Siddaramaiah : 2023 ನೇ ಚುನಾವಣೆಯೇ ಕೊನೆ : ರಾಜಕೀಯ ನಿವೃತ್ತಿ ಘೋಷಿಸಿದ ಸಿದ್ಧರಾಮಯ್ಯ

ಬೆಂಗಳೂರು : ಒಂದೆಡೆ ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಯಾರು ಚರ್ಚೆ ಹಾಗೂ ಸಿಎಂ ಸ್ಥಾನಕ್ಕಾಗಿ ಮೇಲಾಟ ಆರಂಭವಾಗಿರುವಾಗಲೇ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕ, ಮೈಸೂರಿನ ಹುಲಿ ಸಿದ್ಧರಾಮಯ್ಯನವರು (Siddaramaiah ) ರಾಜಕೀಯ ನಿವೃತ್ತಿ ಮಾತನಾಡಿದ್ದಾರೆ. ಮೈಸೂರಿನ ಸಿದ್ಧರಾಮನ ಹುಂಡಿ ತಮ್ಮ ಹುಟ್ಟೂರಿನ ದೇವರ ಜಾತ್ರೆಯಲ್ಲಿ ಪಾಲ್ಗೊಂಡ ಸಿದ್ಧರಾಮಯ್ಯನವರು 2023 ನೇ ವಿಧಾನಸಭಾ ಚುನಾವಣೆ ನನ್ನ ಕೊನೆಯ ಚುನಾವಣೆ. ಇದಾದ ಬಳಿಕ‌ ನಾನು ಯಾವುದೇ ಚುನಾವಣಾ ರಾಜಕೀಯದಲ್ಲಿ ಪಾಲ್ಗೊಳ್ಳುವುದಿಲ್ಲ. ಆದರೆ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಎಂದು ಸಿದ್ಧರಾಮಯ್ಯ (Siddaramaiah ) ಸ್ಪಷ್ಟಪಡಿಸಿದ್ದಾರೆ.

ಹೌದು, 2023 ನೇ ವಿಧಾನಸಭಾ ಚುನಾವಣೆಯಲ್ಲಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೇರುವ‌ ಕನಸಿನಲ್ಲಿದೆ ಕಾಂಗ್ರೆಸ್. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲ ನಾಯಕರು ಪಕ್ಷವನ್ನು ಅಧಿಕಾರಕ್ಕೆ ತರಲು ಸರ್ಕಸ್‌ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಸ್ಥಾನಕ್ಕಾಗಿ ಸಿದ್ಧು ಹಾಗೂ ಡಿಕೆಶಿ ನಡುವೆ ಪೈಪೋಟಿ ನಡೆಯಿತ್ತಿ ರೋದು ಈಗ ಗುಪ್ತವಾಗಿಯೇನು ಉಳಿದಿಲ್ಲ. ಹೀಗಿರುವಾಗಲೆ ಸಿದ್ಧರಾಮಯ್ಯನವರು‌ (Siddaramaiah) ನಿವೃತ್ತಿಯ ಮಾತನಾಡಿರುವುದು ಹಲವು ಚರ್ಚೆಗಳನ್ನು ಹುಟ್ಟು ಹಾಕಿದೆ. ಮೂಲಗಳ ಮಾಹಿತಿ ಪ್ರಕಾರ ಮುಂದಿನ ಚುನಾವಣೆಯೇ ಕೊನೆಯ ಚುನಾವಣೆ ಎನ್ನುವ ಮೂಲಕ ಸಿದ್ಧರಾಮಯ್ಯ (Siddaramaiah) ಹೈಕಮಾಂಡ್ ಮೇಲೆ ಭಾವನಾತ್ಮಕ ಒತ್ತಡ ಹೇರುವ ಪ್ರಯತ್ನ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.

