ಸಚಿವರಾಗಿ ಆಯ್ಕೆಯಾಗಿರೋ ಶೋಭಾ ಕರಂದ್ಲಾಜೆ ಉಳಿದ ಅವಧಿಯಲ್ಲಾದ್ರೂ ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸುತ್ತಾರಾ ಅನ್ನೋದನ್ನು ಕಾದುನೋಡಬೇಕಾಗಿದೆ.

Comments are closed.