ಬೆಂಗಳೂರು : siddaramaiah dk shivakumar : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ರಾಜಕೀಯ ಕೆಸರೆರೆಚಾಟಕ್ಕೆ ವೇದಿಕೆ ಕಲ್ಪಿಸಿದಂತಾಗಿದೆ. ಸಂತೋಷ್ ಪಾಟೀಲ್ ಯಾರೆಂಬುದೇ ನನಗೆ ತಿಳಿದಿಲ್ಲ ಎನ್ನುವುದು ಸಚಿವ ಈಶ್ವರಪ್ಪ ವಾದವಾಗಿದ್ದರೆ 40 ಪರ್ಸೆಂಟ್ ಕಮಿಷನ್ ಕೇಳಿದ ಈಶ್ವರಪ್ಪರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಕಾಂಗ್ರೆಸ್ ಪಟ್ಟು ಹಿಡಿದಿದೆ. ಈ ಸಂಬಂಧ ಇಂದು ಪ್ರತಿಭಟನಾ ರ್ಯಾಲಿ ನಡೆಸಿದ ಕಾಂಗ್ರೆಸ್ ನಾಯಕರು ಸಿಎಂ ಬಸವರಾಜ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಿಂದ ರ್ಯಾಲಿ ನಡೆಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ವಿವಿಧ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರನ್ನು ರೇಸ್ ಕೋರ್ಸ್ ರಸ್ತೆಯಲ್ಲಿ ಪೊಲೀಸರು ತಡೆದಿದ್ದಾರೆ. ಕಾಲ್ನಡಿಗೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾಂಗ್ರೆಸ್ ನಾಯಕರು ಸಿಎಂ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲು ಯತ್ನಿಸುವುದು ಮೊದಲೇ ತಿಳಿದಿದ್ದ ಹಿನ್ನೆಲೆಯಲ್ಲಿ ಪೊಲೀಸರು ಕುಮಾರ ಕೃಪಾ ರಸ್ತೆಯಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಿದ್ದು ಮಾತ್ರವಲ್ಲದೇ ರೇಸ್ ಕೋರ್ಸ್ ರಸ್ತೆ ತುಂಬಾ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
ಪ್ರತಿಭಟನಾ ರ್ಯಾಲಿಯ ವೇಳೆ ಮಾತನಾಡಿದವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ, ಡಾ. ಬಿ.ಆರ್ ಅಂಬೇಡ್ಕರ್ ದೇಶದಲ್ಲಿ ಶ್ರೇಷ್ಠ ಸಂವಿಧಾನವನ್ನು ನೀಡಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಸಂವಿಧಾನಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು ಎಂದು ಹೇಳಿದರು.
ಇದೇ ವೇಳೆ ಮಾತನಾಡಿದ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್, ಕೆ. ಎಸ್ ಈಶ್ವರಪ್ಪರನ್ನು ಭ್ರಷ್ಟಾಚಾರದ ಪ್ರಕರಣದಲ್ಲಿ ಬಂಧಿಸಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲೇಬೇಕು ಎಂದು ಆಗ್ರಹಿಸಿದರು.
ಇದನ್ನು ಓದಿ : Santhosh Patil Suicide Case: ಸಂತೋಷ್ ಪಾಟೀಲ್ ಆತ್ಮಹತ್ಯೆ : ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ದ ಉಡುಪಿಯಲ್ಲಿ ಪ್ರಕರಣ ದಾಖಲು
ಇದನ್ನೂ ಓದಿ : IGP Devajyoti Ray : ಸಂತೋಷ್ ಆತ್ಮಹತ್ಯೆ ಪ್ರಕರಣ, ಎಲ್ಲಾ ಆಯಾಮದಲ್ಲಿಯೂ ತನಿಖೆ : ಪಶ್ಚಿಮ ವಲಯ ಐಜಿಪಿ
siddaramaiah dk-shivakumar try to gherav basavaraj bommai house urgng to dismissed of ks eshwarappa