ಬೆಂಗಳೂರು : shoes and socks : ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಒಂದರಿಂದ ಹತ್ತನೇ ತರಗತಿ ಮಕ್ಕಳಿಗೆ ಈ ಬಾರಿ ಶೂ ಹಾಗೂ ಸಾಕ್ಸ್ ಭಾಗ್ಯ ಸಿಗುವುದು ಡೌಟು ಎಂದೇ ವಿಪಕ್ಷಗಳು ಆರೋಪಿಸುತ್ತಿರುವ ನಡುವೆಯೇ ರಾಜ್ಯ ಸರ್ಕಾರ ಶೂ ಹಾಗೂ ಸಾಕ್ಸ್ಗಳ ಖರೀದಿಗೆ ಅನುದಾನ ಬಿಡುಗಡೆ ಮಾಡಿದೆ. ಪ್ರಸಕ್ತ ಬಜೆಟ್ನಲ್ಲಿ ಸಾಕ್ಸ್ ಹಾಗೂ ಶೂಗಳ ಖರೀದಿಗೆ ಅನುದಾನ ಮೀಸಲಿಡದ ಹಿನ್ನೆಲೆಯಲ್ಲಿ ಈ ಬಾರಿ ಮಕ್ಕಳಿಗೆ ಶೂ ಸಾಕ್ಸ್ ಸಿಗೋದಿಲ್ಲ ಎಂದು ಹೇಳಲಾಗ್ತಿತ್ತು.
ಆದರೆ ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆದು ಬೆಂಗಳೂರಿನಲ್ಲಿ ಮಾತನಾಡಿದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಶಾಲಾ ಮಕ್ಕಳಿಗೆ ಸಮವಸ್ತ್ರ ಖರೀದಿಗೆ ಈಗಾಗಲೇ ಅನುಮೋದನೆಯನ್ನು ನೀಡಲಾಗಿದೆ. ಅಂತೆಯೇ ಮಕ್ಕಳ ಶೂ ಹಾಗೂ ಸಾಕ್ಸ್ ಖರೀದಿಗೆ 132 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದೇವೆ. ಈ ವಿಚಾರವಾಗಿ ಯಾರೂ ಗೊಂದಲವನ್ನು ಸೃಷ್ಟಿಸುವ ಅಗತ್ಯವಿಲ್ಲ ಎಂದು ಹೇಳುವ ಮೂಲಕ ವಿಪಕ್ಷಗಳ ಬಾಯಿ ಮುಚ್ಚಿಸಿದ್ದಾರೆ.
8ನೇ ತರಗತಿಯ ವಿದ್ಯಾರ್ಥಿಗಳಿಗೆ ಸೈಕಲ್ ಹಾಗೂ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಶೂ ಹಾಗೂ ಸಾಕ್ಸ್ಗಳನ್ನು ರಾಜ್ಯ ಸರ್ಕಾರ ನೀಡುತ್ತಿತ್ತು. ಆದರೆ 2019-20ನೇ ಸಾಲಿನಿಂದ ಈ ಯೋಜನೆಯನ್ನು ಕೈ ಬಿಡಲಾಗಿತ್ತು. ಇದೀಗ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಈ ಯೋಜನೆಗಳಿಗೆ ಮತ್ತೆ ಮರುಜೀವ ನೀಡಿದೆ.
ರಾಜ್ಯ ಸರ್ಕಾರವು ಈ ಬಾರಿ ಶೂ ಹಾಗೂ ಸಾಕ್ಸ್ಗಳನ್ನು ಮಕ್ಕಳಿಗೆ ವಿತರಿಸುವುದು ಡೌಟು ಎಂಬ ಗುಮಾನಿ ಹೊರ ಬೀಳುತ್ತಿದ್ದಂತೆಯೇ ಈ ವಿಚಾರವಾಗಿ ಪ್ರತಿಕ್ರಿಯಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯ ಸರ್ಕಾರದ ಬಳಿ ಮಕ್ಕಳಿಗೆ ಶೂ ಹಾಗೂ ಸಾಕ್ಸ್ ಖರೀದಿ ಮಾಡಲು ಹಣವಿಲ್ಲವೆಂದರೇ ನಾವೇ ಭಿಕ್ಷೆ ಮಾಡಿ ಹಣ ಸಂಗ್ರಹಣೆ ಮಾಡಿ ಮಕ್ಕಳಿಗೆ ಶೂ ಹಾಗೂ ಸಾಕ್ಸ್ ಖರೀದಿಗೆ ಅನುದಾನ ಸಂಗ್ರಹಿಸುತ್ತೇವೆ ಎಂದು ಹೇಳಿದ್ದರು. ಡಿಕೆಶಿಯ ಈ ಹೇಳಿಕೆಗೆ ಟಾಂಗ್ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ ಡಿ.ಕೆ ಶಿವಕುಮಾರ್ ಈ ಹಿಂದೆ ಕೋವಿಡ್ ಸಂದರ್ಭದಲ್ಲಿಯೂ ಇದೇ ರೀತಿ ನಾವು ಭಿಕ್ಷೆ ಬೇಡಿ ಹಣ ಸಂಗ್ರಹಣೆ ಮಾಡುತ್ತೇವೆ ಎಂದು ಹೇಳಿದ್ದರು. ಮೊದಲು ಆ ಹಣ ಎಲ್ಲಿದೆ ಎಂದು ಹೇಳಲಿ ಎಂದು ವ್ಯಂಗ್ಯವಾಡಿದರು.
ಇದನ್ನೂ ಓದಿ : Uttar Pradesh : ಹಿಂದೂ ದೇವರ ಫೋಟೋ ಇರುವ ಕಾಗದದ ಮೇಲೆ ಮಾಂಸ ಮಾರಾಟ : ಆರೋಪಿ ಬಂಧನ
shoes and socks 132 crores will release