ಇನ್ನು ಸಿದ್ಧರಾಮಯ್ಯನವರು (Siddaramaiah) ತಾವು ಮುಂದಿನ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂಬ ಗುಟ್ಟು ಬಿಟ್ಟು ಕೊಟ್ಟಿಲ್ಲ. ಈ ಬಗ್ಗೆ ಮಾತನಾಡಿದ ಸಿದ್ದು, ಮುಂದಿನ ಚುನಾವಣೆ ಗೆ ಬಹಳಷ್ಟು ಕ್ಷೇತ್ರದ ನಾಯಕರು ತಮ್ಮಲ್ಲಿ ಸ್ಪರ್ಧಿಸುವಂತೆ ಕರೆಯುತ್ತಿದ್ದಾರೆ. ನಾನು ಇನ್ನೂ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂದು ನಿರ್ಧರಿಸಿಲ್ಲ. ಚುನಾವಣೆಗೆ ಇನ್ನೂ ಒಂದು ವರ್ಷವಿದೆ. ಈಗಲೇ ಈ ಬಗ್ಗೆ ತೀರ್ಮಾನ ಮಾಡಲ್ಲ ಎಂದಿದ್ದಾರೆ.

ಅಲ್ಲದೇ ಮೈಸೂರಿನ ವರುಣಾ, ಚಾಮುಂಡೇಶ್ವರಿ, ಹುಣಸೂರು ಕ್ಷೇತ್ರದಿಂದಲೂ ಸ್ಪರ್ಧಿಸುವಂತೆ ಒತ್ತಡವಿದೆ. ಆದರೆ ರಾಜಕೀಯ ಜನ್ಮ ಕೊಟ್ಟ ಚಾಮುಂಡೇಶ್ವರಿ ಕ್ಷೇತ್ರದ ಜನರೆ ನನ್ನನ್ನು ಸೋಲಿಸಿದರು. ಅವರು ನನ್ನ ಸೋಲಿಸಿದರು ಎಂದು ಅವರನ್ನು ದ್ವೇಷಿಸಲ್ಲ. ಈಗ ಅವರೇ ಮತ್ತೆ ಸ್ಪರ್ಧೆಗೆ ಕರೆಯುತ್ತಿದ್ದಾರೆ ಆದರೆ‌ ಮತ್ತೆ ಕ್ಷೇತ್ರಕ್ಕೆ ಮರಳುವ ಇಚ್ಛೆಯಿಲ್ಲ ಎಂದು ಸಿದ್ಧು ಸ್ಪಷ್ಟಪಡಿಸಿದ್ದಾರೆ. ಇನ್ನು ಬಿಜೆಪಿ ಕೆಲ ವಿವಾದ ಸೃಷ್ಟಿಸಿ ಮತ ಕ್ರೋಢೀಕರಣ ಮಾಡಲು ಯತ್ನಿಸುತ್ತಿದೆ. ಮುಸ್ಲಿಂರಿಗೆ ವ್ಯಾಪಾರಕ್ಕೆ ನಿರ್ಬಂಧ ಹಾಕಿರೋದು ತಪ್ಪು. ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ. ವ್ಯಾಪಾರಕ್ಕೆ ನಿರ್ಬಂಧ ಹಾಕುವುದರ ಹಿಂದೆ ಬಿಜೆಪಿಯ ಅಜೆಂಡಾ ಅಡಗಿದೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ :  ಮತ್ತೆ ಜೀವ ಪಡೆದುಕೊಂಡ ಸಂಪುಟ ಸರ್ಕಸ್ : ಎಪ್ರಿಲ್‌ 1ರಂದು ಕರ್ನಾಟಕಕ್ಕೆ ಅಮಿತ್ ಶಾ

ಇದನ್ನೂ ಓದಿ : ಮೇಕೆದಾಟು ವಿಚಾರವಾಗಿ ತಮಿಳುನಾಡಿನ ನಿರ್ಣಯ ಖಂಡಿಸಿದ ಸಿಎಂ ಬಸವರಾಜ್‌ ಬೊಮ್ಮಾಯಿ

( Siddaramaiah announces political retirement)

Comments are closed.