ಭಾನುವಾರ, ಏಪ್ರಿಲ್ 27, 2025
Homekarnatakaಸುರಪುರ ಕಾಂಗ್ರೆಸ್‌ ಶಾಸಕ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನ

ಸುರಪುರ ಕಾಂಗ್ರೆಸ್‌ ಶಾಸಕ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನ

- Advertisement -

Shorapur Congress MLA Raja Venkatappa Naik passed away: ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ರಾಜವೆಂಕಟಪ್ಪ ನಾಯಕ ಅವರು ವಿಧಿವಶರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ನಾಲ್ಕನೇ ಬಾರಿಗೆ ಅವರು ಶಾಸಕರಾಗಿ ಆಯ್ಕೆಯಾಗಿದ್ದು, ಕಾಂಗ್ರೆಸ್‌ ಸರಕಾರದ ಅವಧಿಯಲ್ಲಿ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದ ಅವರು ಕೆಲವೇ ದಿನಗಳಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

Shorapur Congress MLA Raja Venkatappa Naik passed away heart attack
Image Credit to Original Source

ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಕಿಡ್ನಿ ಸ್ಟೋನ್‌ ಸಮಸ್ಯೆಯಿಂದ ಬಳಲುತ್ತಿದ್ದು, ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಅಲ್ಲದೇ ಕಿಡ್ನಿ ಸ್ಟೋನ್‌ಗೆ ಸಂಬಂಧಿಸಿದಂತೆ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗಿತ್ತು. ಆದರೆ ಇಂದು ಹೃದಯಾಘಾತ ಸಂಭವಿಸಿದ್ದು, ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಅವರು ಸಾವನ್ನಪ್ಪಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸುರಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ರಾಜ ವೆಂಕಟಪ್ಪ ನಾಯಕ ಅವರು, ಪ್ರತಿಸ್ಪರ್ಧಿ ಬಿಜೆಪಿಯ ರಾಜುಗೌಡ ಅವರನ್ನು ಸೋಲಿಸುವ ಮೂಲಕ ನಾಲ್ಕನೇ ಬಾರಿಗೆ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದ್ದರು. ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ರಾಜಾ ವೆಂಕಟಪ್ಪ ನಾಯಕ್‌ ಅವರಿಗೆ ಕಾಂಗ್ರೆಸ್‌ ಪಕ್ಷ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನ ನೀಡಿತ್ತು.

ಇದನ್ನೂ ಓದಿ : ಬೆಂಗಳೂರು ಉತ್ತರಕ್ಕೆ ಸದಾನಂದ ಗೌಡರ ಬದಲು ಸಿಟಿ ರವಿಗೆ ಟಿಕೆಟ್‌ ! ಹೈಕಮಾಂಡ್‌ಗೆ ತಲೆನೋವಾದ ಸಿಟಿ ರವಿ – ಶೋಭಾ ಟಿಕೆಟ್‌ ಫೈಟ್‌

ಎಐಸಿಸಿ ಅದ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬಕ್ಕೆ ರಾಜಾ ವೆಂಕಟಪ್ಪ ನಾಯಕ್‌ ಅವರು ಆಪ್ತರಾಗಿದ್ದರು. ಕಾಂಗ್ರೆಸ್‌ ಪಕ್ಷದಿಂದ ತಮ್ಮ ರಾಜಕೀಯ ನೆಲೆಯನ್ನು ಕಂಡುಕೊಂಡಿದ್ದರು. ಒಮ್ಮೆ ಜೆಡಿಎಸ್‌ ಪಕ್ಷಕ್ಕೆ ವಲಸೆ ಹೋಗಿದ್ದರೂ ಕೂಡ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಮರಳಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ ಆಗಿದ್ದರು. ಕಳೆದ ಚುನಾವಣೆಯಲ್ಲಿ ಗೆದ್ದು ಬಿಜೆಪಿ ವಿರುದ್ದ ಸೇಡು ತೀರಿಸಿಕೊಂಡಿದ್ದರು.

Shorapur Congress MLA Raja Venkatappa Naik passed away heart attack
Image Credit to Original Source

ಇದನ್ನೂ ಓದಿ:  ಲೋಕಸಭೆ ಚುನಾವಣೆ 2024 : ಬಿಡುಗಡೆ ಆಯ್ತು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ

ಕರ್ನಾಟಕ ಕಾಂಗ್ರೆಸ್‌ ಸರಕಾರದಲ್ಲಿ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನರಾಗಿದ್ದಾರೆ. ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ವಿಧಿವಶರಾಗಿದ್ದಾರೆ.  ಕಾಂಗ್ರೆಸ್‌ ಸರಕಾರದ ಅವಧಿಯಲ್ಲಿ ಸಚಿವರಾಗುವ ಕುರಿತು ಕನಸು ಕಂಡಿದ್ದರು. ಆದರೆ ಕೊನೆಗೂ ತಮ್ಮಾಸೆ ಈಡೇರಲೇ ಇಲ್ಲ.

ಇದನ್ನೂ ಓದಿ:  ಈ ಮಹಿಳೆಯರಿಗೆ ಸಿಗಲ್ಲ ಗೃಹಲಕ್ಷ್ಮೀ ಯೋಜನೆಯ 6ನೇ ಕಂತಿನ ಹಣ

Shorapur Congress MLA Raja Venkatappa Naik passed away heart attack

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular